Published : Aug 11, 2022, 12:46 PM ISTUpdated : Aug 11, 2022, 12:48 PM IST
ಬೆಂಗಳೂರು: ವೆಸ್ಟ್ ಇಂಡೀಸ್ ಎದುರಿನ ಸೀಮಿತ ಓವರ್‌ಗಳ ಸರಣಿಯನ್ನು ಗೆದ್ದು ಬೀಗುತ್ತಿರುವ ಟೀಂ ಇಂಡಿಯಾ, ಇದೀಗ ಜಿಂಬಾಬ್ವೆ ಪ್ರವಾಸಕ್ಕೆ ಸಜ್ಜಾಗುತ್ತಿದೆ. ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾ, ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಹೀಗಿರುವಾಗಲೇ ಟೀಂ ಇಂಡಿಯಾದ ತಾರಾ ಆಲ್ರೌಂಡರ್ ಭುಜದ ನೋವಿಗೆ ತುತ್ತಾಗಿರುವುದು ತಂಡದ ತಲೆನೋವು ಹೆಚ್ಚುವಂತೆ ಮಾಡಿದೆ.
ವೆಸ್ಟ್ ಇಂಡೀಸ್ ಎದುರಿನ 3 ಪಂದ್ಯಗಳ ಏಕದಿನ ಸರಣಿಯನ್ನು ಹಾಗೂ 5 ಪಂದ್ಯಗಳ ಟಿ20 ಸರಣಿಯನ್ನು ಗೆದ್ದು ಬೀಗಿದ ಟೀಂ ಇಂಡಿಯಾ, ಇದೀಗ ಆಗಸ್ಟ್ 18ರಿಂದ ಆರಂಭವಾಗಲಿರುವ ಜಿಂಬಾಬ್ವೆ ಎದುರಿನ 3 ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗುತ್ತಿದೆ.
27
ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ, ಜಿಂಬಾಬ್ವೆ ಪ್ರವಾಸಕ್ಕೆ ಶಿಖರ್ ಧವನ್‌ಗೆ ಭಾರತ ಏಕದಿನ ಕ್ರಿಕೆಟ್ ತಂಡದ ನಾಯಕತ್ವ ಪಟ್ಟ ಕಟ್ಟಲಾಗಿದೆ.
37
ಇನ್ನು ಜಿಂಬಾಬ್ವೆ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿರುವ ಸ್ಟಾರ್ ಆಲ್ರೌಂಡರ್, ವಾಷಿಂಗ್ಟನ್ ಸುಂದರ್, ಮ್ಯಾಂಚೆಸ್ಟರ್‌ನಲ್ಲಿ ರಾಯಲ್ ಲಂಡನ್ ಏಕದಿನ ಟೂರ್ನಿಯಲ್ಲಿ ಪಾಲ್ಗೊಂಡಿದ್ದು, ಇದೀಗ ಭುಜದ ನೋವಿಗೆ ತುತ್ತಾಗಿದ್ದಾರೆ.
47
ಇಂಗ್ಲೆಂಡ್‌ನ ಕೌಂಟಿ ತಂಡವಾದ ಲ್ಯಾನ್ಸ್‌ಶೈರ್ ತಂಡವನ್ನು ಪ್ರತಿನಿಧಿಸುತ್ತಿರುವ ವಾಷಿಂಗ್ಟನ್ ಸುಂದರ್ ಅವರು ಕ್ಷೇತ್ರರಕ್ಷಣೆ ವೇಳೆ ಭುಜದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈದಾನ ತೊರೆದು, ಚಿಕಿತ್ಸೆ ಪಡೆಯುತ್ತಿರುವುದಾಗಿ ಲ್ಯಾನ್ಸ್‌ಶೈರ್ ತಂಡ ಟ್ವೀಟ್ ಮೂಲಕ ತಿಳಿಸಿದೆ.
57
ವಾಷಿಂಗ್ಟನ್ ಅವರಿಗೆ ಆದ ಗಾಯದ ಪ್ರಮಾಣದ ಬಗ್ಗೆ ಸದ್ಯ ಸ್ಪಷ್ಟ ಮಾಹಿತಿಯಿಲ್ಲ. ಆದರೆ ಈ ಗಾಯದಿಂದಾಗಿ ಸುಂದರ್, ಜಿಂಬಾಬ್ವೆ ಎದುರಿನ ಸರಣಿಯಿಂದ ಹೊರಬೀಳುವ ಆತಂಕಕ್ಕೆ ಸಿಲುಕಿದ್ದಾರೆ.
67
ವಾಷಿಂಗ್ಟನ್ ಸುಂದರ್, ಕಳೆದ ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ಎದುರು ಕೊನೆಯ ಬಾರಿಗೆ ಟೀಂ ಇಂಡಿಯಾ ಪರ ಏಕದಿನ ಪಂದ್ಯವನ್ನಾಡಿದ್ದರು. ಇದಾದ ಬಳಿಕ ಫಿಟ್ನೆಸ್ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ಪದೇ ಪದೇ ವಿಫಲರಾಗುತ್ತಲೇ ಬಂದಿದ್ದಾರೆ.
77
ವಾಷಿಂಗ್ಟನ್ ಸುಂದರ್, ಕಳೆದ ಫೆಬ್ರವರಿಯಲ್ಲಿ ವೆಸ್ಟ್ ಇಂಡೀಸ್ ಎದುರು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಂಡಿದ್ದರು. ಇದಾದ ಬಳಿಕ ಸ್ನಾಯುಸೆಳೆತಕ್ಕೆ ಒಳಗಾಗಿ ಟಿ20 ಸರಣಿಯಿಂದ ಹೊರಬಿದ್ದಿದ್ದರು.