T20 World Cup: Aus vs Pak ಆಸೀಸ್ ಎದುರಿನ ಪಂದ್ಯಕ್ಕೂ ಪಾಕಿಸ್ತಾನ ತಂಡಕ್ಕೆ ದೊಡ್ಡ ಶಾಕ್‌..!

Suvarna News   | Asianet News
Published : Nov 11, 2021, 04:32 PM IST

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್‌ (ICC T20 World Cup) ಟೂರ್ನಿಯ ಎರಡನೇ ಸೆಮಿಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಫೈನಲ್‌ ಸ್ಥಾನಕ್ಕಾಗಿ ಆಸ್ಟ್ರೇಲಿಯಾ (Australia Cricket Team) ಹಾಗೂ ಪಾಕಿಸ್ತಾನ (Pakistan Cricket Team) ತಂಡಗಳು ಕಾದಾಡಲಿವೆ. ಆಸ್ಟ್ರೇಲಿಯಾ ಎದುರಿನ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಅಷ್ಟಕ್ಕೂ ಪಾಕ್‌ ತಂಡದಲ್ಲಿ ಏನಾಯ್ತು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

PREV
17
T20 World Cup: Aus vs Pak ಆಸೀಸ್ ಎದುರಿನ ಪಂದ್ಯಕ್ಕೂ ಪಾಕಿಸ್ತಾನ ತಂಡಕ್ಕೆ ದೊಡ್ಡ ಶಾಕ್‌..!

ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಕ್ರಿಕೆಟ್‌ ತಂಡವು ಅಧ್ಭುತ ಪ್ರದರ್ಶನ ತೋರುವ ಮೂಲಕ ಅಜೇಯವಾಗಿ ಸೆಮಿಫೈನಲ್‌ ಪ್ರವೇಶಿಸಿದ್ದು, ಎರಡನೇ ಬಾರಿಗೆ ಕಪ್ ಗೆಲ್ಲುವ ಕನಸು ಕಾಣುತ್ತಿದೆ.

27

ಸೂಪರ್ 12 ಹಂತದಲ್ಲಿ ಬಲಿಷ್ಠ ಟೀಂ ಇಂಡಿಯಾ, ನ್ಯೂಜಿಲೆಂಡ್ ಸೇರಿದಂತೆ ಎಲ್ಲಾ 5 ತಂಡಗಳ ವಿರುದ್ದ ಭರ್ಜರಿ ಗೆಲುವು ಸಾಧಿಸಿರುವ ಪಾಕಿಸ್ತಾನ ಕ್ರಿಕೆಟ್ ತಂಡವು ಇದೀಗ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡದ ಸವಾಲನ್ನು ಸ್ವೀಕರಿಸಲು ಸಜ್ಜಾಗಿದೆ.

37

ಇದೀಗ ಆಸ್ಟ್ರೇಲಿಯಾ ವಿರುದ್ದ ಎರಡನೇ ಸೆಮಿಫೈನಲ್ ಪಂದ್ಯವು ದುಬೈನ ಅಂತಾರಾಷ್ಟ್ರೀಯ ಮೈದಾನದಲ್ಲಿ ನಡೆಯಲಿದ್ದು, ಈ ಪಂದ್ಯ ಆರಂಭಕ್ಕೂ ಮುನ್ನ ಪಾಕಿಸ್ತಾನ ಕ್ರಿಕೆಟ್ ತಂಡದ ಪಾಳಯದಲ್ಲಿ ಆತಂಕ ಮನೆ ಮಾಡಿದೆ.

47

ಹೌದು, ಪಾಕಿಸ್ತಾನ ಕ್ರಿಕೆಟ್ ತಂಡದ ವಿಕೆಟ್‌ ಕೀಪರ್ ಮೊಹಮ್ಮದ್ ರಿಜ್ವಾನ್ ಹಾಗೂ ಅನುಭವಿ ಆಟಗಾರ ಶೋಯೆಬ್ ಮಲಿಕ್‌ ಅವರಿಗೆ ಕೊಂಚ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದೆ. 

57

ಹೀಗಾಗಿ ಅಸ್ಟ್ರೇಲಿಯಾ ವಿರುದ್ದದ ಸೆಮಿಫೈನಲ್‌ ಪಂದ್ಯದಿಂದ ಮೊಹಮ್ಮದ್ ರಿಜ್ವಾನ್‌ ಹಾಗೂ ಶೋಯೆಬ್ ಮಲಿಕ್ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ ಎಂದು ವರದಿಯಾಗಿದೆ.

67

ಒಂದು ವೇಳೆ ಈ ಇಬ್ಬರು ಆಟಗಾರರು ಸೆಮೀಸ್ ಪಂದ್ಯದಿಂದ ಹೊರಗುಳಿದರೆ, ಮಾಜಿ ನಾಯಕ ಸರ್ಫರಾಜ್ ಖಾನ್ ವಿಕೆಟ್ ಕೀಪರ್ ಪಾತ್ರದಲ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಶೋಯೆಬ್ ಮಲಿಕ್ ಬದಲಿಗೆ ಹೈದರ್‌ ಅಲಿ ತಂಡ ಕೂಡಿಕೊಳ್ಳಬಹುದು.

77

ಮೊಹಮ್ಮದ್ ರಿಜ್ವಾನ್ ಹಾಗೂ ಶೋಯೆಬ್ ಮಲಿಕ್ ಈಗಾಗಲೇ ಅದ್ಭುತ ಫಾರ್ಮ್‌ ಹೊಂದಿದ್ದು, ಪಾಕ್ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಒಂದು ವೇಳೆ ಈ ಇಬ್ಬರು ಆಟಗಾರರು ತಂಡದಿಂದ ಹೊರಬಿದ್ದರೆ, ಪಾಕ್‌ ತಂಡಕ್ಕೆ ಸೆಮೀಸ್‌ನಲ್ಲಿ ಹಿನ್ನೆಡೆಯಾಗುವ ಸಾಧ್ಯತೆ ಹೆಚ್ಚು.

Read more Photos on
click me!

Recommended Stories