ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಕೊನೆಯ ಹಾಗೂ ನಿರ್ಣಾಯಕ ಟಿ20 ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಟಿ20 ಟ್ರೋಫಿ ಮೇಲೆ ಕಣ್ಣಿಟ್ಟಿದೆ.
ಕಳೆದ ಪಂದ್ಯದಲ್ಲಿ ರೋಚಕ ಗೆಲುವು ದಾಖಲಿಸಿರುವ ಟೀಂ ಇಂಡಿಯಾ, ಇದೀಗ ನಿರ್ಣಾಯಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಕೆಲವು ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಕೊನೆಯ ಟಿ20 ಪಂದ್ಯಕ್ಕೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