T20 World Cup: ಪಾಕಿಸ್ತಾನ ಎದುರಿನ ಪಂದ್ಯಕ್ಕೆ ಬಲಿಷ್ಠ ಟೀಂ ಇಂಡಿಯಾ ಹೆಸರಿಸಿದ ಗಂಭೀರ್

First Published | Sep 15, 2021, 5:49 PM IST

ನವದೆಹಲಿ: ಮುಂಬರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು, ಕ್ರಿಕೆಟ್‌ ಜ್ವರ ನಿಧಾನವಾಗಿ ಕಾವೇರ ತೊಡಗಿದೆ. ಯುಎಇ ಹಾಗೂ ಓಮನ್‌ನಲ್ಲಿ ಅಕ್ಟೋಬರ್ 17ರಿಂದ ಟಿ20 ವಿಶ್ವಕಪ್‌ ಟೂರ್ನಿ ಆರಂಭವಾಗಲಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಅಕ್ಟೋಬರ್ 24ರಂದು ಮೊದಲ ಪಂದ್ಯದಲ್ಲೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಪಾಕಿಸ್ತಾನ ವಿರುದ್ದದ ಪಂದ್ಯಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದ್ದಾರೆ. ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
 

1. ಕೆ.ಎಲ್‌. ರಾಹುಲ್‌: ಭಾರತ ತಂಡದ ಸ್ಪೋಟಕ ಆರಂಭಿಕ ಬ್ಯಾಟ್ಸ್‌ಮನ್‌. ಪರಿಸ್ಥಿತಿಗನುಗುಣವಾಗಿ ಬ್ಯಾಟ್‌ ಬೀಸುವ ಸಾಮರ್ಥ್ಯ ಹೊಂದಿರುವ ರಾಹುಲ್‌ಗೆ ಆರಂಭಿಕ ಸ್ಥಾನ ನೀಡಿದ್ದಾರೆ.

2. ರೋಹಿತ್ ಶರ್ಮಾ: ಹಿಟ್‌ಮ್ಯಾನ್‌ ಖ್ಯಾತಿಯ ರೋಹಿತ್ ಶರ್ಮಾ ಭಾರತದ ಪಾಲಿಗೆ ಅತ್ಯಂತ ನಂಬಿಕಸ್ಥ ಆರಂಭಿಕ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡಿದ್ದಾರೆ. ದೊಡ್ಡ ಇನಿಂಗ್ಸ್ ಕಟ್ಟುವ ಕ್ಷಮತೆ ರೋಹಿತ್‌ಗಿದೆ.

Tap to resize

3. ವಿರಾಟ್ ಕೊಹ್ಲಿ: ಟೀಂ ಇಂಡಿಯಾ ನಾಯಕ ಹಾಗೂ ರನ್‌ ಮಷೀನ್‌. ನಂ.3ನೇ ಕ್ರಮಾಂಕದಲ್ಲಿ ಲೀಲಾಜಾಲವಾಗಿ ರನ್‌ ಗಳಿಸುವ ಕೊಹ್ಲಿ ಮೇಲೆ ಈ ಬಾರಿ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆಯಿಟ್ಟುಕೊಂಡಿದ್ದಾರೆ.
 

4. ಸೂರ್ಯಕುಮಾರ್ ಯಾದವ್: ಭಾರತದ 360 ಖ್ಯಾತಿಯ ಬ್ಯಾಟ್ಸ್‌ಮನ್‌. ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ತೋರುವ ಮೂಲಕ ಟೀಂ ಇಂಡಿಯಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿರುವ ಸೂರ್ಯ, ಭಾರತದ ಮಧ್ಯಮ ಕ್ರಮಾಂಕದ ಆಧಾರಸ್ತಂಭ ಎನಿಸಿದ್ದಾರೆ.

5. ರಿಷಭ್‌ ಪಂತ್: ಟೀಂ ಇಂಡಿಯಾ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌. ಸ್ಪೋಟಕ ಬ್ಯಾಟಿಂಗ್‌ ಮೂಲಕ ಪಂದ್ಯದ ದಿಕ್ಕನ್ನೇ ಬದಲಾಯಿಸುವ ಸಾಮರ್ಥ್ಯ ರಿಷಭ್‌ ಪಂತ್‌ಗಿದೆ. 

