ತಿಲಕ್ ವರ್ಮಾ 2023ರ ವಿಶ್ವಕಪ್ ಆಡ್ತಾರಾ? ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ನೀಡಿದ ರೋಹಿತ್ ಶರ್ಮಾ..!

Published : Aug 12, 2023, 03:58 PM ISTUpdated : Aug 12, 2023, 04:14 PM IST

ಬೆಂಗಳೂರು: ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ದಶಕದ ಬಳಿಕ ಭಾರತ ತಂಡವು ಐಸಿಸಿ ಟ್ರೋಫಿ ಗೆಲ್ಲುವ ಕನಸು ಕಾಣುತ್ತಿದೆ. ಹೀಗಿರುವಾಗಲೇ ಟೀಂ ಇಂಡಿಯಾ ನಾಲ್ಕನೇ ಕ್ರಮಾಂಕದ ಬ್ಯಾಟರ್ ಕೊರತೆ ಎದುರಿಸುತ್ತಿದೆ. ಹೀಗಿರುವಾಗಲೇ 4ನೇ ಕ್ರಮಾಂಕದಲ್ಲಿ ತಿಲಕ್‌ ವರ್ಮಾ, ಗಮನಾರ್ಹ ಪ್ರದರ್ಶನ ತೋರುತ್ತಿದ್ದಾರೆ. ಹೀಗಾಗಿ 20 ವರ್ಷದ ತಿಲಕ್‌ ವರ್ಮಾಗೆ ವಿಶ್ವಕಪ್‌ ತಂಡದಲ್ಲಿ ಸ್ಥಾನ ಸಿಗುತ್ತಾ ಎನ್ನುವ ಕುತೂಹಲ ಜೋರಾಗಿದೆ. ಈ ಕುರಿತಂತೆ ನಾಯಕ ರೋಹಿತ್ ಶರ್ಮಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

PREV
114
ತಿಲಕ್ ವರ್ಮಾ 2023ರ ವಿಶ್ವಕಪ್ ಆಡ್ತಾರಾ? ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ನೀಡಿದ ರೋಹಿತ್ ಶರ್ಮಾ..!

ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ನವೆಂಬರ್ 19ರ ವರೆಗೆ ಜರುಗಲಿದ್ದು, ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಿದೆ.

214

2011ರಲ್ಲಿ ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಎಂ ಎಸ್ ಧೋನಿ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ ಕಳೆದೆರಡು ವಿಶ್ವಕಪ್ ಟೂರ್ನಿಯಲ್ಲಿ ಭಾರತ ಸೆಮಿಫೈನಲ್‌ನಲ್ಲಿ ಮುಗ್ಗರಿಸುವ ಮೂಲಕ ನಿರಾಸೆ ಅನುಭವಿಸಿತ್ತು.
 

314

ಇದೀಗ ತವರಿನಲ್ಲೇ ಆಯೋಜನೆಗೊಂಡಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶತಾಯಗತಾಯ ಚಾಂಪಿಯನ್ ಆಗುವ ಕನಸು ಕಾಣುತ್ತಿದೆ ಟೀಂ ಇಂಡಿಯಾ. ಆದರೆ ಭಾರತ ತಂಡಕ್ಕೆ 4ನೇ ಕ್ರಮಾಂಕದಲ್ಲಿ ಸೂಕ್ತ ಬ್ಯಾಟರ್‌ ಕೊರತೆಯನ್ನು ಎದುರಿಸುತ್ತಿದೆ.

414

2019ರ ವಿಶ್ವಕಪ್ ಬಳಿಕ ನಮಗೆ ಯುವರಾಜ್ ಸಿಂಗ್ ಅವರಂತಹ ಆಟಗಾರ ನಮಗೆ ಸಿಕ್ಕಿಲ್ಲ ಎಂದು ಸ್ವತಃ ನಾಯಕ ರೋಹಿತ್ ಶರ್ಮಾ ಒಪ್ಪಿಕೊಂಡಿದ್ದಾರೆ. ಇನ್ನು ಶ್ರೇಯಸ್‌ ಅಯ್ಯರ್ ಹಾಗೂ ರಿಷಭ್ ಪಂತ್ ಕೂಡಾ ಫಿಟ್ನೆಸ್‌ ಸಮಸ್ಯೆ ಎದುರಿಸುತ್ತಿರುವುದರಿಂದ ಅವr ಲಭ್ಯತೆ ಇನ್ನೂ ಖಚಿತವಾಗಿಲ್ಲ.

