2020ರಲ್ಲಿ ಕ್ರಿಕೆಟ್‌ಗೆ ವಿದಾಯ ಹೇಳಲಿರುವ ಟಾಪ್ 5 ಕ್ರಿಕೆಟಿಗರಿವರು

First Published Jan 1, 2020, 2:06 PM IST

ಬೆಂಗಳೂರು: 2019 ಮುಗಿದು 2020ಕ್ಕೆ ನಾವೆಲ್ಲ ಕಾಲಿಟ್ಟಿದ್ದೇವೆ. 2019ರ ಕಳೆದ ದಶಕದ ಕೊನೆಯ ವರ್ಷವೂ ಆಗಿದ್ದು, ರೋಚಕ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೂ ನಾವೆಲ್ಲ ಸಾಕ್ಷಿಯಾಗಿದ್ದೇವೆ. ಈ ಸಂದರ್ಭದಲ್ಲಿ 2020ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್ ಬೈ ಹೇಳಲಿರುವ ಟಾಪ್ 5 ಆಟಗಾರರನ್ನು ಸುವರ್ಣ ನ್ಯೂಸ್.ಕಾಂ ನಿಮ್ಮ ಮುಂದಿಡುತ್ತಿದೆ.

1. ಡೇಲ್ ಸ್ಟೇನ್: ದಕ್ಷಿಣ ಆಫ್ರಿಕಾ
undefined
ಕಳೆದ ಕೆಲ ವರ್ಷಗಳಿಂದ ದಕ್ಷಿಣ ಆಫ್ರಿಕಾ ಅನುಭವಿ ವೇಗಿ ಡೇಲ್ ಸ್ಟೇನ್ ಕ್ರಿಕೆಟ್ ಆಡಿದ್ದಕ್ಕಿಂತ, ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಗುಳಿದದ್ದೇ ಹೆಚ್ಚು. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಹೆಚ್ಚಿನ ಗಮನ ಹರಿಸಲು 2019ರ ಆಗಸ್ಟ್ 05ರಂದು ಸ್ಟೇನ್ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. 36 ವರ್ಷದ ಸ್ಟೇನ್ ಪದೇ ಪದೇ ಗಾಯಕ್ಕೆ ತುತ್ತಾಗುತ್ತಿದ್ದು, ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದ್ದಾರೆ. ಹೀಗಾಗಿ 2020ರಲ್ಲಿ ಸ್ಟೇನ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದು ಬಹುತೇಕ ಖಚಿತ.
undefined
2. ಮಹೇಂದ್ರ ಸಿಂಗ್ ಧೋನಿ: ಭಾರತ
undefined
ಟೀಂ ಇಂಡಿಯಾದ ಯಶಸ್ವಿ ನಾಯಕರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ಮಹೇಂದ್ರ ಸಿಂಗ್ ಧೋನಿ, 2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. 2019ರ ಐಸಿಸಿ ಏಕದಿನ ವಿಶ್ವಕಪ್ ಬಳಿಕ ಕ್ರಿಕೆಟ್‌ನಿಂದ ದೂರವೇ ಉಳಿದಿರುವ ಧೋನಿ, 2020ರ ಐಸಿಸಿ ಟಿ20 ವಿಶ್ವಕಪ್ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ ಎನ್ನುವುದು ಕ್ರಿಕೆಟ್ ಪಂಡಿತರ ಲೆಕ್ಕಾಚಾರ.
undefined
3. ಕ್ರಿಸ್ ಗೇಲ್: ವೆಸ್ಟ್ ಇಂಡೀಸ್
undefined
Chris Gayleಕೆರಿಬಿಯನ್ ದೈತ್ಯ ಕ್ರಿಕೆಟಿಗ ಕ್ರಿಸ್ ಗೇಲ್ ತವರಿನಲ್ಲಿ ನಡೆದ ಭಾರತದ ವಿರುದ್ಧದ ಸರಣಿಯಲ್ಲಿ ಕಡೆಯ ಬಾರಿಗೆ ವೆಸ್ಟ್ ಇಂಡೀಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅದೇ ಗೇಲ್ ಪಾಲಿಗೆ ಕೊನೆಯ ಏಕದಿನ ಪಂದ್ಯವಾಗುವ ಸಾಧ್ಯತೆಯಿದೆ. ಒಂದು ವೇಳೆ ಅವಕಾಶ ಸಿಕ್ಕರೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಗೇಲ್ ಪಾಲಿಗೆ ಕೊನೆಯ ಅಂತರಾಷ್ಟ್ರೀಯ ಟೂರ್ನಿ ಆಗುವ ಸಾಧ್ಯತೆಯಿದೆ.
undefined
4. ಲಸಿತ್ ಮಾಲಿಂಗ: ಶ್ರೀಲಂಕಾ
undefined
ಯಾರ್ಕರ್ ಸ್ಪೆಷಲಿಸ್ಟ್ ಲಸಿತ್ ಮಾಲಿಂಗ ಈಗಲೂ ಲಂಕಾ ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದಾರೆ. ಈಗಾಗಲೇ ಟೆಸ್ಟ್ ಹಾಗೂ ಏಕದಿನ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿರುವ ಮಾಲಿಂಗ 2020ರ ಟಿ20 ವಿಶ್ವಕಪ್ ಮೇಲೆ ಕಣ್ಣಿಟ್ಟಿದ್ದಾರೆ. ಆ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳುವ ಲೆಕ್ಕಾಚಾರದಲ್ಲಿದ್ದಾರೆ ಮಾಲಿಂಗ.
undefined
1. ಇಯಾನ್ ಮಾರ್ಗನ್ : ಇಂಗ್ಲೆಂಡ್
undefined
ಈ ಹೆಸರು ಆಶ್ಚರ್ಯವಾದರೂ ಸತ್ಯ. ಇಂಗ್ಲೆಂಡ್‌ಗೆ ಚೊಚ್ಚಲ ವಿಶ್ವಕಪ್ ಗೆದ್ದುಕೊಟ್ಟ ನಾಯಕ ಇಯಾನ್ ಮಾರ್ಗನ್ ಪಾಲಿಗೆ 2020 ವಿದಾಯದ ವರ್ಷವಾಗುವ ಸಾಧ್ಯತೆಯಿದೆ. ಮಾರ್ಗನ್ ಸತತವಾಗಿ ಸೀಮಿತ ಓವರ್‌ಗಳ ಕ್ರಿಕೆಟ್ ಆಡುತ್ತಿದ್ದಾರೆ. 2023ರ ವಿಶ್ವಕಪ್ ತಂಡದಲ್ಲಿ ಮಾರ್ಗನ್ ಸ್ಥಾನ ಪಡೆಯುವುದು ಅನುಮಾನ. ಹೀಗಾಗಿ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಾರ್ಗನ್ 2020ರ ಟಿ20 ವಿಶ್ವಕಪ್ ಬಳಿಕ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್ ಬೈ ಹೇಳುವ ಸಾಧ್ಯತೆಯಿದೆ
undefined
click me!