ಆಸ್ಟ್ರೇಲಿಯಾ ವಿರುದ್ದದ ಸಿಡ್ನಿ ಟೆಸ್ಟ್‌ಗೆ ಟೀಂ ಇಂಡಿಯಾ ಪ್ರಕಟ; ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಮತ್ತೋರ್ವ ವೇಗಿ..!

First Published Jan 6, 2021, 1:33 PM IST

ಸಿಡ್ನಿ: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಎರಡು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಜನವರಿ 07ರಿಂದ ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ಆರಂಭವಾಗಲಿರುವ ಪಂದ್ಯಕ್ಕೆ ನಿರೀಕ್ಷೆಯಂತೆಯೇ ರೋಹಿತ್ ಶರ್ಮಾ ತಂಡ ಕೂಡಿಕೊಂಡಿದ್ದಾರೆ.
ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ 2 ಪಂದ್ಯಗಳು ಮುಕ್ತಾಯವಾಗಿದ್ದು, ಆಸ್ಟ್ರೇಲಿಯಾ ಮತ್ತು ಭಾರತ ತಲಾ ಒಂದೊಂದು ಪಂದ್ಯವನ್ನು ಜಯಿಸಿವೆ. ಇನ್ನು ಸಿಡ್ನಿ ಟೆಸ್ಟ್‌ ಪಂದ್ಯದಿಂದ ಉಮೇಶ್ ಯಾದವ್ ಹಾಗೂ ಮಯಾಂಕ್‌ ಅಗರ್‌ವಾಲ್ ಹೊರಬಿದ್ದಿದ್ದಾರೆ. ಸಿಡ್ನಿ ಟೆಸ್ಟ್‌ಗೆ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
 

1. ಶುಭ್‌ಮನ್‌ ಗಿಲ್‌: ಯುವ ಆರಂಭಿಕ ಬ್ಯಾಟ್ಸ್‌ಮನ್‌
undefined
2. ರೋಹಿತ್ ಶರ್ಮಾ: ಮಯಾಂಕ್‌ ಅಗರ್‌ವಾಲ್‌ ಬದಲಿಗೆ ಟೀಂ ಇಂಡಿಯಾ ಕೂಡಿಕೊಂಡ ಹಿಟ್‌ಮ್ಯಾನ್
undefined
3. ಚೇತೇಶ್ವರ್ ಪೂಜಾರ: ತಂಡದ ಟೆಸ್ಟ್ ಸ್ಪೆಷಲಿಸ್ಟ್‌ ಬ್ಯಾಟ್ಸ್‌ಮನ್‌
undefined
4. ಅಜಿಂಕ್ಯ ರಹಾನೆ: ಟೀಂ ಇಂಡಿಯಾ ಹಂಗಾಮಿ ನಾಯಕ, ಬ್ಯಾಟಿಂಗ್‌ ಬೆನ್ನೆಲುಬು
undefined
5. ಹನುಮ ವಿಹಾರಿ: ಕಳಪೆ ಫಾರ್ಮ್‌ನಿಂದ ಬಳಲುತ್ತಿರುವ ವಿಹಾರಿಗೆ ಮತ್ತೊಂದು ಅವಕಾಶ ನೀಡಲಾಗಿದೆ
undefined
6. ರಿಷಭ್ ಪಂತ್: ಟೀಂ ಇಂಡಿಯಾ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್‌
undefined
7. ರವೀಂದ್ರ ಜಡೇಜಾ: ತಂಡದ ಸ್ಟಾರ್ ಆಲ್ರೌಂಡರ್‌
undefined
8. ರವಿಚಂದ್ರನ್ ಅಶ್ವಿನ್‌: ಟೀಂ ಇಂಡಿಯಾ ಅನುಭವಿ ಆಫ್‌ ಸ್ಪಿನ್ನರ್
undefined
9. ನವದೀಪ್ ಸೈನಿ: ವೇಗಿ ಉಮೇಶ್ ಯಾದವ್ ಬದಲಿಗೆ ತಂಡ ಕೂಡಿಕೊಂಡ ಡೆಲ್ಲಿ ವೇಗಿ ಸೈನಿ ಟೆಸ್ಟ್‌ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ.
undefined
10. ಮೊಹಮ್ಮದ್ ಸಿರಾಜ್‌: ಕಳೆದ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಗಮನ ಸೆಳೆದಿರುವ ವೇಗಿ
undefined
11. ಜಸ್ಪ್ರೀತ್ ಬುಮ್ರಾ: ಟೀಂ ಇಂಡಿಯಾ ವೇಗದ ಬೌಲಿಂಗ್ ಅಸ್ತ್ರ.
undefined
click me!