ಐಪಿಎಲ್‌ಗೂ ಮುನ್ನ ಕುಕ್ಕೆ ಸುಬ್ರಹ್ಮಣ್ಯ ಮೊರೆ ಹೋದ ಮನೀಶ್ ಪಾಂಡೆ ದಂಪತಿ

First Published | Mar 7, 2020, 7:20 PM IST

ಇದೇ ಮಾರ್ಚ್ 29ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಸ್) ಶುರುವಾಗಲಿದ್ದು, ಆಗಲೇ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಕೆಲ ಕ್ರಿಕೆಟರ್ಸ್ ತಾಲೀಮು ನಡೆಸಿದ್ದಾರೆ. ಮತ್ತೊಂದೆಡೆ ಭಾರತ ಕ್ರಿಕೆಟ್ ತಂಡದ ಖ್ಯಾತ ಆಟಗಾರ ಹಾಗೂ ಕರ್ನಾಟಕ ಏಕದಿನ ತಂಡದ ನಾಯಕ ಮನೀಶ್ ಪಾಂಡೆ ದಂಪತಿ ಸಮೇತ ಕುಕ್ಕೆ ಸುಬ್ರಹ್ಮಣ್ಯ ಮೊರೆ ಹೋಗಿದ್ದಾರೆ.

ಭಾರತ ಕ್ರಿಕೆಟ್ ತಂಡದ ಮನೀಷ್ ಪಾಂಡೆ ತಮ್ಮ ಪತ್ನಿ ಆಶ್ರಿತಾ ಶೆಟ್ಟಿ ಜೊತೆ ನಾಗರಾಧನಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಶನಿವಾರ ಬೆಳಗ್ಗೆ ಮನೀಫ್ ಪಾಂಡೆ ದೇವಸ್ಥಾನಕ್ಕೆ ಭೇಟಿ ನೀಡಿ, ಆಶ್ಲೇಷ ಪೂಜೆ ನೆರವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿ ದೇವರ ದರ್ಶನ ಪಡೆದರು.
Tap to resize

ಐಪಿಎಲ್‌ಗೂ ಮುನ್ನ ಕುಕ್ಕೆ ಸುಬ್ರಹ್ಮಣ್ಯ ಮೊರೆ ಹೋದ ಮನೀಶ್ ಪಾಂಡೆ ದಂಪತಿ
ಕಳೆದ ಡಿಸೆಂಬರ್ ನಲ್ಲಿ ಮನೀಷ್ ಪಾಂಡೆ ತುಳುನಾಡಿನ ಬೆಡಗಿ, ತಮಿಳು ಹಾಗೂ ತುಳು ನಟಿ ಆಶ್ರಿತಾ ಶೆಟ್ಟಿ ಜೊತೆ ಮುಂಬೈನಲ್ಲಿ ವಿವಾಹವಾಗಿದ್ದರು
ಮನೀಷ್ ಪಾಂಡೆ ಪತ್ನಿ ತುಳುನಾಡಿನ ಬೆಡಗಿ, ತಮಿಳು ಹಾಗೂ ತುಳು ನಟಿ ಆಶ್ರಿತಾ ಶೆಟ್ಟಿ
2020ರ ಐಪಿಎಸ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಬ್ಯಾಟ್ ಬೀಸಲಿರುವ ಮನೀಷ್ ಪಾಂಡೆ
ವಿವಾಹದ ಬಳಿಕ ಮೊದಲ ಬಾರಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಶನಿವಾರ ದರ್ಶನ ಪಡೆದರು.

Latest Videos

click me!