ನ್ಯೂಜಿಲೆಂಡ್ ಎದುರಿನ ಟಿ20 ಸರಣಿಗೂ ಮುನ್ನ ಭಾರತಕ್ಕೆ ಬಿಗ್ ಶಾಕ್; ಸ್ಟಾರ್ ಆಟಗಾರ ಟಿ20 ವಿಶ್ವಕಪ್‌ ಆಡೋದು ಡೌಟ್!

Published : Jan 08, 2026, 11:34 AM IST

ನ್ಯೂಜಿಲೆಂಡ್ ಎದುರಿನ ಐದು ಪಂದ್ಯಗಳ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ತಿಲಕ್ ವರ್ಮಾಗೆ ಗಾಯವಾಗಿದ್ದು, ಭಾರತ ತಂಡಕ್ಕೆ ಹಿನ್ನಡೆ ಎನಿಸಿದೆ. ಇನ್ನು ತಿಲಕ್ ವರ್ಮಾ ಬದಲಿಗೆ ಯಾರಿಗೆ ತಂಡದಲ್ಲಿ ಸ್ಥಾನ ಸಿಗಲಿದೆ ಎನ್ನುವ ಕುತೂಹಲ ಜೋರಾಗಿದೆ.

PREV
18
ಟೀಂ ಇಂಡಿಯಾಗೆ ಬಿಗ್ ಶಾಕ್

2025ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ. ತಂಡದ ಪ್ರಮುಖ ಬ್ಯಾಟರ್ ಕಿವೀಸ್ ಎದುರಿನ ಟಿ20 ಸರಣಿಯಿಂದ ಹೊರಬಿದ್ದಿದ್ದು, ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯಗಳಿಗೂ ಅಲಭ್ಯರಾಗುವ ಸಾಧ್ಯತೆಯಿದೆ.

28
ಕಿವೀಸ್ ಎದುರಿನ ಪಂದ್ಯಕ್ಕೂ ಮುನ್ನ ತಿಲಕ್‌ಗೆ ಗಾಯ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೂ ಮುನ್ನ ಯುವ ಆಟಗಾರ ತಿಲಕ್ ವರ್ಮಾ ಗಾಯಗೊಂಡಿರುವುದು ಭಾರತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಹೊಟ್ಟೆಯ ಕೆಳಭಾಗದಲ್ಲಿ ಗಾಯಗೊಂಡಿರುವ ತಿಲಕ್ ವರ್ಮಾ, ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಆಡುವುದಿಲ್ಲ ಎಂದು ವರದಿಯಾಗಿದೆ.

38
ವಿಜಯ್ ಹಜಾರೆ ಟ್ರೋಫಿ ಟೂರ್ನಿ ಆಡುವಾಗ ಗಾಯ

ವಿಜಯ್ ಹಜಾರೆ ಟ್ರೋಫಿಯಲ್ಲಿ ಹೈದರಾಬಾದ್ ಪರ ರಾಜ್‌ಕೋಟ್‌ನಲ್ಲಿ ಆಡುವಾಗ ತಿಲಕ್‌ಗೆ ಗಾಯವಾಗಿತ್ತು. ಹೊಟ್ಟೆ ನೋವು ಕಾಣಿಸಿಕೊಂಡ ನಂತರ, ತಿಲಕ್ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನ ವೈದ್ಯರೊಂದಿಗೆ ಸಮಾಲೋಚಿಸಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿ ಸ್ಕ್ಯಾನಿಂಗ್‌ಗೆ ಒಳಪಡಿಸಲಾಯಿತು.

48
ಶಸ್ತ್ರಚಿಕಿತ್ಸೆಗೆ ಒಳಗಾದರೇ ನಾಲ್ಕು ವಾರ ರೆಸ್ಟ್

ತಿಲಕ್‌ಗೆ ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದಾರೆ ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾದರೆ, ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲು ಮೂರರಿಂದ ನಾಲ್ಕು ವಾರಗಳು ಬೇಕಾಗಬಹುದು ಎಂದು ವರದಿಯಾಗಿದೆ. ಹಾಗಾದಲ್ಲಿ, ಈ ತಿಂಗಳ 21 ರಂದು ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ತಿಲಕ್ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ.

58
ಟಿ20 ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯಗಳಿಂದಲೂ ಔಟ್?

ಶಸ್ತ್ರಚಿಕಿತ್ಸೆಗೆ ಒಳಗಾದರೆ, ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮಾತ್ರವಲ್ಲದೆ, ಮುಂದಿನ ತಿಂಗಳು ಆರಂಭವಾಗಲಿರುವ ಟಿ20 ವಿಶ್ವಕಪ್‌ನ ಗುಂಪು ಹಂತದ ಪಂದ್ಯಗಳಲ್ಲಿ ತಿಲಕ್ ಆಡುವುದು ಅನುಮಾನವಾಗಿದೆ. 

68
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವೇಳಾಪಟ್ಟಿ

ಟಿ20 ವಿಶ್ವಕಪ್‌ನಲ್ಲಿ ಭಾರತದ ಮೊದಲ ಪಂದ್ಯ ಫೆಬ್ರವರಿ 7 ರಂದು ಮುಂಬೈನಲ್ಲಿ ಅಮೆರಿಕ ವಿರುದ್ಧ ನಡೆಯಲಿದೆ. ಫೆಬ್ರವರಿ 12 ರಂದು ದೆಹಲಿಯಲ್ಲಿ ನಮೀಬಿಯಾ, ಫೆಬ್ರವರಿ 15 ರಂದು ಕೊಲಂಬೊದಲ್ಲಿ ಪಾಕಿಸ್ತಾನ ಮತ್ತು ಫೆಬ್ರವರಿ 18 ರಂದು ಅಹಮದಾಬಾದ್‌ನಲ್ಲಿ ನೆದರ್ಲೆಂಡ್ಸ್ ವಿರುದ್ಧ ಭಾರತ ಗುಂಪು ಹಂತದ ಪಂದ್ಯಗಳನ್ನು ಆಡಲಿದೆ.

78
ಸದ್ಯದಲ್ಲೇ ಬದಲಿ ಆಟಗಾರನ ಪ್ರಕಟಿಸುವ ಸಾಧ್ಯತೆ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ತಿಲಕ್ ವರ್ಮಾ ಅವರ ಬದಲಿ ಆಟಗಾರನನ್ನು ಆಯ್ಕೆಗಾರರು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.

88
ಶ್ರೇಯಸ್ ಅಯ್ಯರ್‌ಗೆ ಸ್ಥಾನ?

ತಿಲಕ್ ವರ್ಮಾ ಬದಲಿಗೆ ಶ್ರೇಯಸ್ ಅಯ್ಯರ್, ಕಿವೀಸ್ ಎದುರಿನ ಟಿ20 ಸರಣಿಗೆ ಭಾರತ ತಂಡ ಕೂಡಿಕೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories