ಬೆಂಗಳೂರು: ಕಳೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗ್ರೂಪ್ ಹಂತದಲ್ಲಿಯೇ ಆಘಾತಕಾರಿ ಸೋಲು ಕಂಡು ಅಭಿಯಾನ ಮುಗಿಸಿದ್ದ ಟೀಂ ಇಂಡಿಯಾ, ಇದೀಗ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಇದರ ಭಾಗವಾಗಿ ಟೀಂ ಇಂಡಿಯಾ, ಆಗಸ್ಟ್ ತಿಂಗಳಾಂತ್ಯದಿಂದ ಆರಂಭವಾಗಲಿರುವ ಏಷ್ಯಾಕಪ್ ಟೂರ್ನಿಯ ಮೇಲೆ ಗಮನ ಹರಿಸಿದೆ. ಫಿಟ್ನೆಸ್ ಸಮಸ್ಯೆಯಿಂದಾಗಿ ಟೀಂ ಇಂಡಿಯಾದಿಂದ ದೀರ್ಘಕಾಲದಿಂದ ಹೊರಗುಳಿದಿದ್ದ ಇಬ್ಬರು ಆಟಗಾರರು ಏಷ್ಯಾಕಪ್ ಟೂರ್ನಿ ವೇಳೆಗೆ ಭಾರತ ತಂಡ ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಈಗಾಗಲೇ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ವೇಳಾಪಟ್ಟಿ ಪ್ರಕಟವಾಗಿದ್ದು, ಆಗಸ್ಟ್ 27ರಿಂದ ಸೆಪ್ಟೆಂಬರ್ 11ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಟೂರ್ನಿ ಜರುಗಲಿದೆ. ಇದೇ ಸರಣಿಗೆ ಇಬ್ಬರು ತಾರಾ ಕ್ರಿಕೆಟಿಗರು ಭಾರತ ತಂಡ ಕೂಡಿಕೊಳ್ಳಲು ಎದುರು ನೋಡುತ್ತಿದ್ದಾರೆ.
26
ಟೀಂ ಇಂಡಿಯಾ ಉಪನಾಯಕ ಕೆ ಎಲ್ ರಾಹುಲ್ ಹಾಗೂ ವೇಗದ ಬೌಲರ್ ದೀಪಕ್ ಚಹರ್, ಮುಂಬರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.
36
Image credit: PTI
ಕೆ ಎಲ್ ರಾಹುಲ್, ಏಷ್ಯಾಕಪ್ ಟೂರ್ನಿಗೂ ಮುನ್ನ ನಡೆಯಲಿರುವ ಜಿಂಬಾಬ್ವೆ ವಿರುದ್ದದ ಏಕದಿನ ಸರಣಿಗೆ ಟೀಂ ಇಂಡಿಯಾ ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದ ರಾಹುಲ್‌ಗೆ ಜಿಂಬಾಬ್ವೆ ಎದುರಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿತ್ತು.
46
ಚೇತನ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಆಯ್ಕೆ ಸಮಿತಿಯು, ಮುಂಬರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ 15 ಇಲ್ಲವೇ 17 ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆಯಿದ್ದು, ಯಾರೆಲ್ಲಾ ಸ್ಥಾನ ಪಡೆಯಬಹುದು ಎನ್ನುವ ಕುತೂಹಲ ಜೋರಾಗಿದೆ.
56
Rohit Sharma-KL Rahul
ಕಳೆದೆರಡು ಟಿ20 ಸರಣಿಗಳಲ್ಲಿ ರೋಹಿತ್ ಶರ್ಮಾ ಜತೆ ಆರಂಭಿಕರಾಗಿ ರಿಷಭ್ ಪಂತ್ ಹಾಗೂ ಸೂರ್ಯಕುಮಾರ್ ಯಾದವ್ ಕಣಕ್ಕಿಳಿದಿದ್ದರು. ಇದೀಗ ಕೆ ಎಲ್ ರಾಹುಲ್ ಭಾರತ ತಂಡ ಕೂಡಿಕೊಂಡರೇ ಬಹುತೇಕ ರೋಹಿತ್ ಶರ್ಮಾ ಜತೆ ಏಷ್ಯಾಕಪ್ ಟೂರ್ನಿಯಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
66
ಇನ್ನು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಮಾರಕ ಸ್ವಿಂಗ್ ದಾಳಿಯ ಮೂಲಕ ಎದುರಾಳಿ ತಂಡದ ಬ್ಯಾಟರ್‌ಗಳನ್ನು ತಬ್ಬಿಬ್ಬುಗೊಳಿಸಿರುವ ವೇಗಿ ದೀಪಕ್ ಚಹಾರ್ ಸಹಾ ಕಳೆದ ಐಪಿಎಲ್‌ಗಿಂತ ಮುಂಚಿನಿಂದಲೇ ಫಿಟ್ನೆಸ್ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದಿದ್ದು, ಇದೀಗ ಏಷ್ಯಾಕಪ್ ಟೂರ್ನಿಗೆ ಭಾರತ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.