T20 World Cup: ಈ 4 ತಂಡಗಳು ಸೆಮಿಫೈನಲ್‌ಗೇರಲಿವೆ ಎಂದ ಬ್ರಾಡ್ ಹಾಗ್..!

First Published | Oct 21, 2021, 5:50 PM IST

ಬೆಂಗಳೂರು: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್‌ (ICC T20 World Cup) ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಈಗಾಗಲೇ ಒಂದು ಕಡೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ನೇರ ಅರ್ಹತೆ ಅರ್ಹತೆ ಪಡೆದಿರುವ ತಂಡಗಳು ಅಭ್ಯಾಸ ಪಂದ್ಯಗಳನ್ನಾಡುತ್ತಿವೆ. ಇದರ ಬೆನ್ನಲ್ಲೇ ಈ ಬಾರಿ ಸೆಮಿಫೈನಲ್‌ ಪ್ರವೇಶಿಸಬಲ್ಲ ತಂಡಗಳು ಯಾವುವು ಎನ್ನುವ ಚರ್ಚೆ ಕೂಡಾ ಜೋರಾಗಿದೆ. ಹೀಗಿರುವಾಗಲೇ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಬ್ರಾಡ್‌ ಹಾಗ್ (Brad Hogg) ಈ ಬಾರಿ ಸೆಮಿಫೈನಲ್‌ ಪ್ರವೇಶಿಬಲ್ಲ ತಂಡಗಳು ಯಾವುವು ಎಂದು ಭವಿಷ್ಯ ನುಡಿದಿದ್ದಾರೆ. ಆದರೆ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಕ್ಕೆ ಹಾಗ್‌ ಸ್ಥಾನ ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ. 

ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಪಂದ್ಯಗಳು ಅಕ್ಟೋಬರ್ 23ರಿಂದ ಆರಂಭವಾಗಲಿದ್ದು, ಈ ಹೈವೋಲ್ಟೇಜ್ ಪಂದ್ಯಗಳನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಬರೋಬ್ಬರಿ 5 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟೂರ್ನಿಗೆ ಚಾಲನೆ ಸಿಕ್ಕಿದೆ. ಭಾರತದಲ್ಲಿ 2016ರಲ್ಲಿ ಕಡೆಯ ಬಾರಿಗೆ ಟಿ20 ವಿಶ್ವಕಪ್‌ ಟೂರ್ನಿ ಜರುಗಿತ್ತು. ಆ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಮಣಿಸಿದ ವೆಸ್ಟ್ ಇಂಡೀಸ್ ತಂಡವು ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

Latest Videos


ಇದೀಗ ಈ ಬಾರಿಯ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಬಲ್ಲ ತಂಡಗಳು ಯಾವುವು ಎನ್ನುವ ಚರ್ಚಗೆ ಆಸೀಸ್‌ ಮಾಜಿ ಕ್ರಿಕೆಟಿಗ ಬ್ರಾಡ್ ಹಾಗ್ ಭವಿಷ್ಯ ನುಡಿದಿದ್ದಾರೆ. ದೀಪ್ ದಾಸ್ ಗುಪ್ತಾ ಅವರ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಾಗ್‌ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಸೂಪರ್ 12 ಹಂತದ ಗ್ರೂಪ್‌ 1ನಿಂದ ಹಾಲಿಚಾಂಪಿಯನ್ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ಮತ್ತು ಗ್ರೂಪ್‌ 2ನಿಂದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ ಎಂದು ಹಾಗ್‌ ಭವಿಷ್ಯ ನುಡಿದಿದ್ದಾರೆ.

2016ರ ವಿಶ್ವಕಪ್ ಚಾಂಪಿಯನ್ ವಿಂಡೀಸ್‌ ಹಾಗೂ ರನ್ನರ್ ಅಪ್ ಇಂಗ್ಲೆಂಡ್ ಒಂದು ಕಡೆಯಾದರೆ, ಮಾಜಿ ಚಾಂಪಿಯನ್‌ಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಎರಡನೇ ಬಾರಿಗೆ ವಿಶ್ವಕಪ್ ಜಯಿಸಲು ತುದಿಗಾಲಿನಲ್ಲಿ ನಿಂತಿವೆ.

Australia cricket

ಬ್ರಾಡ್‌ ಹಾಗ್ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳನ್ನು ಕೈಬಿಟ್ಟಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಕೇನ್‌ ವಿಲಿಯಮ್ಸನ್‌ ನೇತೃತ್ವದ ನ್ಯೂಜಿಲೆಂಡ್ ತಂಡವು ಪ್ರಶಸ್ತಿ ಗೆಲ್ಲಬಲ್ಲ ನೆಚ್ಚಿನ ತಂಡಗಳಲ್ಲಿ ಒಂದು ಎಂದು ಗುರುತಿಸಿಕೊಂಡಿದೆ.

ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಅಕ್ಟೋಬರ್ 24ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದ್ದು, ಈ ಹೈವೋಲ್ಟೇಜ್ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಈ ಪಂದ್ಯ ನಡೆದ 2 ದಿನಗಳ ಬಳಿಕ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಪಾಕಿಸ್ತಾನ ಕ್ರಿಕೆಟ್ ತಂಡದ ಮೊದಲೆರಡು ಪಂದ್ಯಗಳಲ್ಲಿನ ಫಲಿತಾಂಶದ ಮೇಲೆ ಸೆಮಿಫೈನಲ್‌ ಹಾದಿ ನಿರ್ಧಾರವಾಗಲಿದೆ,

click me!