6. ಹಾರ್ದಿಕ್‌ ಪಾಂಡ್ಯ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್ರೌಂಡರ್, ಡೆತ್‌ ಓವರ್‌ನಲ್ಲಿ ಸ್ಪೋಟಕ ರನ್‌ ಗಳಿಸುವ ಮೂಲಕ ತಂಡಕ್ಕೆ ಅಸರೆಯಾಗಬಲ್ಲ ಆಲ್ರೌಂಡರ್, ಇನ್ನು ಬೌಲಿಂಗ್‌ನಲ್ಲೂ ಉಪಯುಕ್ತ ಕಾಣಿಕೆ ನೀಡಬಲ್ಲ ಆಲ್ರೌಂಡರ್

7. ರವೀಂದ್ರ ಜಡೇಜಾ: ಟೀಂ ಇಂಡಿಯಾದ ಮತ್ತೋರ್ವ ಸ್ಟಾರ್ ಆಲ್ರೌಂಡರ್. ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡುವ ಕ್ಷಮತೆ ಹೊಂದಿರುವ ಆಲ್ರೌಂಡರ್
 

8. ಭುವನೇಶ್ವರ್ ಕುಮಾರ್: ಟೀಂ ಇಂಡಿಯಾ ಸ್ವಿಂಗ್ ಸ್ಪೆಷಲಿಸ್ಟ್ ವೇಗದ ಬೌಲರ್‌. ಪವರ್‌ ಪ್ಲೇ ಓವರ್‌ನಲ್ಲೇ ವಿಕೆಟ್‌ ಕಬಳಿಸುವ ಸಾಮರ್ಥ್ಯವಿರುವ ವೇಗದ ಬೌಲರ್. ಅಗತ್ಯವಿದ್ದರೆ ಬ್ಯಾಟಿಂಗ್‌ನಲ್ಲೂ ರನ್‌ ಗಳಿಸುವ ಸಾಮರ್ಥ್ಯ ಭುವಿಗಿದೆ.

9. ವರುಣ್‌ ಚಕ್ರವರ್ತಿ: ಟೀಂ ಇಂಡಿಯಾ ಮಿಸ್ಟ್ರಿ ಸ್ಪಿನ್ನರ್. ರವಿಚಂದ್ರನ್ ಅಶ್ವಿನ್ ಬದಲಿಗೆ ಗಂಭೀರ್ ಯುವ ಸ್ಪಿನ್ನರ್ ವರುಣ್‌ ಚಕ್ರವರ್ತಿಗೆ ಮಣೆ ಹಾಕಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.
 

10. ಮೊಹಮ್ಮದ್ ಶಮಿ: ಟೀಂ ಇಂಡಿಯಾ ಅನುಭವಿ ವೇಗಿ. ಅಗತ್ಯ ಸಂದರ್ಭದಲ್ಲಿ ವಿಕೆಟ್‌ ಕಬಳಿಸುವ ಶಮಿ, ಎದುರಾಳಿ ತಂಡದ ರನ್‌ ವೇಗಕ್ಕೂ ಕಡಿವಾಣ ಹಾಕುವ ಸಾಮರ್ಥ್ಯ ಮೊಹಮ್ಮದ್ ಶಮಿಗಿದೆ.
 

11. ಜಸ್ಪ್ರೀತ್ ಬುಮ್ರಾ: ಟೀಂ ಇಂಡಿಯಾ ಯಾರ್ಕರ್‌ ಸ್ಪೆಷಲಿಸ್ಟ್‌. ಭಾರತ ತಂಡದ ಡೆತ್ ಓವರ್ ಸ್ಪೆಷಲಿಸ್ಟ್ ಆಗಿ ಗುರುತಿಸಿಕೊಂಡಿರುವ ಬುಮ್ರಾ, ತಮ್ಮ ಕರಾರುವಕ್ಕಾದ ಯಾರ್ಕರ್ ದಾಳಿ ನಡೆಸುವ ಮೂಲಕ ಎದುರಾಳಿ ಬ್ಯಾಟ್ಸ್‌ಮನ್‌ಗಳನ್ನು ತಬ್ಬಿಬ್ಬುಗೊಳಿವ ಕ್ಷಮತೆ ಬುಮ್ರಾಗಿದೆ.

Latest Videos

click me!