ಬೆಂಗಳೂರು: 2026ರ ಐಪಿಎಲ್ ಟೂರ್ನಿಯಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟರ್ ಟಿಮ್ ಡೇವಿಡ್ ಅತಿವೇಗವಾಗಿ ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
ಆರ್‌ಸಿಬಿ ಸ್ಪೋಟಕ ಬ್ಯಾಟರ್ ಟಿಮ್ ಡೇವಿಡ್ ಇದೀಗ ಐಪಿಎಲ್‌ನಲ್ಲಿ ಒಂದು ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಇದಷ್ಟೇ ಅಲ್ಲದೇ ಅತಿ ಕಡಿಮೆ ಎಸೆತಗಳನ್ನು ಎದುರಿಸಿ ಅತಿವೇಗವಾಗಿ ಒಂದು ಸಾವಿರ ರನ್ ಬಾರಿಸಿದ ಎರಡನೇ ಬ್ಯಾಟರ್ ಎನ್ನುವ ಸಾಧನೆ ಮಾಡಿದ್ದಾರೆ.
26
560 ಎಸೆತಗಳಲ್ಲಿ ಒಂದು ಸಾವಿರ ರನ್ ಬಾರಿಸಿದ ಟಿಮ್ ಡೇವಿಡ್
ಹೌದು, ಟಿಮ್ ಡೇವಿಡ್ ಇದೀಗ ಕೇವಲ 560 ಎಸೆತಗಳನ್ನು ಎದುರಿಸಿ ಐಪಿಎಲ್‌ನಲ್ಲಿ ಒಂದು ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ.
36
ಆಂಡ್ರೆ ರಸೆಲ್ ಹೆಸರಿನಲ್ಲಿದೆ ಐಪಿಎಲ್ ರೆಕಾರ್ಡ್
ಇನ್ನು ಐಪಿಎಲ್‌ನಲ್ಲಿ ಅತಿವೇಗವಾಗಿ ಒಂದು ಸಾವಿರ ರನ್ ಪೂರೈಸಿದ ದಾಖಲೆ ವೆಸ್ಟ್ ಇಂಡೀಸ್ ದೈತ್ಯ ಆಟಗಾರ ಆಂಡ್ರೆ ರಸೆಲ್ ಹೆಸರಿನಲ್ಲಿದೆ. ಆಂಡ್ರೆ ರಸೆಲ್ ಕೇವಲ 545 ಎಸೆತಗಳಲ್ಲಿ ಒಂದು ಸಾವಿರ ಸಿಡಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ.
ಇನ್ನು ಇದೇ ವೇಳೆ ಟಿಮ್ ಡೇವಿಡ್ ಸ್ಪೋಟಕ ಬ್ಯಾಟರ್‌ಗಳಾದ ಟ್ರ್ಯಾವಿಸ್ ಹೆಡ್ ಹಾಗೂ ಫಿಲ್ ಸಾಲ್ಟ್ ಅವರ ದಾಖಲೆ ಅಳಿಸಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
56
575 ಎಸೆತಗಳಲ್ಲಿ ಸಾವಿರ ರನ್ ಪೂರೈಸಿದ್ದ ಸಾಲ್ಡ್, ಹೆಡ್
ಸ್ಪೋಟಕ ಬ್ಯಾಟರ್‌ಗಳಾದ ಟ್ರ್ಯಾವಿಸ್ ಹೆಡ್ ಹಾಗೂ ಫಿಲ್ ಸಾಲ್ಟ್ ಐಪಿಎಲ್‌ನಲ್ಲಿ 575 ಎಸೆತಗಳನ್ನು ಎದುರಿಸಿ ಒಂದು ಸಾವಿರ ರನ್ ಪೂರೈಸಿ ಎರಡನೇ ಸ್ಥಾನ ಹಂಚಿಕೊಂಡಿದ್ದರು. ಇದೀಗ ಆ ದಾಖಲೆ ಟಿಮ್ ಡೇವಿಡ್ ಪಾಲಾಗಿದೆ.
66
ಟಾಪ್ 5 ಪಟ್ಟಿಯಲ್ಲಿ ಕ್ಲಾಸೆನ್, ಸೆಹ್ವಾಗ್‌ಗೂ ಸ್ಥಾನ
ಇನ್ನುಳಿದಂತೆ ದಕ್ಷಿಣ ಆಫ್ರಿಕಾ ಮೂಲದ ಹೆನ್ರಿಚ್ ಕ್ಲಾಸೆನ್(594) ಹಾಗೂ ಭಾರತದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ 604 ಎಸೆತಗಳನ್ನು ಎದುರಿಸಿ ಒಂದು ಸಾವಿರ ರನ್ ಪೂರೈಸಿ ಟಾಪ್-5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.