T20 World Cup: ಜೇಸನ್‌ ರಾಯ್‌ ಬದಲಿಗೆ ಇಂಗ್ಲೆಂಡ್ ತಂಡ ಕೂಡಿಕೊಂಡ ಸ್ಪೋಟಕ ಬ್ಯಾಟರ್‌..!

Suvarna News   | Asianet News
Published : Nov 10, 2021, 11:54 AM IST

ದುಬೈ: ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯು ಮಹತ್ವದ ಘಟ್ಟ ತಲುಪಿದ್ದು, ಸೆಮಿಫೈನಲ್‌ ಪಂದ್ಯಗಳಿಗೆ ಕ್ಷಣಗಣನೆ ಆರಂಭವಾಗಿದೆ. ಇಯಾನ್‌ ಮಾರ್ಗನ್ (Eoin Morgan) ನೇತೃತ್ವದ ಇಂಗ್ಲೆಂಡ್ ತಂಡಕ್ಕೆ (England Cricket Team) ಮಹತ್ವದ ಪಂದ್ಯಕ್ಕೂ ಮುನ್ನ ಆಘಾತ ಎದುರಾಗಿದ್ದು, ಸ್ಫೋಟಕ ಆರಂಭಿಕ ಬ್ಯಾಟರ್‌ ಜೇಸನ್ ರಾಯ್ (Jason Roy) ತಂಡದಿಂದ ಹೊರಬಿದ್ದಿದ್ದರು. ಇದೀಗ ರಾಯ್ ಬದಲಿಗೆ ಮತ್ತೋರ್ವ ಬ್ಯಾಟರ್ ಇಂಗ್ಲೆಂಡ್ ಕ್ರಿಕೆಟ್ ತಂಡ ಕೂಡಿಕೊಂಡಿದ್ದಾರೆ. ಯಾರು ಆ ಆಟಗಾರ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.  

PREV
18
T20 World Cup: ಜೇಸನ್‌ ರಾಯ್‌ ಬದಲಿಗೆ ಇಂಗ್ಲೆಂಡ್ ತಂಡ ಕೂಡಿಕೊಂಡ ಸ್ಪೋಟಕ ಬ್ಯಾಟರ್‌..!
england win

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಯಾನ್ ಮಾರ್ಗನ್ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡವು ಈಗಾಗಲೇ ಸೆಮಿಫೈನಲ್ ಪ್ರವೇಶಿಸಿದ್ದು, ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದು ಎಂದು ಗುರುತಿಸಿಕೊಂಡಿದೆ.

28

ಯುಎಇನಲ್ಲಿ ನಡೆಯುತ್ತಿರುವ ಸೂಪರ್ 12 ಹಂತದ ಪಂದ್ಯಾವಳಿಗಳಲ್ಲಿ ಇಂಗ್ಲೆಂಡ್ ತಂಡವು 5 ಪಂದ್ಯಗಳನ್ನಾಡಿ 4 ಗೆಲುವು ಹಾಗೂ 1 ಸೋಲು ಕಂಡಿದ್ದು, ಗ್ರೂಪ್‌ 1 ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

38

ಇನ್ನು ಸೂಪರ್ 12 ಹಂತದಲ್ಲಿ ಇಂಗ್ಲೆಂಡ್ ಪಾಲಿನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎದುರು ರೋಚಕ ಸೋಲು ಕಂಡಿತ್ತು. ಇನ್ನು ಇದೇ ಪಂದ್ಯದಲ್ಲಿ ಇಂಗ್ಲೆಂಡ್‌ ಸ್ಫೋಟಕ ಬ್ಯಾಟರ್‌ ಜೇಸನ್ ರಾಯ್ ಸ್ನಾಯು ಸೆಳೆತದ ಗಾಯಕ್ಕೆ ಒಳಗಾಗಿ ತಂಡದಿಂದ ಹೊರಬಿದ್ದಿದ್ದರು.

48

ಜೇಸನ್‌ ರಾಯ್‌ ತಂಡದಿಂದ ಹೊರಬಿದ್ದಿದ್ದು ಇಂಗ್ಲೆಂಡ್ ಪಾಲಿಗೆ ದೊಡ್ಡ ಹಿನ್ನೆಡೆಯಾಗುವ ಸಾಧ್ಯತೆಯಿದೆ. ಇದೀಗ ರಾಯ್ ಬದಲಿಗೆ ಮತ್ತೋರ್ವ ಸ್ಫೋಟಕ ಬ್ಯಾಟರ್‌ ಜೇಮ್ಸ್ ವಿನ್ಸ್‌ ಇಂಗ್ಲೆಂಡ್ ತಂಡ ಕೂಡಿಕೊಂಡಿದ್ದಾರೆ.

58

ಇಂಗ್ಲೆಂಡ್ ತಂಡ ಕೂಡಿಕೊಳ್ಳಲು ಜೇಮ್ಸ್‌ ವಿನ್ಸ್‌ಗೆ ಅಂತಾರಾಷ್ಟ್ರೀಯ ಕ್ರಿಕೆಟ್ ತಾಂತ್ರಿಕ ಸಲಹಾ ಸಮಿತಿ ಅನುಮತಿ ನೀಡಿದೆ. ವಿನ್ಸ್‌ ಇಂಗ್ಲೆಂಡ್ ಪರ ಇದುವರೆಗೂ 13 ಟೆಸ್ಟ್, 19 ಏಕದಿನ ಹಾಗೂ 13 ಟಿ20 ಪಂದ್ಯಗಳನ್ನಾಡಿದ್ದಾರೆ.

68

ಜೇಮ್ಸ್ ವಿನ್ಸ್‌ ಈ ಮೊದಲು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡದ ಮೀಸಲು ಆಟಗಾರರಾಗಿ ಸ್ಥಾನ ಪಡೆದಿದ್ದರು. ಇದೀಗ ಜೇಸನ್ ರಾಯ್ ತಂಡದಿಂದ ಹೊರಬೀಳುತ್ತಿದ್ದಂತೆಯೇ ವಿನ್ಸ್‌ಗೆ ಅದೃಷ್ಟ ಖುಲಾಯಿಸಿದೆ.

78

ಇದೀಗ ಮಾರ್ಗನ್ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡವು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯಕ್ಕೆ ಅಬುಧಾಬಿಯ ಶೇಕ್ ಜಾಯೆದ್ ಮೈದಾನ ಆತಿಥ್ಯವನ್ನು ವಹಿಸಲಿದೆ.

88

2019ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲೂ ಈ ಎರಡು ತಂಡಗಳು ಸೆಣಸಾಡಿದ್ದವು, ಬೌಂಡರಿ ಕೌಂಟ್ ನಿಯಮದನ್ವಯ ಇಂಗ್ಲೆಂಡ್ ಗೆಲುವಿನ ನಗೆ ಬೀರಿತ್ತು. ಇದೀಗ ಟಿ20 ವಿಶ್ವಕಪ್ ಸೆಮೀಸ್‌ನಲ್ಲಿ ಯಾರ ಕೈ ಮೇಲಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Read more Photos on
click me!

Recommended Stories