1. ರೋಹಿತ್ ಶರ್ಮಾ:
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಎರಡನೇ ಏಕದಿನ ಪಂದ್ಯದಲ್ಲಿ ಕೇವಲ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಇದೀಗ ನಿರ್ಣಾಯಕ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್ ಆಡುವ ವಿಶ್ವಾಸದಲ್ಲಿದ್ದಾರೆ.
2. ಶುಭ್‌ಮನ್ ಗಿಲ್:
ಬಲಗೈ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್, ಮೊದಲೆರಡು ಏಕದಿನ ಪಂದ್ಯಗಳಲ್ಲಿ ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ದೊಡ್ಡ ಮೊತ್ತ ಗಳಿಸುತ್ತಾರಾ ಕಾದು ನೋಡಬೇಕಿದೆ.
3. ವಿರಾಟ್ ಕೊಹ್ಲಿ:
ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 35 ರನ್ ಬಾರಿಸುವ ಮೂಲಕ ಭಾರತ ಪರ ದಿಟ್ಟ ಹೋರಾಟ ನಡೆಸಿದ್ದರು. ಇದೀಗ ಕೊಹ್ಲಿ, ಆಸ್ಟ್ರೇಲಿಯಾ ಎದುರು ಜವಾಬ್ದಾರಿಯುತ ಆಟವಾಡಬೇಕಿದೆ.
4. ಸೂರ್ಯಕುಮಾರ್ ಯಾದವ್:
ಶ್ರೇಯಸ್ ಅಯ್ಯರ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಸೂರ್ಯಕುಮಾರ್ ಯಾದವ್, ಮೊದಲೆರಡು ಪಂದ್ಯಗಳಲ್ಲಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದರು. ಕೊನೆಯ ಪಂದ್ಯದಲ್ಲಾದರೂ ಫಾರ್ಮ್‌ಗೆ ಮರಳುತ್ತಾರಾ ಕಾದು ನೋಡಬೇಕಿದೆ.
5. ಕೆ ಎಲ್ ರಾಹುಲ್:
ಮೊದಲ ಏಕದಿನ ಪಂದ್ಯದಲ್ಲಿ ಸಮಯೋಚಿತ ಅರ್ಧಶತಕ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್, ಎರಡನೇ ಪಂದ್ಯದಲ್ಲಿ 9 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ರಾಹುಲ್, ಸ್ಥಿರ ಪ್ರದರ್ಶನ ತೋರಬೇಕಿದೆ.
6. ಹಾರ್ದಿಕ್ ಪಾಂಡ್ಯ:
ಟೀಂ ಇಂಡಿಯಾ ಆಲ್ರೌಂಡರ್ ಮೊದಲೆರಡು ಪಂದ್ಯಗಳಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದ್ದಾರೆ. ಎರಡನೇ ಏಕದಿನ ಪಂದ್ಯದಲ್ಲಿ ಪಾಂಡ್ಯ ಕೇವಲ ಒಂದು ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಬೌಲಿಂಗ್‌ನಲ್ಲಿಯೂ ದುಬಾರಿಯಾಗಿದ್ದರು.
7. ರವೀಂದ್ರ ಜಡೇಜಾ:
ಮೊಣಕಾಲಿನ ಶಸ್ತ್ರ ಚಿಕಿತ್ಸೆ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಭರ್ಜರಿಯಾಗಿಯೇ ಕಮ್‌ಬ್ಯಾಕ್ ಮಾಡಿದ್ದ ಜಡೇಜಾ, ಟೆಸ್ಟ್ ಸರಣಿಯಲ್ಲಿ ಸರಣಿಶ್ರೇಷ್ಠ ಪ್ರಶಸ್ತಿ ಜಯಿಸಿದ್ದರು. ಆದರೆ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಕೇವಲ 16 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು. ಜಡ್ಡು ಇದೀಗ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಬೇಕಿದೆ.
8. ಅಕ್ಷರ್ ಪಟೇಲ್:
ಆಲ್ರೌಂಡರ್ ಅಕ್ಷರ್ ಪಟೇಲ್ ಎರಡನೇ ಏಕದಿನ ಪಂದ್ಯದಲ್ಲಿ ಅಜೇಯ 29 ರನ್ ಬಾರಿಸಿದ್ದರು. ಇನ್ನು ಬೌಲಿಂಗ್‌ನಲ್ಲೂ ವಿಕೆಟ್ ಕಬಳಿಸುವ ಸಾಮರ್ಥ್ಯವಿರುವ ಅಕ್ಷರ್ ಪಟೇಲ್, ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಉಳಿಸಿಕೊಳ್ಳುವ ಸಾಧ್ಯತೆಯಿದೆ.
9. ಉಮ್ರಾನ್ ಮಲಿಕ್:
ಏಕದಿನ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ವೇಗಿಗಳದ್ದೇ ಕಾರುಬಾರು ಎನಿಸಿದೆ. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಕುಲ್ದೀಪ್ ಯಾದವ್‌ಗೆ ವಿಶ್ರಾಂತಿ ನೀಡಿ ಉಮ್ರಾನ್ ಮಲಿಕ್‌ಗೆ ತಂಡದಲ್ಲಿ ಮಣೆಹಾಕುವ ಸಾಧ್ಯತೆ ದಟ್ಟವಾಗಿದೆ.
10. ಮೊಹಮ್ಮದ್ ಶಮಿ:
ಅನುಭವಿ ವೇಗಿ ಮೊಹಮ್ಮದ್ ಶಮಿ, ಮೊದಲ ಪಂದ್ಯದಲ್ಲಿ ಮಾರಕ ದಾಳಿ ನಡೆಸಿ 3 ವಿಕೆಟ್ ಕಬಳಿಸಿದ್ದರು. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ವಿಕೆಟ್ ಕಬಳಿಸಲು ವಿಫಲವಾಗಿದ್ದರು. ಮೂರನೇ ಪಂದ್ಯದಲ್ಲಿ ಶಮಿ ಮೇಲೆ ಸಾಕಷ್ಟು ಜವಾಬ್ದಾರಿಯಿದೆ.
11. ಮೊಹಮ್ಮದ್ ಶಮಿ:
ಇನ್ನು ಟೀಂ ಇಂಡಿಯಾದ ಪ್ರತಿಭಾನ್ವಿತ ವೇಗಿ ಸಿರಾಜ್, ಮೊದಲ ಏಕದಿನ ಪಂದ್ಯದಲ್ಲಿ 29 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಆದರೆ ಎರಡನೇ ಏಕದಿನ ಪಂದ್ಯದಲ್ಲಿ ಯಶಸ್ಸು ಸಿಕ್ಕಿರಲಿಲ್ಲ. ಮೂರನೇ ಏಕದಿನ ಪಂದ್ಯದಲ್ಲಿ ನಂ.1 ಬೌಲರ್ ಯಾವ ರೀತಿ ಪ್ರದರ್ಶನ ನೀಡುತ್ತಾರೆ ಕಾದು ನೋಡಬೇಕಿದೆ.