514

ಹೀಗಿರುವಾಗಲೇ ವೆಸ್ಟ್ ಇಂಡೀಸ್ ಎದುರಿನ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿರುವ ಯುವ ಎಡಗೈ ಬ್ಯಾಟರ್ ತಿಲಕ್ ವರ್ಮಾ, 4ನೇ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿದ್ದಾರೆ. 

614

ವೆಸ್ಟ್ ಇಂಡೀಸ್ ಎದುರಿನ ಮೊದಲ 3 ಪಂದ್ಯಗಳಲ್ಲಿ ತಿಲಕ್ ವರ್ಮಾ ಕ್ರಮವಾಗಿ 39, 51 ಹಾಗೂ ಅಜೇಯ 49 ರನ್ ಸಿಡಿಸಿ ಮಿಂಚಿದ್ದಾರೆ. ಇನ್ನು ಏಕದಿನ ವಿಶ್ವಕಪ್‌ಗೆ 4ನೇ ಕ್ರಮಾಂಕದಲ್ಲಿ ತಿಲಕ್‌ ವರ್ಮಾ ಒಳ್ಳೆಯ ಆಯ್ಕೆ ಎಂದು ಅನುಭವಿಸಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

714

ಕೇವಲ ರವಿಚಂದ್ರನ್ ಅಶ್ವಿನ್ ಮಾತ್ರವಲ್ಲದೇ ಮಾಜಿ ಕ್ರಿಕೆಟಿಗ ವಾಸೀಂ ಜಾಫರ್, ಟೀಂ ಇಂಡಿಯಾ ಆಯ್ಕೆ ಸಮಿತಿ ಮಾಜಿ ಅಧ್ಯಕ್ಷ ಎಂ ಎಸ್ ಕೆ ಪ್ರಸಾದ್ ಕೂಡಾ 20 ವರ್ಷದ ಯುವ ಕ್ರಿಕೆಟಿಗನ ಪರ ಬ್ಯಾಟ್‌ ಬೀಸಿದ್ದು, ವಿಶ್ವಕಪ್‌ಗೆ 4ನೇ ಕ್ರಮಾಂಕದಲ್ಲಿ ಈ ಎಡಗೈ ಬ್ಯಾಟರ್ ಸೂಕ್ತ ಎಂದಿದ್ದಾರೆ.

814

ಮುಂಬರುವ ವಿಶ್ವಕಪ್‌ನಲ್ಲಿ ತಿಲಕ್‌ ವರ್ಮಾಗೆ ಭಾರತ ತಂಡದಲ್ಲಿ ಸ್ಥಾನ ಸಿಗುವುದೇ ಎನ್ನುವ ಮಿಲಿಯನ್ ಡಾಲರ್ ಪ್ರಶ್ನೆಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸ್ಪಷ್ಟ ಉತ್ತರವನ್ನು ನೀಡಿಲ್ಲವಾದರೂ, ಸಾಧ್ಯತೆಗಳನ್ನು ಅಲ್ಲಗಳೆದಿಲ್ಲ. ಇದು ಹೈದರಾಬಾದ್‌ ಮೂಲದ ಕ್ರಿಕೆಟಿಗನಿಗೆ ಮತ್ತಷ್ಟು ಬೂಸ್ಟ್ ಸಿಗುವಂತೆ ಮಾಡಿದೆ.

914

"ಮೇಲ್ನೋಟಕ್ಕೆ ಅವರು ತುಂಬಾ ನಂಬಿಗಸ್ಥ ಬ್ಯಾಟರ್ ರೀತಿ ಕಾಣುತ್ತಿದ್ದಾರೆ. ನಾನು ಅವರನ್ನು ಕಳೆದೆರಡು ವರ್ಷಗಳಿಂದ ನೋಡುತ್ತಾ ಬಂದಿದ್ದೇನೆ. ಅವರಲ್ಲಿ ರನ್ ಗಳಿಸುವ ಹಸಿವಿದೆ. ಇದು ತುಂಬಾ ಮುಖ್ಯವಾದ ಸಂಗತಿಯಾಗಿದೆ" ಎಂದು ಹಿಟ್‌ಮ್ಯಾನ್ ಹೇಳಿದ್ದಾರೆ.

