ಏಷ್ಯಾಕಪ್ ಆಡುತ್ತಿರುವವರ ಪೈಕಿ ಅತಿಹೆಚ್ಚು ಇನ್‌ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಹೊಂದಿರುವ ಟಾಪ್ 5 ಆಟಗಾರರಿವರು!

Published : Sep 20, 2025, 03:58 PM IST

ದುಬೈ: 2025ರ ಏಷ್ಯಾಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಇಂದಿನಿಂದ ಸೂಪರ್ 4 ಪಂದ್ಯಗಳು ಆರಂಭವಾಗುತ್ತಿವೆ. ಭಾರತ 'ಎ' ಗುಂಪಿನಿಂದ ಅಗ್ರಸ್ಥಾನಿಯಾಗಿ ಸೂಪರ್ 4 ಪ್ರವೇಶಿಸಿದೆ. ಭಾರತೀಯ ಆಟಗಾರರ ಪೈಕಿ 5 ಅತಿಹೆಚ್ಚು ಫಾಲೋವರ್ಸ್‌ ಯಾರಿಗಿದೆ ನೋಡೋಣ ಬನ್ನಿ. 

PREV
110
5. ಸಂಜು ಸ್ಯಾಮ್ಸನ್: 10.4 ಮಿಲಿಯನ್

ಕೇರಳ ಮೂಲದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ ಇನ್‌ಸ್ಟಾಗ್ರಾಂನಲ್ಲಿ ಸಾಕಷ್ಟು ಜನಪ್ರಿಯ ಸೆಲಿಬ್ರಿಟಿಯಾಗಿದ್ದಾರೆ. ಸಂಜು ಸ್ಯಾಮ್ಸನ್‌ಗೆ ಇನ್‌ಸ್ಟಾಗ್ರಾಂನಲ್ಲಿ ಬರೋಬ್ಬರಿ 10.4 ಮಿಲಿಯನ್ ಫಾಲೋವರ್ಸ್ ಇದ್ದಾರೆ.

210
ಬ್ಯಾಟಿಂಗ್‌ನಲ್ಲಿ ಮಿಂಚಿದ ಸಂಜು

ಒಮಾನ್ ಎದುರಿನ ಪಂದ್ಯದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ಗಳಿಸಿಕೊಂಡ ಸಂಜು ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದು, ಪಾಕಿಸ್ತಾನ ಎದುರಿನ ಕದನಕ್ಕೆ ಸಜ್ಜಾಗುತ್ತಿದ್ದಾರೆ.

310
4. ಶುಭ್‌ಮನ್ ಗಿಲ್: 17.3 ಮಿಲಿಯನ್

ಟೀಂ ಇಂಡಿಯಾ ಉಪನಾಯಕ ಹಾಗೂ ಟೆಸ್ಟ್ ತಂಡದ ನಾಯಕ ಶುಭ್‌ಮನ್ ಗಿಲ್‌ಗೆ ಬರೋಬ್ಬರಿ 17.3 ಮಿಲಿಯನ್ ಇನ್‌ಸ್ಟಾಗ್ರಾಂ ಫಾಲೋವರ್ಸ್ ಇದ್ದಾರೆ.

410
ಗಿಲ್ ಬ್ಯಾಟಿಂಗ್ ವೈಫಲ್ಯ

ಇಂಗ್ಲೆಂಡ್ ಎದುರಿನ ಟೆಸ್ಟ್‌ ಸರಣಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಗಿಲ್, ಏಷ್ಯಾಕಪ್ ಟೂರ್ನಿಯಲ್ಲಿ ಆಡಿದ ಮೊದಲ ಮೂರು ಪಂದ್ಯಗಳಲ್ಲೂ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಅನುಭವಿಸಿದ್ದಾರೆ. ಇದೀಗ ಪಾಕ್ ಎದುರು ಫಾರ್ಮ್ ಕಂಡುಕೊಳ್ಳಲು ತುದಿಗಾಲಿನಲ್ಲಿ ನಿಂತಿದ್ದಾರೆ.

510
3. ಸೂರ್ಯಕುಮಾರ್ ಯಾದವ್: 18.8 ಮಿಲಿಯನ್

ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರಿಗೆ ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ 18.8 ಮಿಲಿಯನ್ ಫಾಲೋವರ್ಸ್ ಇದ್ದಾರೆ.

610
ಭಾರತ ಟಿ20 ತಂಡದ ನಾಯಕ

2024ರಿಂದೀಚೆಗೆ ಭಾರತ ಟಿ20 ನಾಯಕರಾಗಿ ನೇಮಕಗೊಂಡಿರುವ ಸೂರ್ಯ, ತಂಡವನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

710
2. ಜಸ್ಪ್ರೀತ್ ಬುಮ್ರಾ: 21.1 ಮಿಲಿಯನ್

ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾಗೆ ಇನ್‌ಸ್ಟಾಗ್ರಾಂನಲ್ಲಿ 21.1 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಬುಮ್ರಾ ಭಾರತದ ನಂಬಿಗಸ್ಥ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.

810
ಬುಮ್ರಾ ನಂಬಿಗಸ್ಥ ಬೌಲರ್

ಜಸ್ಪ್ರೀತ್ ಬುಮ್ರಾ ಭಾರತದಲ್ಲಿ ಮಾತ್ರವಲ್ಲದೇ ಭಾರತದಾಚೆಗೂ ಹಲವಾರು ಬಾರಿ ಭಾರತಕ್ಕೆ ಅವಿಸ್ಮರಣೀಯ ಗೆಲುವು ತಂದುಕೊಟ್ಟಿದ್ದಾರೆ. ಇನ್‌ಸ್ಟಾಗ್ರಾಂನಲ್ಲೂ ಆಗಾಗ ಬುಮ್ರಾ ತಮ್ಮ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿರುತ್ತಾರೆ.

910
1. ಹಾರ್ದಿಕ್ ಪಾಂಡ್ಯ: 43 ಮಿಲಿಯನ್ ಫಾಲೋವರ್ಸ್

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಇನ್‌ಸ್ಟಾಗ್ರಾಂನಲ್ಲಿ ಬರೋಬ್ಬರಿ 43 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. 2024ರ ಐಸಿಸಿ ಟಿ20 ವಿಶ್ವಕಪ್ ಹಾಗೂ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲುವಿನಲ್ಲಿ ಪಾಂಡ್ಯ ಪ್ರಮುಖ ಪಾತ್ರ ವಹಿಸಿದ್ದರು.

1010
ಗಮನ ಸೆಳೆದ ಪಾಂಡ್ಯ ಹೇರ್‌ಸ್ಟೈಲ್

ಹಾರ್ದಿಕ್ ಪಾಂಡ್ಯ ಖಾಸಗಿ ಹಾಗೂ ವೃತ್ತಿಪರ ಫೋಟೋಗಳನ್ನು ಆಗಾಗ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುತ್ತಲೇ ಬಂದಿದ್ದಾರೆ. ಈ ಬಾರಿಯ ಪಾಂಡ್ಯ ಹೇರ್‌ಸ್ಟೈಲ್ ಏಷ್ಯಾಕಪ್ ಟೂರ್ನಿಯಲ್ಲಿ ಹೆಚ್ಚು ಗಮನ ಸೆಳೆಯುತ್ತಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories