ಮುಂಬೈ ಇಂಡಿಯನ್ಸ್‌ನಲ್ಲಿ ಮಹಾ ಸಂಚಲನ; ಫ್ರಾಂಚೈಸಿ ಮಾತು ಕೇಳಿ ಮುಂಬೈ ತಂಡವನ್ನು ಅನ್‌ಫಾಲೋ ಮಾಡಿದ್ರಾ ಸ್ಟಾರ್ ಕ್ರಿಕೆಟಿಗ?

Published : Jun 08, 2026, 04:40 PM IST

ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ತೋರಿತ್ತು. ಇದೀಗ ಮುಂಬೈ ಇಂಡಿಯನ್ಸ್ ತಂಡದಲ್ಲಿ ಮಹಾ ಸಂಚಲನ ಶುರುವಾಗಿದ್ದು, ಸ್ಟಾರ್ ಕ್ರಿಕೆಟಿಗ ತಂಡ ತೊರೆಯಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. 

PREV
16
2026ರಲ್ಲಿ ಮುಂಬೈ ಇಂಡಿಯನ್ಸ್ ನೀರಸ ಪ್ರದರ್ಶನ

2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ನೀರಸ ಪ್ರದರ್ಶನ ತೋರುವ ಮೂಲಕ ಲೀಗ್ ಹಂತದಲ್ಲಿಯೇ ಹೊರಬಿದ್ದು ಮುಖಭಂಗ ಅನುಭವಿಸಿತ್ತು. ಮುಂಬೈ ಇಂಡಿಯನ್ಸ್ ತಂಡವು ಆಡಿದ 14 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಗೆದ್ದು, 10 ಪಂದ್ಯಗಳಲ್ಲಿ ಸೋತು ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆದು ತನ್ನ ಅಭಿಯಾನ ಮುಗಿಸಿತ್ತು.

26
ಈಗಾಗಲೇ ಮುಂಬೈ ಇಂಡಿಯನ್ಸ್ ನಾಯಕತ್ವ ತೊರೆದಿರುವ ಹಾರ್ದಿಕ್ ಪಾಂಡ್ಯ

ಇನ್ನು ತಂಡದ ನೀರಸ ಪ್ರದರ್ಶನದಿಂದ ಬೇಸತ್ತು ಸ್ವತಃ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟೂರ್ನಿಯ ಮಧ್ಯದಲ್ಲಿಯೇ ತಂಡದಿಂದ ಹೊರಗುಳಿಯುವ ತೀರ್ಮಾನಕ್ಕೆ ಬಂದಿದ್ದರು ಎಂದು ವರದಿಯಾಗಿತ್ತು. ಇನ್ನು ಟೂರ್ನಿ ಮುಕ್ತಾಯದ ಬಳಿಕ ಹಾರ್ದಿಕ್ ಪಾಂಡ್ಯ ತಾವು ಮುಂಬೈ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಫ್ರಾಂಚೈಸಿಗೆ ತಿಳಿಸಿದ್ದಾರೆ ಎಂದು ವರದಿಯಾಗಿತ್ತು.

36
ಮುಂಬೈ ಇಂಡಿಯನ್ಸ್ ತಂಡ ತೊರೆಯಲು ಮುಂದಾದ್ರಾ ಸೂರ್ಯಕುಮಾರ್ ಯಾದವ್?

ಇನ್ನು ಒಂದು ವೇಳೆ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆದರೆ, ಮುಂದಿನ ಕ್ಯಾಪ್ಟನ್ ತಾವೇ ಎನ್ನುವ ಲೆಕ್ಕಾಚಾರದಲ್ಲಿದ್ದ ಸೂರ್ಯಕುಮಾರ್ ಯಾದವ್‌ಗೆ ಮುಂಬೈ ಫ್ರಾಂಚೈಸಿಯ ಸಂದೇಶ ದೊಡ್ಡ ಶಾಕ್ ನೀಡಿದಂತೆ ಮಾಡಿದ್ದು, ಇದೀಗ ತಂಡ ತೊರೆಯಲು ಮುಂದಾಗಿದ್ದಾರೆ ಎನ್ನುವ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಕೇಳಿ ಬಂದಿತ್ತು.

