ವೆಸ್ಟ್ ಇಂಡೀಸ್ ತಂಡದ ಸ್ಪೋಟಕ ಆರಂಭಿಕ ಬ್ಯಾಟರ್ ಕ್ರಿಸ್ ಗೇಲ್ ಚೊಚ್ಚಲ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರಲಿಲ್ಲ. 2009ರಲ್ಲಿ ಗೇಲ್ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದರು. ಕೋಲ್ಕತಾ ನೈಟ್ ರೈಡರ್ಸ್ ತಂಡದ ಮೂಲಕ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದ ಗೇಲ್, ಆ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಅದರೆ ಅಚ್ಚರಿ ಎನ್ನುವಂತೆ 2022ರ ಐಪಿಎಲ್‌ನಲ್ಲಿ ಹೊರಗುಳಿದು ಸುದ್ದಿಯಾಗಿದ್ದರು.