ನಿವೃತ್ತಿಯ ಮುನ್ಸೂಚನೆ ನೀಡಿದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ..!

First Published Apr 3, 2021, 5:55 PM IST

ನವದೆಹಲಿ: ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಬೇಕು ಎನ್ನುವುದು ದೇಶದ ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ಅದೇ ರೀತಿ ದೇಶವನ್ನು ಪ್ರತಿನಿಧಿಸಿದ ಮೇಲೆ ಒಂದು ಹಂತದ ಬಳಿಕ ಆಟಗಾರರು ನಿವೃತ್ತಿಯನ್ನು ಘೋಷಿಸುವುದು ಸರ್ವೇ ಸಾಮಾನ್ಯ. ಇದೀಗ ಟೀಂ ಇಂಡಿಯಾ ಸ್ಟಾರ್ ಕ್ರಿಕಟಿಗನೊಬ್ಬ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವ ಮುನ್ಸೂಚನೆ ನೀಡಿದ್ದಾರೆ.
 

ಟೀಂ ಇಂಡಿಯಾ ವೇಗದ ಬೌಲರ್‌ ಉಮೇಶ್‌ ಯಾದವ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವ ಮುನ್ಸೂಚನೆಯನ್ನು ನೀಡಿದ್ದಾರೆ.
undefined
33 ವರ್ಷದ ವಿದರ್ಭ ಮೂಲದ ಉಮೇಶ್‌ ಮುಂದಿನ ಎರಡು-ಮೂರು ವರ್ಷಗಳ ಕಾಲ ಕ್ರಿಕೆಟ್‌ನಲ್ಲಿ ಮುಂದುವರೆಯುವುದಾಗಿ ಹೇಳಿದ್ದಾರೆ.
undefined
ಇದೀಗ ಯುವ ಕ್ರಿಕೆಟಿಗರು ತಂಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇದೊಂದು ರೀತಿಯ ಆರೋಗ್ಯಕರ ಸ್ಪರ್ಧೆಯಾಗಿದ್ದು, ಅಂತಿಮವಾಗಿ ಇದು ತಂಡಕ್ಕೆ ಲಾಭ ಎಂದು ಉಮೇಶ್ ಹೇಳಿದ್ದಾರೆ.
undefined
ಬುಮ್ರಾ, ಶಮಿ ಹಾಗೂ ಇಶಾಂತ್ ಶರ್ಮಾ ಬಳಿಕ ಟೀಂ ಇಂಡಿಯಾದ ಪ್ರಮುಖ ವೇಗಿಯಾಗಿರುವ ಉಮೇಶ್ ಯಾದವ್‌ 2011ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು.
undefined
ಭಾರತ ಪರ 48 ಟೆಸ್ಟ್ ಪಂದ್ಯಗಳನ್ನಾಡಿರುವ ಉಮೇಶ್ ಯಾದವ್‌ 148 ವಿಕೆಟ್‌ ಕಬಳಿಸಿದ್ದಾರೆ. ಇನ್ನು 75 ಏಕದಿನ ಪಂದ್ಯಗಳಲ್ಲಿ ಉಮೇಶ್ ಟೀಂ ಇಂಡಿಯಾ ಪರ ಕಣಕ್ಕಿಳಿದಿದ್ದಾರೆ.
undefined
ಟೆಸ್ಟ್‌ನಲ್ಲಿ ಪ್ರಮುಖ ವೇಗಿಯಾಗಿರುವ ಉಮೇಶ್‌, 2018ರ ಬಳಿಕ ಇದುವರೆಗೂ ಒಂದೇ ಒಂದು ಏಕದಿನ ಪಂದ್ಯವನ್ನಾಡಿಲ್ಲ.
undefined
14ನೇ ಆವೃತ್ತಿಯ ಐಪಿಎಲ್‌ನಲ್ಲಿ ಉಮೇಶ್ ಯಾದವ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಪ್ರತಿನಿಧಿಸಲಿದ್ದು, ಫೆಬ್ರವರಿ ತಿಂಗಳಿನಲ್ಲಿ ನಡೆದ ಐಪಿಎಲ್‌ ಆಟಗಾರರ ಹರಾಜಿನಲ್ಲಿ ಕೇವಲ 2 ಕೋಟಿ ರುಪಾಯಿ ಮೂಲ ಬೆಲೆಗೆ ಡೆಲ್ಲಿ ಫ್ರಾಂಚೈಸಿ ಉಮೇಶ್ ಯಾದವ್‌ರನ್ನು ಖರೀದಿಸಿದೆ.
undefined
click me!