'ನನ್ನ ಹೆಂಡತಿಯಂತೂ....': ಮದುವೆಯ ಬೆನ್ನಲ್ಲೇ ರೊಮ್ಯಾಂಟಿಕ್‌ ಫೋಟೋ ಪೋಸ್ಟ್ ಮಾಡಿದ ಪ್ರಸಿದ್ಧ್ ಕೃಷ್ಣ..!

Published : Jun 09, 2023, 02:25 PM ISTUpdated : Jun 09, 2023, 02:29 PM IST

ಬೆಂಗಳೂರು(ಜೂ.09): ಟೀಂ ಇಂಡಿಯಾ ಕ್ರಿಕೆಟಿಗ ಪ್ರಸಿದ್ಧ್ ಕೃಷ್ಣ ತಮ್ಮ ಬಹುಕಾಲದ ಗೆಳತಿ ರಚನಾ ಅವರೊಂದಿಗೆ ಜೂನ್‌ 08ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮದುವೆಯ ಬೆನ್ನಲ್ಲೇ ಪ್ರಸಿದ್ಧ್‌ ಕೃಷ್ಣ ರೊಮ್ಯಾಂಟಿಕ್ ಆಗಿ ಬದಲಾಗಿದ್ದು, ಮುದ್ದಾದ ಸ್ಟೇಟಸ್‌ ಪೋಸ್ಟ್‌ ಮಾಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

PREV
17
'ನನ್ನ ಹೆಂಡತಿಯಂತೂ....': ಮದುವೆಯ ಬೆನ್ನಲ್ಲೇ ರೊಮ್ಯಾಂಟಿಕ್‌ ಫೋಟೋ ಪೋಸ್ಟ್ ಮಾಡಿದ ಪ್ರಸಿದ್ಧ್ ಕೃಷ್ಣ..!

ಟೀಂ ಇಂಡಿಯಾ ನೀಳಕಾಯದ ವೇಗಿ, ಕನ್ನಡಿಗ ಪ್ರಸಿದ್ಧ್ ಕೃಷ್ಣ, ಬೆಂಗಳೂರಿನಲ್ಲಿ ತಮ್ಮ ಬಹುಕಾಲದ ಗೆಳತಿ ರಚನಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. 

27

ಪ್ರಸಿದ್ಧ್‌ ಕೃಷ್ಣ ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮದುವೆಯ ಹಲವು ಫೋಟೋಗಳನ್ನು ಹಂಚಿಕೊಂಡಿದ್ದು, ನನ್ನ ಪತ್ನಿಯಂತೂ ಕೋಟಿಗೊಬ್ಬಳು ಎಂದು ಬರೆದು ಹಾರ್ಟ್‌ ಎಮೋಜಿಯೊಂದಿಗೆ ಪೋಸ್ಟ್ ಮಾಡಿದ್ದಾರೆ.
 

37

ಒಂದು ಪೋಟೋದಲ್ಲಿ ಪ್ರಸಿದ್ಧ್‌ ಕೃಷ್ಣ, ತಮ್ಮ ಪತ್ನಿಗೆ ತಾಳಿ ಕಟ್ಟುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಪ್ರಸಿದ್ಧ್ ಕೃಷ್ಣ ಹಾಗೂ ರಚನಾ ಅವರ ವಿವಾಹವು ದಿ ಪಿಕಾಕ್ ಗ್ರೋವ್ ಎಂಬ ರೆಸಾರ್ಟ್‌ನಲ್ಲಿ ನಡೆಯಿತು.
 

47

ಪ್ರಸಿದ್ದ್ ಕೃಷ್ಣ ಅವರ ಮದುವೆಯ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಮದುವೆಯ ವೇಳೆ ಮಯಾಂಕ್ ಅಗರ್‌ವಾಲ್, ಜಸ್ಪ್ರೀತ್ ಬುಮ್ರಾ, ಶ್ರೇಯಸ್ ಅಯ್ಯರ್, ಕೃಷ್ಣಪ್ಪ ಗೌತಮ್ ಹಾಜರಿದ್ದರು.

57

ದಕ್ಷಿಣ ಭಾರತ ಶೈಲಿಯಲ್ಲಿ ಪ್ರಸಿದ್ದ್ ಕೃಷ್ಣ ಹಾಗೂ ರಚನಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮದುವೆಯ ಬೆನ್ನಲ್ಲೇ ಟೀಂ ಇಂಡಿಯಾ ಕ್ರಿಕೆಟಿಗರಾದ ಕೆ ಎಲ್‌ ರಾಹುಲ್ ಸೇರಿದಂತೆ ಹಲವು ಕ್ರಿಕೆಟಿಗರು ಶುಭಕೋರಿದ್ದಾರೆ.

67

ಪ್ರಸಿದ್ಧ್‌ ಕೃಷ್ಣ, ಸ್ಟ್ರೆಸ್‌ ಫ್ಯಾಕ್ಚರ್‌ ಕಾರಣದಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಕಳೆದ ಕೆಲ ಸಮಯದಿಂದ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. ಈ ಕಾರಣಕ್ಕಾಗಿಯೇ ಪ್ರಸಿದ್ದ್ ಕೃಷ್ಣ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಿಂದಲೂ ಹೊರಗುಳಿದಿದ್ದರು.

77

ಪ್ರಸಿದ್ದ್ ಕೃಷ್ಣ ಭಾರತ ಪರ 14 ಏಕದಿನ ಪಂದ್ಯಗಳನ್ನಾಡಿ 25 ವಿಕೆಟ್ ಕಬಳಿಸಿದ್ದಾರೆ. ಇನ್ನು ಐಪಿಎಲ್‌ನಲ್ಲಿ 51 ಪಂದ್ಯಗಳನ್ನಾಡಿ 49 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಐಪಿಎಲ್‌ನಲ್ಲಿ ಸದ್ಯ ಪ್ರಸಿದ್ಧ್ ಕೃಷ್ಣ ರಾಜಸ್ಥಾನ ರಾಯಲ್ಸ್ ತಂಡದ ಜತೆಗಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories