Virat Kohli-Babar Azam
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತಾನಾಡಿದ ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳ ಅಂತರದ ಆಘಾತಕಾರಿ ಸೋಲು ಕಾಣುವ ಮೂಲಕ ಕೊಂಚ ಒತ್ತಡಕ್ಕೆ ಸಿಲುಕಿದೆ.
ಶಾಹೀನ್ ಅಫ್ರಿದಿ ಮಾರಕ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ಗಳು ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ವಿರಾಟ್ ಕೊಹ್ಲಿಯನ್ನು ಸಹ ಪೆವಿಲಿಯನ್ನಿಗಟ್ಟುವಲ್ಲಿ ಶಾಹೀನ್ ಅಫ್ರಿದಿ ಯಶಸ್ವಿಯಾಗಿದ್ದರು.
shaheen afridi
ಇದಾದ ಬಳಿಕ ನ್ಯೂಜಿಲೆಂಡ್ ತಂಡ ಕೂಡಾ ಪಾಕಿಸ್ತಾನಕ್ಕೆ ಶರಣಾಗಿತ್ತು. ಹೀಗಾಗಿ ಇಂದು(ಅ.31) ದುಬೈನಲ್ಲಿ ನಡೆಯಲಿರುವ ಪಂದ್ಯವು ಭಾರತ ಹಾಗೂ ನ್ಯೂಜಿಲೆಂಡ್ ಪಾಲಿಗೆ ಒಂದು ರೀತಿ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ.
ಟೀಂ ಇಂಡಿಯಾ ಎದುರಿನ ಪಂದ್ಯ ಆರಂಭಕ್ಕೂ ಮುನ್ನ ನಡೆಸಿದ ಮಾಧ್ಯಮ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಿವೀಸ್ ಎಡಗೈ ವೇಗಿ ಟ್ರೆಂಟ್ ಬೌಲ್ಟ್, ಪಾಕಿಸ್ತಾನದ ಯುವ ವೇಗಿ ಶಾಹೀನ್ ಶಾ ಅಫ್ರಿದಿ ಬೌಲಿಂಗ್ ಪ್ರದರ್ಶನವನ್ನು ಗುಣಗಾನ ಮಾಡಿದ್ದರು.
ಇದೇ ವೇಳೆ ಭಾರತ ವಿರುದ್ದ ಪಂದ್ಯದಲ್ಲಿ ಶಾಹೀನ್ ಶಾ ಅಫ್ರಿದಿ ಅವರನ್ನು ಪ್ರತಿಫಲಿಸುವಂತೆ ಬೌಲಿಂಗ್ ಪ್ರದರ್ಶನ ಮಾಡುವುದಾಗಿ ಟ್ರೆಂಟ್ ಬೌಲ್ಟ್ ವಿರಾಟ್ ಕೊಹ್ಲಿ ಪಡೆಗೆ ಎಚ್ಚರಿಕೆಯನ್ನು ನೀಡಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ನಮ್ಮ ಹುಡುಗರು ಗೆಲ್ಲಲು ಪ್ರೇರೇಪಣೆ ಪಡೆದುಕೊಂಡಿದ್ದಾರೆ. ಅದರ ಜತೆಗೆ ಟ್ರೆಂಟ್ ಬೌಲ್ಟ್‌ಗೆ ಕೌಂಟರ್ ಅಟ್ಯಾಕ್ ಮಾಡಲು ಸಜ್ಜಾಗಿದೆ. ನಿಜಕ್ಕೂ ಈಗ ಒತ್ತಡವಿರುವುದು ಭಾರತದ ಮೇಲಲ್ಲ ಬದಲಾಗಿ ಬೌಲ್ಟ್ ಮೇಲೆ ಹೆಚ್ಚಿನ ಒತ್ತಡವಿದೆ ಎಂದಿದ್ದಾರೆ.
ms dhoni mentor మొదటి ఓవర్లోనే రోహిత్ శర్మ డకౌట్ కావడం, కెఎల్ రాహుల్ మూడు పరుగులకే పెవిలియన్ చేరడంతో టీమిండియా ఫెయిల్యూర్ ఫిక్స్ కావడంతో కెమెరాల్లో ఎక్కడా మెంటర్ మాహీ కనిపించలేదు...