ಕ್ರಿಕೆಟ್ ಮಾತ್ರವಲ್ಲ Instagram ನಲ್ಲೂ ವಿರಾಟ್ ಕೊಹ್ಲಿಯೇ ಕಿಂಗ್..!

First Published | Oct 22, 2021, 5:32 PM IST

ಬೆಂಗಳೂರು: ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯ ಸೂಪರ್‌ 12 ಹಂತದ ಪಂದ್ಯಗಳಿಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 23ರಿಂದ ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಲಿದ್ದು, ವಿರಾಟ್ ಕೊಹ್ಲಿ (Virat Kohli) ನೇತೃತ್ವದ ಟೀಂ ಇಂಡಿಯಾ (Team India) ಅಕ್ಟೋಬರ್ 24ರಂದು ಪಾಕಿಸ್ತಾನವನ್ನು ಎದುರಿಸುವ ಮೂಲಕ ಟಿ20 ವಿಶ್ವಕಪ್ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದೇ ವೇಳೆ ವಿರಾಟ್ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂ (Instagram) ನಲ್ಲಿ ಹೊಸ ಮೈಲಿಗಲ್ಲು ನೆಡಲು ಸಜ್ಜಾಗಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ. 

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಕಿಂಗ್ ಕೊಹ್ಲಿ ಎಂದು ಗುರುತಿಸಿಕೊಂಡಿದ್ದಾರೆ. ಇದೀಗ ವಿರಾಟ್ ಕೊಹ್ಲಿ ಪಡೆ ಟಿ20 ವಿಶ್ವಕಪ್ ಟೂರ್ನಿಗೆ ಸಜ್ಜಾಗಿದೆ.

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ವಿರಾಟ್ ಕೊಹ್ಲಿಯವರ ಹಿಂಬಾಲಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದು ಯಾವ ಮಟ್ಟಿಗೆ ಹೆಚ್ಚಾಗುತ್ತಿದೆ ಎಂದರೆ ಬ್ರೆಜಿಲ್‌ನ ಫುಟ್ಬಾಲ್ ತಾರೆ ಜೂನಿಯರ್ ನೇಮರ್ ಅವರನ್ನು ಹಿಂದಿಕ್ಕು ಸಮೀಪಕ್ಕೆ ವಿರಾಟ್ ಕೊಹ್ಲಿ ಬಂದಿದ್ದಾರೆ.

Tap to resize

ಇನ್‌ಸ್ಟಾಗ್ರಾಂನಲ್ಲಿ ವಿರಾಟ್ ಕೊಹ್ಲಿಯವರ ಹಿಂಬಾಲಕರ ಸಂಖ್ಯೆ ಈ ವರ್ಷದ ಮಾರ್ಚ್‌ನಲ್ಲಿ 100 ಮಿಲಿಯನ್‌(10 ಕೋಟಿ) ಇತ್ತು. ಈ ಮೂಲಕ ಇನ್‌ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್‌ ಹೊಂದಿದ ವಿಶ್ವದ ಮೊದಲ ಕ್ರಿಕೆಟಿಗ ಎನ್ನುವ ದಾಖಲೆಗೆ ಕೊಹ್ಲಿ ಭಾಜನರಾಗಿದ್ದರು. ಇದಷ್ಟೆ ಅಲ್ಲದೇ ಕ್ರೀಡಾಜಗತ್ತಿನಲ್ಲಿ ನಾಲ್ಕನೇ ಹಾಗೂ ಒಟ್ಟಾರೆ ಸೆಲಿಬ್ರಿಟಿ ಪಟ್ಟಿಯಲ್ಲಿ 23ನೇ ಸ್ಥಾನ ಪಡೆದಿದ್ದರು.

ಇದಾದ ಬಳಿಕ 150 ಮಿಲಿಯನ್‌ ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಹೊಂದಿದ ಏಷ್ಯಾದ ಮೊದಲ ವ್ಯಕ್ತಿ ಎನ್ನುವ ಹಿರಿಮೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದರು. ಇದೀಗ ಪ್ಯಾರಿಸ್ ಸೇಂಟ್‌ ಜರ್ಮನ್ ಕ್ಲಬ್‌ ತಂಡದ ತಾರಾ ಫುಟ್ಬಾಲಿಗ ಜೂನಿಯರ್ ನೇಮಾರ್ ದಾಖಲೆ ಹಿಂದಿಕ್ಕಲು ಕೊಹ್ಲಿ ತುದಿಗಾಲಿನಲ್ಲಿ ನಿಂತಿದ್ದಾರೆ.
 

नेमार

ಜೂನಿಯರ್ ನೇಮಾರ್ ಸದ್ಯ 163 ಮಿಲಿಯನ್‌ ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಹೊಂದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಸದ್ಯ 162 ಮಿಲಿಯನ್‌ ಫಾಲೋವರ್ಸ್‌ ಹೊಂದಿದ್ದು, ಈ ವಿಶ್ವಕಪ್ ಟೂರ್ನಿ ಅಂತ್ಯದ ವೇಳೆಗೆ ವಿರಾಟ್ ಕೊಹ್ಲಿ ಫುಟ್ಬಾಲ್ ತಾರೆ ನೇಮಾರ್ ಹಿಂದಿಕ್ಕುವ ಸಾಧ್ಯತೆ ಬಹುತೇಕ ದಟ್ಟವಾಗಿದೆ.

क्रिस्टियानो रोनाल्डो

ಇನ್ನು ಕ್ರೀಡಾಕ್ಷೇತ್ರದಲ್ಲಿ ಅತಿಹೆಚ್ಚು ಇನ್‌ಸ್ಟಾಗ್ರಾಂ ಫಾಲೋವರ್ಸ್‌ ಹೊಂದಿದ ದಾಖಲೆ ಪೋರ್ಚುಗಲ್ ತಂಡದ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೋ ರೊನಾಲ್ಡೋ ಹೆಸರಿನಲ್ಲಿದೆ. ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೋ ಅವರನ್ನು 358 ಮಿಲಿಯನ್ ಮಂದಿ ಫಾಲೋ ಮಾಡುತ್ತಿದ್ದಾರೆ.

ಇನ್ನು ಅರ್ಜಿಂಟೀನಾದ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದು, ಬರೋಬ್ಬರಿ 276 ಮಿಲಿಯನ್‌ ಮಂದಿ ಇನ್‌ಸ್ಟಾಗ್ರಾಂನಲ್ಲಿ ಮೆಸ್ಸಿಯವರನ್ನು ಫಾಲೋ ಮಾಡುತ್ತಿದ್ದಾರೆ. 

Latest Videos

click me!