ಚೊಚ್ಚಲ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿಚಂದ್ರನ್ ಅಶ್ವಿನ್
First Published | Jun 24, 2021, 6:15 PM ISTಸೌಥಾಂಪ್ಟನ್: ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2019-2021ನೇ ಸಾಲಿನ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಸಾಧನೆ ಮಾಡಿದ್ದಾರೆ. ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ವೇಳೆ 4 ವಿಕೆಟ್ ಕಬಳಿಸುವುದರೊಂದಿಗೆ ಅಶ್ವಿನ್ ಅತಿಹೆಚ್ಚು ಬಲಿಪಡೆದ ಬೌಲರ್ ಎನ್ನುವ ದಾಖಲೆ ಬರೆದಿದ್ದಾರೆ.
34 ವರ್ಷದ ತಮಿಳುನಾಡು ಮೂಲದ ಸ್ಪಿನ್ನರ್ ಅಶ್ವಿನ್ ಚೊಚ್ಚಲ ಆವೃತ್ತಿಯ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ 14 ಪಂದ್ಯಗಳನ್ನಾಡಿ 71 ವಿಕೆಟ್ ಕಬಳಿಸುವ ಮೂಲಕ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ ಅವರನ್ನು ಹಿಂದಿಕ್ಕಿ ಟೆಸ್ಟ್ ವಿಶ್ವಕಪ್‌ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ದಾಖಲೆ ನಿರ್ಮಿಸಿದ್ದಾರೆ.
ಭಾರತ ವಿರುದ್ದ ನ್ಯೂಜಿಲೆಂಡ್ 8 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಚೊಚ್ಚಲ ಟೆಸ್ಟ್ ಚಾಂಪಿಯನ್‌ಶಿಪ್ ಮುಕ್ತಾಯವಾಗಿದೆ. ಚೊಚ್ಚಲ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಟಾಪ್ 5 ಬೌಲರ್‌ಗಳ ವಿವರ ಇಲ್ಲಿದೆ ನೋಡಿ.