ಮ್ಯಾಂಚೆಸ್ಟರ್‌ ಬಗ್ಗೆ ನೀವು ತಿಳಿದಿರಲೇಬೇಕಾದ ಇಂಟ್ರೆಸ್ಟಿಂಗ್ ಸಂಗತಿಗಳಿವು!

Published : Jul 23, 2025, 09:47 AM IST

ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯವು ಇಲ್ಲಿ ನಡೆಯಲಿದೆ. ಈ ಸ್ಟೇಡಿಯಂ ಬಗ್ಗೆ ಕ್ರಿಕೆಟ್‌ ಅಭಿಮಾನಿಗಳು ತಿಳಿದಿರಲೇಬೇಕಾದ ಇಂಟ್ರೆಸ್ಟಿಂಗ್ ಸಂಗತಿಗಳು ಇಲ್ಲಿವೆ ನೋಡಿ.

PREV
17

ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ಗೆ ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್‌ ಕ್ರೀಡಾಂಗಣ ಆತಿಥ್ಯ ವಹಿಸಿದ್ದು, ಹೈವೋಲ್ಟೇಜ್ ಕದನ ನಿರೀಕ್ಷಿಸಲಾಗಿದೆ.

27

ಮ್ಯಾಂಚೆಸ್ಟರ್‌ನ ಓಲ್ಡ್‌ ಟ್ರಾಫರ್ಡ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ಟ್ರ್ಯಾಕ್ ರೆಕಾರ್ಡ್ ಹೇಗಿದೆ ನೋಡೋಣ ಬನ್ನಿ.

37

1. ಭಾರತ ಇಲ್ಲಿ 1936ರಿಂದ ಟೆಸ್ಟ್‌ ಆಡುತ್ತಿದೆ. ಆದರೆ ಒಮ್ಮೆಯೂ ಗೆದ್ದಿಲ್ಲ. 9 ಪಂದ್ಯಗಳ ಪೈಕಿ 4ರಲ್ಲಿ ಸೋತಿದ್ದರೆ, 5 ಡ್ರಾಗೊಂಡಿದೆ.

47

2. ಇಂಗ್ಲೆಂಡ್‌ ಮ್ಯಾಂಚೆಸ್ಟರ್‌ನಲ್ಲಿ 86 ಟೆಸ್ಟ್‌ ಆಡಿದೆ. 35ರಲ್ಲಿ ಗೆದ್ದಿದ್ದು, 15ರಲ್ಲಿ ಸೋತಿದೆ. 36 ಪಂದ್ಯ ಡ್ರಾಗೊಂಡಿವೆ.

57

3. ಟೀಂ ಇಂಡಿಯಾ ಇಲ್ಲಿ ಕೊನೆ ಬಾರಿ ಆಡಿದ್ದು 2014ರಲ್ಲಿ. ಆ ಪಂದ್ಯದಲ್ಲಿ ಇನ್ನಿಂಗ್ಸ್ ಹಾಗೂ 54 ರನ್‌ನಿಂದ ಸೋತಿತ್ತು.

67

4. ಮ್ಯಾಂಚೆಸ್ಟರ್‌ನಲ್ಲಿ ಕೊನೆ ಬಾರಿ ಭಾರತದ ಬ್ಯಾಟರ್‌ ಶತಕ ಬಾರಿಸಿದ್ದು 1990ರಲ್ಲಿ ಸಚಿನ್ ತೆಂಡುಲ್ಕರ್ . ಅವರಿಗೆ ಆಗ ಕೇವಲ 17 ವರ್ಷ.

77

5. ಇಂಗ್ಲೆಂಡ್‌ ಇಲ್ಲಿ ಆಡಿರುವ ಕೊನೆ 10 ಪಂದ್ಯಗಳಲ್ಲಿ ಸೋತಿದ್ದು ಒಮ್ಮೆ ಮಾತ್ರ. 8ರಲ್ಲಿ ಗೆದ್ದಿದ್ದರೆ ಮತ್ತೊಂದು ಡ್ರಾ ಆಗಿದೆ.

Read more Photos on
click me!

Recommended Stories