ಎಂ ಎಸ್ ಧೋನಿ ಸರಿಯಾಗಿ ಸಂಜೆ 7.29ಕ್ಕೆ ನಿವೃತ್ತಿ ಘೋಷಿಸಿದ್ದೇಕೆ..? ಇಲ್ಲಿದೆ ನಿಜವಾದ ಕಾರಣ

First Published | Aug 16, 2020, 1:07 PM IST

ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿಯಾದಂತೆ ಮಹೇಂದ್ರ ಸಿಂಗ್ ಧೋನಿ ಸೀಮಿತ ಓವರ್‌ಗಳ ಕ್ರಿಕೆಟ್‌ಗೂ ಅಚಾನಕ್‌ ಆಗಿ ಗುಡ್‌ ಬೈ ಹೇಳಿದ್ದಾರೆ. 13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ ಧೋನಿ ಸಾಮಾಜಿಕ ಜಾಲತಾಣದಲ್ಲಿ ತಣ್ಣಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯಂದೇ ಇಂದಿನ 19:29(7.29) ಗಂಟೆಯ ಬಳಿಕ ನಾನು ನಿವೃತ್ತಿಯಾಗಿದ್ದೇನೆ ಎಂದು ಪರಿಗಣಿಸಿ ಎಂದು ಹೇಳುವ ನಿವೃತ್ತಿಯಾಗಿದ್ದಾರೆ. ಅಷ್ಟಕ್ಕೂ ಧೋನಿ ಸರಿಯಾಗಿ 19:29 ಅಂದರೆ 07.29ಕ್ಕೆ ನಿವೃತ್ತಿಯಾಗಿದ್ದು ಏಕೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ಇಡೀ ದೇಶದಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವಾಗಲೇ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಘೋಷಿಸಿದರು.
ಧೋನಿ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂ ಮೂಲಕ ಜಗತ್ತಿಗೆ ತಮ್ಮ ಅಂತಾರಾಷ್ಟ್ರೀಯ ನಿವೃತ್ತಿಯನ್ನು ಘೋಷಿಸಿದರು.
Tap to resize

ಜುಲೈ 10, 2019ರಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಧೋನಿ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದರು.
2019ರ ವಿಶ್ವಕಪ್ ಸೆಮಿಫೈನಲ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಆಘಾತಕಾರಿ ಸೋಲು ಕಂಡಿತ್ತು.
ಧೋನಿ ಆ ಪಂದ್ಯದಲ್ಲಿ 50 ರನ್ ಬಾರಿಸಿ ರನೌಟ್ ಆಗಿದ್ದರು. ಇದೇ ಧೋನಿ ಪಾಲಿನ ಕೊನೆಯ ಇನಿಂಗ್ಸ್ ಎಂದು ಊಹಿಸಿದ್ದರು. ಆದರೆ ಆ ಊಹೆ ಸುಮಾರು ಒಂದು ವರ್ಷದ ಬಳಿಕ ನಿಜವಾಗಿದೆ.
ಮಾರ್ಟಿನ್ ಗಪ್ಟಿಲ್ ಚುರುಕಿನ ಕ್ಷೇತ್ರ ರಕ್ಷಣೆಯಿಂದಾಗಿ ಧೋನಿ ರನೌಟ್ ಆಗಿದ್ದರು. ಇದರೊಂದಿಗೆ ಭಾರತದ ಫೈನಲ್ ಪ್ರವೇಶದ ಕನಸು ಕಮರಿಹೋಯಿತು.
ಸೆಮಿಫೈನಲ್ ಸೋಲಿನ ಬಗ್ಗೆ ಟೀಂ ಇಂಡಿಯಾ ಕ್ರಿಕೆಟ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಟೀಂ ಇಂಡಿಯಾ ಜುಲೈ 10ರಂದು ಸಂಜೆ ಸರಿಯಾಗಿ 7.29 PM ಗೆ ಸೋಲನ್ನನುಭವಿಸಿತ್ತು.
ಹೀಗಾಗಿ ಧೋನಿ ಅದೇ ಸಮಯಕ್ಕೆ ಸರಿಯಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ.
ನನಗೆ ಪ್ರೀತಿ ಹಾಗೂ ಬೆಂಬಲ ತೋರಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನ 1929 ಗಂಟೆಯ ಬಳಿಕ ನಾನು ನಿವೃತ್ತಿಯಾಗಿದ್ದೇನೆ ಎಂದು ಭಾವಿಸಿ ಎಂದು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಕ್ರಿಕೆಟ್‌ನಲ್ಲಿ ಟೈಮಿಂಗ್ ತುಂಬಾನೆ ಮಹತ್ವದ್ದಾಗಿದೆ. ಹೀಗಾಗಿ ಧೋನಿ ಸರಿಯಾದ ಸಮಯವನ್ನೇ ಆಯ್ದುಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
ಇನ್ನು ಮುಂದೆ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಈ ವರ್ಷ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಲಿದ್ದಾರೆ.

Latest Videos

click me!