1014

ತಿಲಕ್‌ ವರ್ಮಾ ಕಳೆದೆರಡು ಇಂಡಿಯನ್‌ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದಿದ್ದಾರೆ. ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ತಿಲಕ್ ವರ್ಮಾ ಬ್ಯಾಟಿಂಗ್‌ಗೆ ಮನಸೋತಿದ್ದಾರೆ.

1114

"ಆತನಲ್ಲಿ ವಯಸ್ಸಿಗೆ ಮೀರಿದ ಪ್ರಬುದ್ಧತೆ ಇದೆ. ತಾವು ಹೇಗೆ ಬ್ಯಾಟಿಂಗ್ ಮಾಡಬೇಕು ಎನ್ನುವುದು ಅವರಿಗೆ ಗೊತ್ತಿದೆ. ನಾನು ಅವರ ಜತೆ ಮಾತನಾಡಿದಾಗ, ಅವರಲ್ಲಿರುವ ಬ್ಯಾಟಿಂಗ್ ಜ್ಞಾನ ಅರಿವಾಯಿತು. ಯಾವಾಗ ಚೆಂಡನ್ನು ಬಾರಿಸಬೇಕು, ಯಾವಾಗ ಸಯಮಕ್ಕೆ ಕಾಯಬೇಕು ಎನ್ನುವುದು ಅವರಿಗೆ ಗೊತ್ತಿದೆ" ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.
 

1214

ನಾನು ತಿಲಕ್ ವರ್ಮಾ ಅವರ ಬಗ್ಗೆ ಇಷ್ಟಂತೂ ಹೇಳಬಲ್ಲೇ, ವಿಶ್ವಕಪ್‌ ಬಗ್ಗೆಯಲ್ಲ ನನಗೆ ಗೊತ್ತಿಲ್ಲ. ಆದರೆ ಖಂಡಿತವಾಗಿಯೂ ಅವರು ಪ್ರತಿಭಾನ್ವಿತ ಕ್ರಿಕೆಟಿಗನಾಗಿದ್ದಾರೆ. ಅವರು ಭಾರತ ಪರ ಆಡಿದ ಮೊದಲ ಕೆಲ ಪಂದ್ಯಗಳಲ್ಲೇ ತಾವೆಂಥ ಆಟಗಾರ ಎನ್ನುವುದನ್ನು ತೋರಿಸಿದ್ದಾರೆ ಎಂದು ರೋಹಿತ್ ಶರ್ಮಾ ಚುಟುಕಾಗಿ ಉತ್ತರ ನೀಡಿದ್ದಾರೆ.

1314

ಶ್ರೇಯಸ್ ಅಯ್ಯರ್ ಅನುಪಸ್ಥಿತಿಯಲ್ಲಿ ಮುಂಬರುವ ಏಷ್ಯಾಕಪ್ ಹಾಗೂ ವಿಶ್ವಕಪ್ ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್ ಅಥವಾ ಸೂರ್ಯಕುಮಾರ್ ಯಾದವ್ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಇನ್ನು ಭರ್ಜರಿ ಫಾರ್ಮ್‌ನಲ್ಲಿರುವ ತಿಲಕ್‌ ವರ್ಮಾ ಕೊನೆಯ ಕ್ಷಣದಲ್ಲಿ ಭಾರತ ತಂಡಕ್ಕೆ ಎಂಟ್ರಿ ಕೊಟ್ಟರೂ ಅಚ್ಚರಿಯಿಲ್ಲ.

1414
2023ರ ಭಾರತದ ಪರಿಷ್ಕೃತ ವೇಳಾಪಟ್ಟಿ

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡದ ಸಂಪೂರ್ಣ ವೇಳಾಪಟ್ಟಿ ಹೀಗಿದೆ ನೋಡಿ 

Read more Photos on
click me!

Recommended Stories