ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿದೆ. ಟಿ20 ಸರಣಿಯಲ್ಲಿ ಪ್ರಶಸ್ತಿ ಕನಸನ್ನು ಜೀವಂತವಾಗಿರಿಸಿಕೊಳ್ಳಬೇಕಿದ್ದರೆ 4ನೇ ಟಿ20 ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಟೀಂ ಇಂಡಿಯಾ ಸಿಲುಕಿದೆ.
4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗ ಹೇಗಿರಬಹುದು? ತಂಡದಲ್ಲಿ ಯಾರಿಗೆಲ್ಲಾ ಸ್ಥಾನ ಸಿಗಬಹುದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.