ಆಸೀಸ್‌ ವಿರುದ್ದ ಮೊದಲ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..!

First Published Dec 3, 2020, 4:55 PM IST

ಕ್ಯಾನ್‌ಬೆರ್ರಾ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಟೀಂ ಇಂಡಿಯಾ ಈಗಿನಿಂದಲೇ ಸಿದ್ದತೆ ಆರಂಭಿಸಿದ್ದು, ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ವಿರಾಟ್ ಪಡೆ ಕೆಲವು ಪ್ರಯೋಗಗಳಿಗೆ ಮುಂದಾಗುವ ಸಾಧ್ಯತೆಯಿದೆ.
ಈಗಾಗಲೇ ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾ, ಶತಾಯಗತಾಯ ಟಿ20 ಸರಣಿಯನ್ನಾದರೂ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಡಿಸೆಂಬರ್ 04ರಿಂದ ಆರಂಭವಾಗಲಿರುವ ಟಿ20 ಸರಣಿಗೆ ಭಾರತದ ಸಂಭಾವ್ಯ ತಂಡ ಇಲ್ಲಿದೆ ನೋಡಿ.
 

1. ಕೆ.ಎಲ್. ರಾಹುಲ್: ಉತ್ತಮ ಫಾರ್ಮ್‌ನಲ್ಲಿರುವ ರಾಹುಲ್ ವಿಕೆಟ್‌ ಕೀಪಿಂಗ್ ಜತೆ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.
undefined
2. ಶಿಖರ್ ಧವನ್: ಗಬ್ಬರ್ ಸಿಂಗ್ ಖ್ಯಾತಿಯ ಧವನ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಬೇಕಿದೆ.
undefined
3. ವಿರಾಟ್ ಕೊಹ್ಲಿ: ನಾಯಕ ಹಾಗೂ ರನ್‌ ಮಷೀನ್, ಏಕದಿನ ಸರಣಿಯಲ್ಲಿ ಅಬ್ಬರಿಸಿರುವ ಕೊಹ್ಲಿ, ಅದೇ ಫಾರ್ಮ್‌ ಫಾರ್ಮ್ ಮುಂದುವರೆಸಬೇಕಿದೆ.
undefined
4. ಶ್ರೇಯಸ್‌ ಅಯ್ಯರ್: ಏಕದಿನ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದ ಅಯ್ಯರ್‌ಗೆ ಟಿ20 ಸರಣಿಯಲ್ಲಿ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.
undefined
5.ಮನೀಶ್ ಪಾಂಡೆ: ಏಕದಿನ ಸರಣಿಯಲ್ಲಿ ಬೆಂಚ್‌ ಕಾಯಿಸಿದ್ದ ಮನೀಶ್ ಪಾಂಡೆ ಟಿ20 ಸರಣಿಯಲ್ಲಿ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
undefined
6. ಹಾರ್ದಿಕ್ ಪಾಂಡ್ಯ: ರೆಡ್ ಹಾಟ್‌ ಫಾರ್ಮ್‌ನಲ್ಲಿರುವ ಹಾರ್ದಿಕ್ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಮತ್ತೊಮ್ಮೆ ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ತೋರಬೇಕಿದೆ.
undefined
7. ರವೀಂದ್ರ ಜಡೇಜಾ: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗುವ ಸಾಮರ್ಥ್ಯ ಹೊಂದಿದ್ದಾರೆ.
undefined
8. ವಾಷಿಂಗ್ಟನ್ ಸುಂದರ್: ಐಪಿಎಲ್‌ನಲ್ಲಿ ಶಿಸ್ತುಬದ್ಧ ಬೌಲಿಂಗ್ ದಾಳಿ ನಡೆಸಿರುವ ಸುಂದರ್ ತಂಡ ಕೂಡಿಕೊಳ್ಳುವ ಸಾಧ್ಯತೆಯಿದೆ.
undefined
9. ಮೊಹಮ್ಮದ್ ಶಮಿ: ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಶಮಿ, ಟಿ20 ಸರಣಿಗೆ ತಂಡ ಕೂಡಿಕೊಳ್ಳಲಿದ್ದಾರೆ.
undefined
10. ಟಿ. ನಟರಾಜನ್: ಯಾರ್ಕರ್ ಸ್ಪೆಷಲಿಸ್ಟ್ ಮೊದಲ ಏಕದಿನ ಪಂದ್ಯದಲ್ಲೇ ಕಮಾಲ್ ಮಾಡಿದ್ದು, ಟಿ20 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ.
undefined
11. ಜಸ್ಪ್ರೀತ್ ಬುಮ್ರಾ: ಡೆತ್ ಓವರ್ ಸ್ಪೆಷಲಿಸ್ಟ್ ಬುಮ್ರಾ, ಕೊನೆಯ ಏಕದಿನ ಪಂದ್ಯದಲ್ಲಿ ಫಾರ್ಮ್‌ಗೆ ಮರಳಿದ್ದು, ಚುಟುಕು ಕ್ರಿಕೆಟ್‌ಗೂ ಆಸೀಸ್‌ ಬ್ಯಾಟ್ಸ್‌ಮನ್‌ಗಳನ್ನು ಕಾಡುವ ಸಾಧ್ಯತೆಯಿದೆ.
undefined
click me!