ಧರ್ಮಸ್ಥಳ, ಸೌತಡ್ಕ, ಕುಕ್ಕೆ ದೇವಾಸ್ಥಾನಕ್ಕೆ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಭೇಟಿ!

First Published | Jan 17, 2024, 9:05 PM IST

ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಇಂದು ಧರ್ಮಸ್ಳಳ, ಸೌತಡ್ಕ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕೊಲ್ಲೂರು ಮುೂಕಾಂಬಿಕಾ ದೇವಸ್ಥಾನಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಸ್ಥಾನದ ಪ್ರಸಾದ ಸ್ವೀಕರಿಸಿ ಮಹತ್ವದ ಸಂದೇಶ ಹಂಚಿಕೊಂಡಿದ್ದಾರೆ.
 

ಆಫ್ಘಾನಿಸ್ತಾನ ವಿರುದ್ದದ ಟಿ20 ಸರಣಿಯಿಂದ ಹೊರಗುಳಿದಿದ್ದ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದ್ದಾರೆ. ಇದರ ನಡುವೆ ಕೆಎಲ್ ರಾಹುಲ್ ದಕ್ಷಿಣ ಕನ್ನಡ ಹಾಗೂ ಉಡುಪಿಯ ಪ್ರಸಿದ್ಧ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
 

ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಬಳಿಕ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಅಭ್ಯಾಸ ನಡೆಸುತ್ತಿರುವ ರಾಹುಲ್ ಇಂದು ಬಿಡುವು ಮಾಡಿಕೊಂಡು ದೇವಸ್ಥಾನಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರೆ.

Tap to resize

ದಕ್ಷಿಣ ಕನ್ನಡ ಅತ್ಯಂತ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವ ಧರ್ಮಸ್ಥಳದ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಲ್ ರಾಹುಲ್  ದೇವಲ ದರ್ಶನ ಪಡೆದಿದ್ದಾರೆ. 

ಧರ್ಮಸ್ಥಳದಿಂದ 18 ಕಿಲೋಮೀಟರ್ ದೂರದಲ್ಲಿ ಅತ್ಯಂತ ಪ್ರಸಿದ್ಧ ಸೌತಡ್ಕ ಮಹಾ ಗಣಪತಿ ದೇವಸ್ಥಾನಕ್ಕೂ ಕೆಎಲ್ ರಾಹುಲ್ ಭೇಟಿ ನೀಡಿದ್ದಾರೆ. ಯಾವುದೇ ಕಟ್ಟಡಗಳಿಲ್ಲದ ಬಯಲಿನಲ್ಲಿರುವ ಈ ದೇವಸ್ಥಾನ ಅತ್ಯಂತ ಪವಿತ್ರ ದೇವಸ್ಥಾನವಾಗಿದೆ.
 

ಸೌತಡ್ಕ ದೇವಸ್ಥಾನ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದ ಕೆಎಲ್ ರಾಹುಲ್ ಬಳಿಕ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದ್ದಾರೆ.
 

ಕುಕ್ಕೆ ಬಳಿಕ ಕೆಎಲ್ ರಾಹುಲ್ ಉಡುಪಿಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ದೇವಳದ ಆಡಳಿತ ಮಂಡಳಿ ಕೆಎಲ್ ರಾಹುಲ್‌ಗೆ ಆದರದ ಸ್ವಾಗತ ನೀಡಿದೆ.

ಜನವರಿ 25ರಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆರಂಭಗೊಳ್ಳುತ್ತಿದೆ. 5 ಪಂದ್ಯಗಳ ಟೆಸ್ಟ್ ಸರಣಿಗೆ ಕೆಎಲ್ ರಾಹುಲ್ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ಸರಣಿ ಆರಂಭಕ್ಕೂ ಮುನ್ನ ದೇವರ ದರ್ಶನ ಪಡೆದಿದ್ದಾರೆ.

ಹೈದರಾಬಾದ್, ವಿಶಾಖಪಟ್ಟಣಂ, ರಾಜ್‌ಕೋಟ್, ರಾಂಚಿ ಹಾಗೂ ದರ್ಮಶಾಲಾದಲ್ಲಿ 5 ಟೆಸ್ಟ್ ಪಂದ್ಯ ಆಯೋಜಿಸಲಾಗಿದೆ. ಮಾರ್ಚ್ 11ರಂದು ಭಾರತ ಇಂಗ್ಲೆಂಡ್ ಟೆಸ್ಟ್ ಸರಣಿ ಅಂತ್ಯಗೊಳ್ಳಲಿದೆ.
 

Latest Videos

click me!