ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಟಾಪ್ 5 ಬೌಲರ್‌ಗಳಿವರು..!

First Published | May 29, 2024, 5:55 PM IST

ಬೆಂಗಳೂರು: ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಟಾಪ್ 5 ಬೌಲರ್‌ಗಳು ಯಾರು ಎನ್ನುವುದನ್ನು ನೋಡೋಣ ಬನ್ನಿ.
 

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಮುಂಬರುವ ಜೂನ್ 01ರಿಂದ ಆರಂಭವಾಗಲಿದ್ದು, ಈ ಚುಟುಕು ಕ್ರಿಕೆಟ್‌ ಮಹಾಸಂಗ್ರಾಮಕ್ಕೆ ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಆತಿಥ್ಯ ವಹಿಸಿದೆ.

2007ರಲ್ಲಿ ಆರಂಭವಾದ ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ ಟೂರ್ನಿ 17 ವರ್ಷ ಕಳೆದಿದ್ದು, ನಾವಿಂದು ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಟಾಪ್ 5 ಬೌಲರ್‌ಗಳನ್ನು ನೋಡೋಣ ಬನ್ನಿ.

Tap to resize

1. ಶಕೀಬ್ ಅಲ್ ಹಸನ್:

ಬಾಂಗ್ಲಾದೇಶ ತಂಡದ ಸ್ಟಾರ್ ಆಲ್ರೌಂಡರ್ ಶಕೀಬ್ ಅಲ್ ಹಸನ್ 36 ಟಿ20 ವಿಶ್ವಕಪ್ ಪಂದ್ಯಗಳನ್ನಾಡಿ 47 ವಿಕೆಟ್ ಕಬಳಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ.

2. ಶಾಹಿದ್ ಅಫ್ರಿದಿ:

ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ, 2024ನೇ ಸಾಲಿನ ಟಿ20 ವಿಶ್ವಕಪ್ ಟೂರ್ನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮವಾಗಿದ್ದಾರೆ. ಅಫ್ರಿದಿ 34 ಟಿ20 ವಿಶ್ವಕಪ್ ಪಂದ್ಯಗಳನ್ನಾಡಿ 39 ವಿಕೆಟ್ ಕಬಳಿಸಿದ್ದಾರೆ.

3. ಲಸಿತ್ ಮಾಲಿಂಗ;

ಶ್ರೀಲಂಕಾದ ಮಾಜಿ ವೇಗಿ ಮಾಲಿಂಗ 31 ಟಿ20 ವಿಶ್ವಕಪ್ ಪಂದ್ಯಗಳನ್ನಾಡಿ 38 ವಿಕೆಟ್ ಕಬಳಿಸುವ ಮೂಲಕ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

4. ಸಯೀದ್ ಅಜ್ಮಲ್:

ಪಾಕಿಸ್ತಾನದ ಮಾಜಿ ಆಫ್‌ಸ್ಪಿನ್ನರ್ ಸಯೀದ್ ಅಜ್ಮಲ್, 23 ಟಿ20 ವಿಶ್ವಕಪ್ ಪಂದ್ಯಗಳನ್ನಾಡಿ 36 ವಿಕೆಟ್ ಕಬಳಿಸುವ ಮೂಲಕ, ಚುಟುಕು ಕ್ರಿಕೆಟ್ ವಿಶ್ವಕಪ್‌ನಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

5. ಅಜಂತಾ ಮೆಂಡಿಸ್:

ಶ್ರೀಲಂಕಾದ ಮಾಜಿ ಮಿಸ್ಟ್ರಿ ಸ್ಪಿನ್ನರ್ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ 35 ವಿಕೆಟ್ ಕಬಳಿಸುವ ಮೂಲಕ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಮೆಂಡಿಸ್ 5ನೇ ಸ್ಥಾನದಲ್ಲಿದ್ದಾರೆ.

Latest Videos

click me!