ಇಂದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ. ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರನಾಗಲು ಕೊಹ್ಲಿಗೆ ಕೆಲವೇ ರನ್‌ಗಳ ಅವಶ್ಯಕತೆಯಿದೆ. ಟಾಪ್ 10 ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯನ್ನು ಒದಗಿಸುತ್ತದೆ.
ಇಂದು ಕಾರ್ಡಿಫ್‌ನಲ್ಲಿ ಇಂಗ್ಲೆಂಡ್ ಮತ್ತು ಭಾರತದ ನಡುವಿನ 2ನೇ ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ನೀರಸ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ಇಂದು ಅಬ್ಬರಿಸುವ ಎಲ್ಲಾ ಸಾಧ್ಯತೆಗಳಿವೆ. ಅದೇ ರೀತಿ ರಾಹುಲ್ ದ್ರಾವಿಡ್ ದಾಖಲೆಯೊಂದನ್ನು ಮುರಿಯುವ ಅವಕಾಶವನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಜುಲೈ 14ರ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಕೇವಲ 5 ರನ್ ಪೇರಿಸಿದ್ದರು. ಇಂಗ್ಲೆಂಡ್ ನೆಲದಲ್ಲಿ ಅತಿಹೆಚ್ಚು ರನ್ ಕಲೆಹಾಕಿರುವ ಟೀಂ ಇಂಡಿಯಾದ ಟಾಪ್ 10 ಆಟಗಾರರ ಪಟ್ಟಿ ಇಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.