ಕೊಲಂಬೊ: ಭಾರತ ಹಾಗೂ ಶ್ರೀಲಂಕಾ ನಡುವಿನ ನಿರ್ಣಾಯಕ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಾಕಷ್ಟು ಪೈಪೋಟಿಯಿಂದ ಕೂಡಿರುವ ಸಾಧ್ಯತೆಯಿದೆ. ಮೊದಲ ಪಂದ್ಯವನ್ನು ಟೀಂ ಇಂಡಿಯಾ 38 ರನ್‌ಗಳ ಜಯ ಸಾಧಿಸಿತ್ತು. ಇನ್ನು ಎರಡನೇ ಪಂದ್ಯದಲ್ಲಿ ಲಂಕಾ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಇದೀಗ ನಿರ್ಣಾಯಕ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಶಾಕ್ ಎದುರಾಗಿದ್ದು, ನವದೀಪ್ ಮೂರನೇ ಟಿ20 ಪಂದ್ಯದಲ್ಲಿ ಆಡುವುದು ಅನುಮಾನ ಎನಿಸಿದೆ. ಮೊದಲೇ ಕೋವಿಡ್ ಶಾಕ್‌ನಿಂದ ಕಂಗೆಟ್ಟಿರುವ ಭಾರತ ತಂಡಕ್ಕೆ ಇದು ಮತ್ತಷ್ಟು ಹಿನ್ನೆಡೆಯಾಗುವ ಸಾಧ್ಯತೆಯಿದೆ.
ಲಂಕಾ ಎದುರಿನ ನಿರ್ಣಾಯಕ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ತಂಡ ಹೀಗಿದೆ ನೋಡಿ