ಏಕದಿನ ಸರಣಿಯಲ್ಲಿ ರೋಹಿತ್ ಜತೆ ಇನಿಂಗ್ಸ್‌ ಆರಂಭಿಸೋದು ಇವರೇ ಅಂತೆ..!

Suvarna News   | Asianet News
Published : Mar 22, 2021, 06:22 PM IST

ಪುಣೆ: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ 3 ಪಂದ್ಯಗಳ ಏಕದಿನ ಸರಣಿ ಮಾರ್ಚ್‌ 23ರಿಂದ ಪುಣೆಯಲ್ಲಿ ಆರಂಭವಾಗಲಿದೆ. 3 ಪಂದ್ಯಗಳಿಗೂ ಮಹಾರಾಷ್ಟ್ರ ಕ್ರಿಕೆಟ್‌ ಸಂಸ್ಥೆ ಸ್ಟೇಡಿಯಂ ಆತಿಥ್ಯವನ್ನು ವಹಿಸಲಿದೆ. ಈಗಾಗಲೇ ಟೆಸ್ಟ್ ಹಾಗೂ ಟಿ20 ಸರಣಿಯಲ್ಲಿ ಇಂಗ್ಲೆಂಡ್‌ ಮಣಿಸಿ ಟ್ರೋಫಿ ಗೆದ್ದಿರುವ ಭಾರತ, ಇದೀಗ ಏಕದಿನ ಸರಣಿಯನ್ನು ಗೆಲ್ಲುವ ಕನವರಿಕೆಯಲ್ಲಿದೆ. ಹೀಗಿರುವಾಗಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಏಕದಿನ ಸರಣಿಯಲ್ಲಿ ಭಾರತ ಪರ ಬ್ಯಾಟಿಂಗ್‌ನಲ್ಲಿ ಇನಿಂಗ್ಸ್‌ ಆರಂಭಿಸೋರು ಯಾರು ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

PREV
17
ಏಕದಿನ ಸರಣಿಯಲ್ಲಿ ರೋಹಿತ್ ಜತೆ ಇನಿಂಗ್ಸ್‌ ಆರಂಭಿಸೋದು ಇವರೇ ಅಂತೆ..!

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಏಕದಿನ ಸರಣಿ ಮಾರ್ಚ್‌ 23, 26 ಹಾಗೂ 28ರಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯಲಿದೆ.

27

ಹಾಲಿ ವಿಶ್ವಕಪ್‌ ಚಾಂಪಿಯನ್‌ ಇಂಗ್ಲೆಂಡ್‌ ಏಕದಿನ ಸರಣಿಯಲ್ಲಿ ಭಾರತಕ್ಕೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಇದೆ.

37

ಇನ್ನು ಇಂಗ್ಲೆಂಡ್‌ ವಿರುದ್ದದ ಟಿ20 ಸರಣಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಭಾರತ 4 ಬಾರಿ ಆರಂಭಿಕ ಜೋಡಿಯನ್ನು ಬದಲಿಸಿತು. 

47

ಮೊದಲ ಪಂದ್ಯದಲ್ಲಿ ಧವನ್‌ ಹಾಗೂ ರಾಹುಲ್‌, 2ನೇ ಪಂದ್ಯದಲ್ಲಿ ರಾಹುಲ್‌-ಇಶಾನ್‌ ಕಿಶನ್‌, 3ನೇ ಹಾಗೂ 4ನೇ ಪಂದ್ಯದಲ್ಲಿ ರೋಹಿತ್‌-ರಾಹುಲ್‌, 5ನೇ ಪಂದ್ಯದಲ್ಲಿ ರೋಹಿತ್‌ ಹಾಗೂ ಕೊಹ್ಲಿ ಇನ್ನಿಂಗ್ಸ್‌ ಆರಂಭಿಸಿದರು.

57

ಹೀಗಾಗಿ ಏಕದಿನ ಸರಣಿಯಲ್ಲಿ ಭಾರತ ಪರ ಇನಿಂಗ್ಸ್‌ ಆರಂಭಿಸುವವರು ಯಾರು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಜೋರಾಗಿತ್ತು. ಇವೆಲ್ಲವಕ್ಕೂ ನಾಯಕ ನಾಯಕ ವಿರಾಟ್ ಕೊಹ್ಲಿ ತೆರೆ ಎಳೆದಿದ್ದಾರೆ.

67

ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಏಕದಿನ ಸರಣಿಯಲ್ಲಿ ಇನಿಂಗ್ಸ್‌ ಆರಂಭಿಸಲಿದ್ದಾರೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಕಳೆದ ಕೆಲವು ವರ್ಷಗಳಿಂದ ಏಕದಿನ ಕ್ರಿಕೆಟ್‌ನಲ್ಲಿ ಈ ಜೋಡಿ ಉತ್ತಮ ಪ್ರದರ್ಶನ ತೋರಿದೆ ಎಂದು ಕೊಹ್ಲಿ ಹೇಳಿದ್ದಾರೆ.

77

ಇದರೊಂದಿಗೆ ಶುಭ್‌ಮನ್‌ ಗಿಲ್‌, ಇಶಾನ್‌ ಕಿಶನ್‌ ಏಕದಿನ ಸರಣಿಯಲ್ಲಿ ಅಬ್ಬರಿಸಲು ಮತ್ತಷ್ಟು ದಿನ ಕಾಯಲೇಬೇಕಾದ ಸ್ಥಿತಿ ಎದುರಾಗಿದೆ.

click me!

Recommended Stories