ಸನ್‌ರೈಸರ್ಸ್‌ ಹೈದರಾಬಾದ್ ಸ್ಟಾರ್ ಆಟಗಾರನಿಗೆ ಕೋವಿಡ್ ಪಾಸಿಟಿವ್! ಇಂದು ಆಡೋದೇ ಡೌಟ್

Published : May 19, 2025, 09:28 AM IST

ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಆಘಾತ. ಸ್ಟಾರ್ ಬ್ಯಾಟರ್ ಟ್ರಾವಿಸ್ ಹೆಡ್‌ಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಉಳಿದ ಪಂದ್ಯಗಳಲ್ಲಿ ಭಾಗವಹಿಸುವಿಕೆ ವೈದ್ಯಕೀಯ ಪರೀಕ್ಷೆಗಳ ಮೇಲೆ ಅವಲಂಬಿತವಾಗಿದೆ.

PREV
17
ಸನ್‌ರೈಸರ್ಸ್‌ ಹೈದರಾಬಾದ್ ಸ್ಟಾರ್ ಆಟಗಾರನಿಗೆ ಕೋವಿಡ್ ಪಾಸಿಟಿವ್! ಇಂದು ಆಡೋದೇ ಡೌಟ್

ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಕ್ಕೆ ಐಪಿಎಲ್ 2025ರಲ್ಲಿ ಮತ್ತೊಂದು ಆಘಾತ. ಸ್ಟಾರ್ ಆರಂಭಿಕ ಆಟಗಾರ ಟ್ರಾವಿಸ್ ಹೆಡ್‌ಗೆ ಕೋವಿಡ್-19 ಪಾಸಿಟಿವ್ ಎಂದು ದೃಢಪಟ್ಟಿದೆ. ಇದರಿಂದಾಗಿ ಅವರು ಇಂದು(ಮೇ 19 ರಂದು) ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈ ವಿಷಯವನ್ನು SRH ಮುಖ್ಯ ಕೋಚ್ ಡೇನಿಯಲ್ ವೆಟ್ಟೋರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

27

ಐಪಿಎಲ್ 2025ರ ಮಧ್ಯದಲ್ಲಿ ಭಾರತ-ಪಾಕ್ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಲೀಗ್ ಅನ್ನು ಒಂದು ವಾರ ಸ್ಥಗಿತಗೊಳಿಸಲಾಗಿತ್ತು. ಈ ಸಮಯದಲ್ಲಿ ಹಲವು ವಿದೇಶಿ ಕ್ರಿಕೆಟಿಗರು ತಮ್ಮ ತಮ್ಮ ದೇಶಗಳಿಗೆ ಹಿಂತಿರುಗಿದ್ದರು. ಆಸ್ಟ್ರೇಲಿಯಾದವರೂ ಸಹ ಇದರಲ್ಲಿ ಸೇರಿದ್ದಾರೆ. BCCI ಟೂರ್ನಿಯನ್ನು ಪುನರಾರಂಭಿಸುವುದಾಗಿ ಘೋಷಿಸಿದ ನಂತರ, ಮಿಚೆಲ್ ಸ್ಟಾರ್ಕ್, ಜೇಕ್ ಫ್ರೇಸರ್-ಗರ್ಕ್‌ರಂತಹ ಆಟಗಾರರು ಉಳಿದ ಪಂದ್ಯಗಳಿಂದ ಹೊರಗುಳಿದರೆ, ಟ್ರಾವಿಸ್ ಹೆಡ್, ಪ್ಯಾಟ್ ಕಮಿನ್ಸ್, ಕಗಿಸೊ ರಬಾಡ, ಟ್ರಿಸ್ಟನ್ ಸ್ಟಬ್ಸ್ ತಮ್ಮ ತಂಡಗಳಿಗೆ ಮರಳಲು ನಿರ್ಧರಿಸಿದರು.

37

ಸನ್‌ರೈಸರ್ಸ್ ಹೈದರಾಬಾದ್ ಪರ ಪ್ಯಾಟ್ ಕಮಿನ್ಸ್ ಈಗಾಗಲೇ ತಂಡವನ್ನು ಸೇರಿಕೊಂಡಿದ್ದಾರೆ. ಆದರೆ ಟ್ರಾವಿಸ್ ಹೆಡ್ ಭಾರತಕ್ಕೆ ಬಾರದ ಕಾರಣ ಅವರ ಲಭ್ಯತೆಯ ಬಗ್ಗೆ ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡೇನಿಯಲ್ ವೆಟ್ಟೋರಿ, "ಟ್ರಾವಿಸ್ ನಾಳೆ ಬೆಳಿಗ್ಗೆ ಭಾರತಕ್ಕೆ ಬರಲಿದ್ದಾರೆ. ಆದರೆ ಇತ್ತೀಚೆಗೆ ಅವರಿಗೆ ಕೋವಿಡ್ ಸೋಂಕು ತಗುಲಿದ್ದರಿಂದ ಪ್ರಯಾಣ ವಿಳಂಬವಾಗಿದೆ. ಭಾರತಕ್ಕೆ ಬಂದ ನಂತರ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ ಉಳಿದ ಪಂದ್ಯಗಳಲ್ಲಿ ಆಡಬಹುದೇ ಎಂದು ನಿರ್ಧರಿಸುತ್ತೇವೆ" ಎಂದು ಹೇಳಿದರು.

47

ಐಪಿಎಲ್‌ನಲ್ಲಿ ಟ್ರಾವಿಸ್ ಹೆಡ್ SRH ಬ್ಯಾಟಿಂಗ್‌ನ ಪ್ರಮುಖ ಆಧಾರಸ್ತಂಭ. ಐಪಿಎಲ್ 2025ರಲ್ಲಿ ಇಲ್ಲಿಯವರೆಗೆ 11 ಪಂದ್ಯಗಳಲ್ಲಿ 281 ರನ್ ಗಳಿಸಿರುವ ಹೆಡ್, 28.01 ಸರಾಸರಿ ಮತ್ತು 156.11 ಸ್ಟ್ರೈಕ್ ರೇಟ್‌ನೊಂದಿಗೆ ಉತ್ತಮ ಪ್ರದರ್ಶನ ನೀಡಿದ್ದಾರೆ. 

57

ಜೂನ್ 11 ರಂದು ಲಂಡನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ ಆಸ್ಟ್ರೇಲಿಯಾ ತಂಡದಲ್ಲಿ ಟ್ರಾವಿಸ್ ಹೆಡ್ ಸ್ಥಾನ ಪಡೆದಿದ್ದಾರೆ. 2023 ರಲ್ಲಿ ಭಾರತವನ್ನು ಸೋಲಿಸಿದ್ದ ಆಸ್ಟ್ರೇಲಿಯಾ ಈಗ WTC ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಸಜ್ಜಾಗಿದೆ.

67

ಸನ್‌ರೈಸರ್ಸ್ ಹೈದರಾಬಾದ್ ತಂಡ ಈಗಾಗಲೇ ಐಪಿಎಲ್ 2025 ಟೂರ್ನಿಯಿಂದ ಹೊರಬಿದ್ದಿದೆ. ಮೇ 5 ರಂದು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ದ ನಡೆದ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ, ಸನ್‌ರೈಸರ್ಸ್ ಹೈದರಾಬಾದ್ 11 ಪಂದ್ಯಗಳಲ್ಲಿ 3 ಗೆಲುವು, 7 ಸೋಲು ಮತ್ತು ಒಂದು 'ಫಲಿತಾಂಶವಿಲ್ಲದ ಪಂದ್ಯದೊಂದಿಗೆ ಅಂಕಪಟ್ಟಿಯಲ್ಲಿ 8 ನೇ ಸ್ಥಾನದಲ್ಲಿದೆ. ಕಳೆದ ಋತುವಿನಲ್ಲಿ ಫೈನಲ್ ತಲುಪಿದ್ದ ಹೈದರಾಬಾದ್ ತಂಡ ಈ ಬಾರಿ ಲೀಗ್ ಹಂತಕ್ಕೆ ಸೀಮಿತವಾಗಿದೆ.

 

77

ಲಕ್ನೋ ವಿರುದ್ಧದ ಪಂದ್ಯದ ನಂತರ, ಹೈದರಾಬಾದ್ ತಂಡ ಮೇ 23 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮೇ 25 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಉಳಿದ ಎರಡು ಲೀಗ್ ಪಂದ್ಯಗಳನ್ನು ಆಡಲಿದೆ. ಟ್ರಾವಿಸ್ ಹೆಡ್ ಈ ಪಂದ್ಯಗಳಿಗೆ ಲಭ್ಯವಿರುತ್ತಾರೆಯೇ ಎಂಬುದು ವೈದ್ಯಕೀಯ ತಂಡದ ನಿರ್ಧಾರವನ್ನು ಅವಲಂಬಿಸಿರುತ್ತದೆ.

Read more Photos on
click me!

Recommended Stories