T20 World Cup ನಾಯಕನಾಗಿ ವಿರಾಟ್ ಕೊಹ್ಲಿ ದಾಖಲೆ ಮುರಿದ ಬಾಬರ್‌ ಅಜಂ..!

First Published | Oct 30, 2021, 2:18 PM IST

ದುಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಬಾಬರ್ ಅಜಂ (Babar Azam) ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡವು (Pakistan Cricket Team) ಅದ್ಭುತ ಪ್ರದರ್ಶನ ನೀಡುತ್ತಾ ಸಾಗುತ್ತಿದ್ದು, ಸೆಮೀಸ್‌ಗೇರುವುದು ಬಹುತೇಕ ಖಚಿತ ಎನಿಸಿದೆ. ಸೂಪರ್‌ 12 ಹಂತದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಇದೇ ವೇಳೆ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ, ಟೀಂ ಇಂಡಿಯಾ (Team India) ನಾಯಕರಾಗಿರುವ ವಿರಾಟ್ ಕೊಹ್ಲಿ (Virat Kohli) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಆಫ್ಘಾನಿಸ್ತಾನ ವಿರುದ್ದ ನಡೆದ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು 5 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಬಾಬರ್ ಅಜಂ ಪಡೆ ಹ್ಯಾಟ್ರಿಕ್ ಗೆಲುವು ಸಾಧಿಸಿದೆ

ಮೊದಲು ಬ್ಯಾಟಿಂಗ್‌ ಮಾಡಿದ್ದ ಆಫ್ಘಾನಿಸ್ತಾನ 6 ವಿಕೆಟ್ ಕಳೆದುಕೊಂಡು 147 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಪಾಕಿಸ್ತಾನ ಒಂದು ಹಂತದಲ್ಲಿ ಕೊನೆಯ 2 ಓವರ್‌ನಲ್ಲಿ ಗೆಲ್ಲಲು 24 ರನ್‌ಗಳ ಅಗತ್ಯವಿತ್ತು. ಆದರೆ 19ನೇ ಓವರ್‌ನಲ್ಲಿ ಆಸಿಫ್ ಅಲಿ 4 ಸಿಕ್ಸರ್ ಸಿಡಿಸುವ ಮೂಲಕ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು.
 

Tap to resize

ಇದಕ್ಕೂ ಮೊದಲು ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಕ್ರಿಕೆಟ್ ತಂಡವು ನೆರೆಯ ಪಾಕಿಸ್ತಾನ ವಿರುದ್ದ 10 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿತ್ತು. ಇನ್ನು ಎರಡನೇ ಪಂದ್ಯದಲ್ಲಿ ಕೂಡಾ ನ್ಯೂಜಿಲೆಂಡ್ ಎದುರು ಸುಲಭ ಜಯ ದಾಖಲಿಸಿತ್ತು.

Babar Azam

ಇನ್ನು ಆಫ್ಘಾನಿಸ್ತಾನ ವಿರುದ್ದ ಪಂದ್ಯದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಂ ಕೇವಲ 45 ಎಸೆತಗಳಲ್ಲಿ 51 ರನ್ ಬಾರಿಸುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಇದೇ ವೇಳೆ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ ಅಪರೂಪದ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 

ಹೌದು, ಬಾಬರ್ ಅಜಂ ಟಿ20 ಕ್ರಿಕೆಟ್‌ನಲ್ಲಿ ಅತಿವೇಗವಾಗಿ ಒಂದು ಸಾವಿರ ರನ್‌ ಪೂರೈಸಿದ ನಾಯಕ ಎನ್ನುವ ಕೀರ್ತಿಗೆ ಭಾಜನರಾಗಿದ್ದಾರೆ. ನಾಯಕನಾಗಿ 26 ಇನಿಂಗ್ಸ್‌ಗಳನ್ನಾಡಿ ಬಾಬರ್ ಅಜಂ 1,000 ರನ್‌ ಪೂರೈಸಿದ್ದಾರೆ.

ಇದಕ್ಕೂ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 30 ಇನಿಂಗ್ಸ್‌ಗಳನ್ನು ತೆಗೆದುಕೊಂಡು 1,000 ಟಿ20 ಬಾರಿಸಿದ್ದರು. ಇದೀಗ ಆ ದಾಖಲೆ ಪಾಕ್‌ ನಾಯಕ ಬಾಬರ್ ಅಜಂ ಪಾಲಾಗಿದೆ.

Aaron Finch Virat Kohli

ಇನ್ನುಳಿದಂತೆ ದಕ್ಷಿಣ ಆಫ್ರಿಕಾದ ಫಾಫ್ ಡು ಪ್ಲೆಸಿಸ್ (31 ಇನಿಂಗ್ಸ್), ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ (32 ಇನಿಂಗ್ಸ್)  ಹಾಗೂ ನ್ಯೂಜಿಲೆಂಡ್‌ ನಾಯಕ ಕೇನ್ ವಿಲಿಯಮ್ಸ್ 36 ಇನಿಂಗ್ಸ್‌ಗಳನ್ನಾಡಿ 1,000 ರನ್ ಪೂರೈಸಿದ್ದರು.

ಮೊದಲ 3 ಪಂದ್ಯಗಳಲ್ಲಿ ಬಲಿಷ್ಠ ತಂಡಗಳನ್ನು ಮಣಿಸಿ ಬೀಗುತ್ತಿರುವ ಪಾಕಿಸ್ತಾನ ತಂಡವು ಇನ್ನುಳಿದ ಎರಡು ಪಂದ್ಯಗಳಲ್ಲಿ ಕ್ರಿಕೆಟ್ ಶಿಶುಗಳಾದ ನಮೀಬಿಯಾ ಹಾಗೂ ಸ್ಕಾಟ್ಲೆಂಡ್ ತಂಡವನ್ನು ಎದುರಿಸಲಿದೆ.

pakistan win

ಸದ್ಯದ ಪಾಕಿಸ್ತಾನ ಕ್ರಿಕೆಟ್ ತಂಡದ ಪ್ರದರ್ಶನವನ್ನು ಗಮನಿಸಿದರೆ, ಸೂಪರ್ 12 ಹಂತದ ಇನ್ನುಳಿದ ಎರಡು ಪಂದ್ಯಗಳನ್ನು ಗೆದ್ದು ಅಜೇಯವಾಗಿ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್‌ಗೆ ಲಗ್ಗೆಯಿಡುವ ಸಾಧ್ಯತೆ ಬಹುತೇಕ ದಟ್ಟವಾಗಿದೆ.

Latest Videos

click me!