ದುಬೈ: ಭಾರತ ಕ್ರಿಕೆಟ್ ತಂಡವು ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ದಯನೀಯ ಕುಸಿತ ಕಂಡಿದೆ. ತವರಿನಲ್ಲಿ ಎರಡು ಬಾರಿ ವೈಟ್ ವಾಷ್ ಅನುಭವಿಸಿರುವ ಭಾರತ ತಂಡ, ಇದೀಗ ಅಂಕಪಟ್ಟಿಯಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ
ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲೇ ವೈಟ್‌ವಾಶ್ ಮುಖಭಂಗಕ್ಕೆ ಒಳಗಾಗಿದ್ದ ಭಾರತ ತಂಡ, 2025-27ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ.
26
9 ಪಂದ್ಯದಲ್ಲಿ 4ರಲ್ಲಷ್ಟೇ ಗೆಲುವು
ಶುಭ್‌ಮನ್ ಗಿಲ್ ನೇತೃತ್ವದ ಭಾರತ ತಂಡ 9 ಪಂದ್ಯಗಳ ಪೈಕಿ 4ರಲ್ಲಿ ಗೆದ್ದು, 4ರಲ್ಲಿ ಸೋತಿದೆ. ಒಂದು ಪಂದ್ಯ ಡ್ರಾಗೊಂಡಿದೆ. ಶೇ.48.15 ಗೆಲುವಿನ ಪ್ರತಿಶತ ಹೊಂದಿದೆ.
36
ಐದನೇ ಸ್ಥಾನದಲ್ಲಿದ್ದ ಭಾರತ
ಆಫ್ರಿಕಾ ವಿರುದ್ಧ ಸರಣಿ ಸೋಲಿನ ಬಳಿಕ ಭಾರತ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿತ್ತು.
ಆದರೆ ಶುಕ್ರವಾರ ವೆಸ್ಟ್‌ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್ ಜಯಗಳಿಸಿದ ನ್ಯೂಜಿಲೆಂಡ್, ಅಂಕಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿ 4ನೇ ಸ್ಥಾನಕ್ಕೇರಿತು.
56
7ನೇ ಸ್ಥಾನಕ್ಕೆ ಕುಸಿಯುವ ಭೀತಿಯಲ್ಲಿ ಭಾರತ
ಆರಂಭಿಕ 2 ಆವೃತ್ತಿಗಳಲ್ಲಿ ರನ್ನರ್-ಅಪ್ ಆಗಿದ್ದ ಭಾರತ, ಅಂಕಪಟ್ಟಿಯಲ್ಲಿ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ. ಆಸ್ಟ್ರೇಲಿಯಾ ಸರಣಿಯಲ್ಲಿ ಇಂಗ್ಲೆಂಡ್(ಸದ್ಯ 7ನೇ ಸ್ಥಾನ) ಉತ್ತಮ ಪ್ರದರ್ಶನ ನೀಡಿ ಗೆದ್ದರೆ, ಭಾರತ 7ನೇ ಸ್ಥಾನಕ್ಕೆ ಕುಸಿಯಬಹುದು.
66
ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ
ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ ಪಟ್ಟಿಯಲ್ಲೀಗ ಅಗ್ರಸ್ಥಾನದಲ್ಲಿದೆ. ತಂಡ ಆಡಿರುವ 5 ಪಂದ್ಯಗಳಲ್ಲೂ ಗೆದ್ದಿದೆ. ದ.ಆಫ್ರಿಕಾ 2ನೇ, ಶ್ರೀಲಂಕಾ 3ನೇ, ನ್ಯೂಜಿಲೆಂಡ್ 4ನೇ, ಪಾಕಿಸ್ತಾನ 5ನೇ ಸ್ಥಾನದಲ್ಲಿದೆ.