46
ಸೂರ್ಯಕುಮಾರ್ ಯಾದವ್‌ಗೆ ಭ್ರಮನಿರಸನ

ಆದರೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಭವಿಷ್ಯದ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಮುಂಬರುವ ಐಪಿಎಲ್ ಟೂರ್ನಿಗೆ ತಿಲಕ್ ವರ್ಮಾಗೆ ನಾಯಕತ್ವ ಪಟ್ಟ ಕಟ್ಟಲು ಮುಂದಾಗಿದೆ ಎಂದು ತಿಳಿದುಬಂದಿದೆ. ಮುಂಬೈ ಫ್ರಾಂಚೈಸಿಯ ಈ ನಿರ್ಧಾರದಿಂದಾಗಿ ನಾಯಕನಾಗುವ ಕನಸು ಕಾಣುತ್ತಿದ್ದ ಸೂರ್ಯಕುಮಾರ್ ಯಾದವ್‌ಗೆ ಭ್ರಮನಿರಸನವಾಗಿದ್ದು, ಇದೀಗ ಮುಂಬೈ ಇಂಡಿಯನ್ಸ್‌ಗೆ ಗುಡ್ ಬೈ ಹೇಳಲು ರೆಡಿಯಾಗಿದ್ದಾರೆ ಎಂದು ವರದಿಯಾಗಿದೆ.

56
ಸೂರ್ಯಕುಮಾರ್‌ಗೆ ಈ ಹಿಂದೆಯೂ ಶಾಕ್ ನೀಡಿದ್ದ ಮುಂಬೈ ಫ್ರಾಂಚೈಸಿ

ಈ ಮೊದಲು ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದಾಗಲೂ ಸೀನಿಯಾರಿಟಿಯಂತೆ ತಾವೇ ಮುಂಬೈ ಇಂಡಿಯನ್ಸ್ ನಾಯಕರಾಗುವುದು ಎಂದು ಸೂರ್ಯಕುಮಾರ್ ಯಾದವ್ ಅಂದುಕೊಂಡಿದ್ದರು. ಆದರೆ 2024ರಲ್ಲಿ ಗುಜರಾತ್ ಟೈಟಾನ್ಸ್ ತಂಡದಿಂದ ಹಾರ್ದಿಕ್ ಪಾಂಡ್ಯ ಅವರನ್ನು ಕರೆತಂದು ಮುಂಬೈ ಫ್ರಾಂಚೈಸಿ ನಾಯಕ ಪಟ್ಟ ಕಟ್ಟಿತ್ತು. ಆಗಲೂ ಸೂರ್ಯಕುಮಾರ್ ಯಾದವ್ ಸೋಷಿಯಲ್ ಮೀಡಿಯಾದಲ್ಲಿ ಬೇಸರ ಹೊರಹಾಕಿದ್ದರು.

66
ಮುಂಬೈ ಇಂಡಿಯನ್ಸ್ ಅನ್‌ಫಾಲೋ ಮಾಡಿದ ಸೂರ್ಯಕುಮಾರ್ ಯಾದವ್

ಇದೀಗ ಮತ್ತೆ ತಿಲಕ್ ವರ್ಮಾ ಭವಿಷ್ಯದ ಕ್ಯಾಪ್ಟನ್ ಎನ್ನುವ ಚರ್ಚೆ ಜೋರಾದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಜತೆಗಿನ ಸಖ್ಯ ಕಡಿದುಕೊಳ್ಳಲು ಸೂರ್ಯಕುಮಾರ್ ರೆಡಿಯಾಗಿದ್ದಾರೆ. ಇದೇ ಕಾರಣಕ್ಕೆ ಸೂರ್ಯಕುಮಾರ್ ಯಾದವ್, ಮುಂಬೈ ಇಂಡಿಯನ್ಸ್ ಸೋಷಿಯಲ್ ಮೀಡಿಯಾ ಖಾತೆಯನ್ನು ಅನ್‌ಫಾಲೋ ಮಾಡಿದ್ದಾರೆ. ಇದರ ಜತೆಗೆ ಮುಂಬೈ ಇಂಡಿಯನ್ಸ್‌ನ ಎಲ್ಲಾ ಫೋಟೋ ಹಾಗೂ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories