ಪುಣೆ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಟೆಸ್ಟ್ ಹಾಗೂ ಟಿ20 ಸರಣಿ ಗೆದ್ದ ಬೀಗುತ್ತಿರುವ ಭಾರತಕ್ಕೆ ಏಕದಿನ ಸರಣಿಯಲ್ಲಿ ಶಾಕ್ ನೀಡಲು ಇಂಗ್ಲೆಂಡ್ ತಂಡ ಸಜ್ಜಾಗಿದೆ.
ಬಹುತೇಕ ಟಿ20 ಸರಣಿ ಆಡಿದ ತಂಡವೇ ಏಕದಿನ ಸರಣಿಯಲ್ಲೂ ಕಣಕ್ಕಿಳಿಯಲಿದ್ದು, ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಹಾಗೂ ಕೃನಾಲ್ ಪಾಂಡ್ಯ ಇದೇ ಮೊದಲ ಬಾರಿಗೆ ಏಕದಿನ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇಂಗ್ಲೆಂಡ್ ಎದುರಿನ ಮೊದಲ ಏಕದಿನ ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