ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಹೈವೋಲ್ಟೇಜ್ ಸರಣಿಗೆ ಇಲ್ಲಿನ ಮೊಟೇರಾದಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಮುಂಬುರುವ ಟಿ20 ವಿಶ್ವಕಪ್ ಟೂರ್ನಿಗೆ ಪೂರ್ವಭಾವಿ ತಯಾರಿ ಎನಿಸಿರುವ ಈ ಸರಣಿಯಲ್ಲಿ ಭಾರತ ಕೆಲವೊಂದು ಪ್ರಯೋಗ ನಡೆಸುವ ಸಾಧ್ಯತೆಯಿದೆ. ಇನ್ನು ನಾಯಕ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಮೊದಲ ಆಯ್ಕೆಯ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆ.ಎಲ್. ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಮೊದಲ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ.