ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್‌ಗೇರಲು ವಿಫಲವಾಗಿ ನಿರಾಸೆ ಅನುಭವಿಸಿದ್ದ ಟೀಂ ಇಂಡಿಯಾ, ಇದೀಗ ತವರಿನಲ್ಲಿ ಭರ್ಜರಿಯಾಗಿಯೇ ತನ್ನ ಅಭಿಯಾನವನ್ನು ಆರಂಭಿಸಿದೆ.
ಟಿ20 ವಿಶ್ವಕಪ್ ರನ್ನರ್ ಅಪ್ ನ್ಯೂಜಿಲೆಂಡ್ ವಿರುದ್ದ ಜೈಪುರದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 5 ವಿಕೆಟ್‌ಗಳ ಅಂತರದ ಭರ್ಜರಿ ಜಯ ಸಾಧಿಸಿ, ಸರಣಿಯಲ್ಲಿ ಶುಭಾರಂಭ ಮಾಡಿದೆ.
rohit sharma trent boult
ಅದರೆ ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಕಿವೀಸ್ ಎಡಗೈ ಮಾರಕ ವೇಗಿ ಟ್ರೆಂಟ್ ಬೌಲ್ಟ್ ನಡುವಿನ ಕಾದಾಟವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದರು.
ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಈ ಇಬ್ಬರು ಆಟಗಾರರು, ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಮುಖಾಮುಖಿಯಾದಾಗ ಯಾರ ಕೈ ಮೇಲಾಗಲಿದೆ ಎನ್ನುವ ಕುತೂಹಲ ಸಾಕಷ್ಟು ಜೋರಾಗಿರುತ್ತದೆ.
Trent Boult
ಇದೀಗ ಮೊದಲ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಮ್ಮೆ ಟ್ರೆಂಟ್ ಬೌಲ್ಟ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ 48 ರನ್ ಬಾರಿಸಿ ಬೌಲ್ಟ್ ಬೌಲಿಂಗ್‌ನಲ್ಲಿ ವಿಕೆಟ್ ಕೈಚೆಲ್ಲಿದರು.
ಇದೀಗ ಕಿವೀಸ್ ವೇಗಿ ಕುರಿತಂತೆ ಮಾತನಾಡಿರುವ ರೋಹಿತ್ ಶರ್ಮಾ, ನಾವಿಬ್ಬರು ಒಟ್ಟಾಗಿಯೇ ಹಲವು ಪಂದ್ಯಗಳನ್ನು ಆಡಿದ್ದೇವೆ. ಹೀಗಾಗಿ ನನ್ನ ವೀಕ್ನೆಸ್ ಏನು ಎನ್ನುವುದು ಬೌಲ್ಟ್‌ಗೆ ಗೊತ್ತಿದೆ. ಅದೇ ರೀತಿ ಬೌಲ್ಟ್ ಅವರ ಶಕ್ತಿ-ಸಾಮರ್ಥ್ಯದ ಅರಿವು ನನಗಿದೆ ಎಂದು ಹೇಳಿದ್ದಾರೆ.
ನಮ್ಮಿಬ್ಬರ ನಡುವಿನ ಶಕ್ತಿ-ಸಾಮರ್ಥ್ಯದ ಅರಿವಿರುವುದರಿಂದ ಒಳ್ಳೆಯ ಕಾದಾಟ ನೋಡಲು ಸಿಗುತ್ತಿದೆ ಎಂದು ಟೀಂ ಇಂಡಿಯಾ ಟಿ20 ತಂಡದ ನಾಯಕ ರೋಹಿತ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.