ತರೌಬಾ: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಟಿ20 ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಏಕದಿನ ಕ್ರಿಕೆಟ್ ಸರಣಿಯಿಂದ ವಿಶ್ರಾಂತಿ ಪಡೆದಿದ್ದ ನಾಯಕ ರೋಹಿತ್ ಶರ್ಮಾ ತಂಡ ಕೂಡಿಕೊಂಡಿದ್ದು, ಹೊಸ ಹುರುಪಿನೊಂದಿಗೆ ಟೀಂ ಇಂಡಿಯಾ ಸಜ್ಜಾಗಿದೆ. ವಿಂಡೀಸ್ ಎದುರಿನ ಮೊದಲ ಟಿ20 ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ ನೋಡಿ
1. ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿಂಡೀಸ್ ಎದುರಿನ ಮೊದಲ ಟಿ20 ಪಂದ್ಯದಲ್ಲೇ ದೊಡ್ಡ ಮೊತ್ತ ಗಳಿಸುವ ನಿರೀಕ್ಷೆಯಿದೆ. ರೋಹಿತ್ ಶರ್ಮಾ ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಸಿಕ್ಕ ಉತ್ತಮ ಆರಂಭವನ್ನು ದೊಡ್ಡಮೊತ್ತವನ್ನಾಗಿ ಪರಿವರ್ತಿಸಲು ವಿಫಲವಾಗಿದ್ದರು.
211
Rishabh Pant
2. ರಿಷಭ್ ಪಂತ್: ಎಡಗೈ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿದು ಅಬ್ಬರಿಸಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲೂ ಪಂತ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
311
3. ದೀಪಕ್ ಹೂಡಾ: ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ದೀಪಕ್ ಹೂಡಾ, ಐರ್ಲೆಂಡ್ ಎದುರಿನ ಸರಣಿಯಲ್ಲಿ ಮಿಂಚಿನ ಪ್ರದರ್ಶನ ತೋರಿ ಮಿಂಚಿದ್ದರು. ಇದೀಗ ವಿಂಡೀಸ್ ಸರಣಿಯಲ್ಲೂ ತಮ್ಮ ಲಯ ಮುಂದುವರೆಸಿಕೊಂಡು ಹೋಗಲು ಹೂಡಾ ಎದುರು ನೋಡುತ್ತಿದ್ದಾರೆ.
411
4. ಸೂರ್ಯಕುಮಾರ್ ಯಾದವ್: ವಿಂಡೀಸ್ ಎದುರಿನ ಏಕದಿನ ಸರಣಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದ ಸೂರ್ಯಕುಮಾರ್ ಯಾದವ್, ಇದೀಗ ಟಿ20 ಸರಣಿಯಲ್ಲಿ ಫಾರ್ಮ್‌ಗೆ ಮರಳಲು ಹಾತೊರೆಯುತ್ತಿದ್ದಾರೆ.
511
5. ಹಾರ್ದಿಕ್ ಪಾಂಡ್ಯ: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಕೂಡಾ ವಿಂಡೀಸ್ ಎದುರಿನ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಟೀಂ ಇಂಡಿಯಾದ ಎಕ್ಸ್ ಫ್ಯಾಕ್ಟರ್ ಎನಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ತಮ್ಮ ರೆಡ್ ಹಾಟ್ ಫಾರ್ಮ್ ಮುಂದುವರೆಸುವ ಆತ್ಮವಿಶ್ವಾಸದಲ್ಲಿದ್ದಾರೆ.
611
6. ದಿನೇಶ್ ಕಾರ್ತಿಕ್: ಟೀಂ ಇಂಡಿಯಾ ಅನುಭವಿ ಬ್ಯಾಟರ್ ದಿನೇಶ್ ಕಾರ್ತಿಕ್, ಮ್ಯಾಚ್ ಫಿನಿಶರ್ ಆಗಿ ಸಾಕಷ್ಟು ಗಮನ ಸೆಳೆದಿದ್ದಾರೆ. ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಡಿಕೆ ವಿಂಡೀಸ್ ಸರಣಿಯಲ್ಲಿ ಅಬ್ಬರಿಸಬೇಕಿದೆ.
711
7. ರವೀಂದ್ರ ಜಡೇಜಾ: ಟೀಂ ಇಂಡಿಯಾ ಮತ್ತೋರ್ವ ಆಲ್ರೌಂಡರ್ ಜಡೇಜಾ, ವಿಂಡೀಸ್ ಎದುರಿನ ಏಕದಿನ ಸರಣಿಗೆ ಸಂಪೂರ್ಣ ಫಿಟ್ ಆಗಿರಲಿಲ್ಲ. ಆದರೆ ಇದೀಗ ವಿಂಡೀಸ್ ಎದುರಿನ ಟಿ20 ಸರಣಿಗೆ ಸಂಪೂರ್ಣ ಫಿಟ್ ಆಗಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
811
8. ರವಿಚಂದ್ರನ್ ಅಶ್ವಿನ್: ಟೀಂ ಇಂಡಿಯಾ ಅನುಭವಿ ಆಫ್‌ಸ್ಪಿನ್ನರ್ ಅಶ್ವಿನ್ ಬೌಲಿಂಗ್‌ನಲ್ಲಿ ಸಾಕಷ್ಟು ಅನುಭವ ಹೊಂದಿದ್ದು, ಯುಜುವೇಂದ್ರ ಚಹಲ್ ಅನುಪಸ್ಥಿತಿಯಲ್ಲಿ ಬ್ಲೂ ಜೆರ್ಸಿ ತೊಟ್ಟು ಮಿಂಚಲು ಸಜ್ಜಾಗಿದ್ದಾರೆ.
911
9. ಭುವನೇಶ್ವರ್ ಕುಮಾರ್; ಟೀಂ ಇಂಡಿಯಾ ಸ್ವಿಂಗ್ ಸ್ಪೆಷಲಿಸ್ಟ್ ಭುವನೇಶ್ವರ್ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದು, ವೇಗದ ಬೌಲಿಂಗ್ ಪಡೆಯನ್ನು ಮುನ್ನಡೆಸಲು ರೆಡಿಯಾಗಿದ್ದಾರೆ.
1011
Harshal Patel
10. ಹರ್ಷಲ್ ಪಟೇಲ್: ಟೀಂ ಇಂಡಿಯಾ ಡೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್, ಮಾರಕ ವೇಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಅನುಪಸ್ಥಿತಿಯಲ್ಲಿ ಜವಾಬ್ದಾರಿಯುತ ಪ್ರದರ್ಶನ ತೋರಬೇಕಿದೆ.
1111
11. ಆರ್ಶದೀಪ್ ಸಿಂಗ್: ಟೀಂ ಇಂಡಿಯಾ ಯುವ ಪ್ರತಿಭಾನ್ವಿತ ವೇಗಿ ಆರ್ಶದೀಪ್ ಸಿಂಗ್, ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಮಿಂಚಿದ್ದಾರೆ. ಆವೇಶ್ ಖಾನ್ ಏಕದಿನ ಸರಣಿಯಲ್ಲಿ ದುಬಾರಿಯಾಗಿದ್ದರಿಂದ ಆರ್ಶದೀಪ್ ಸಿಂಗ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು.