World Cup 2023 ಆಸೀಸ್ ಎದುರಿನ ಗೆಲುವಿನ ಖುಷಿಯಲ್ಲಿದ್ದ ಟೀಂ ಇಂಡಿಯಾಗೆ ಮತ್ತೊಂದು ಬಿಗ್‌ ಶಾಕ್..!

Published : Oct 09, 2023, 04:59 PM ISTUpdated : Oct 09, 2023, 05:04 PM IST

ನವದೆಹಲಿ(ಅ.09): ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಬಲಾಢ್ಯ ಆಸ್ಟ್ರೇಲಿಯಾಗೆ ಸೋಲುಣಿಸಿ ಬೀಗುತ್ತಿರುವ ಭಾರತ ತಂಡಕ್ಕೆ ಇದೀಗ ಮತ್ತೊಮ್ಮೆ ಬಿಗ್ ಶಾಕ್ ಎದುರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.  

PREV
18
World Cup 2023 ಆಸೀಸ್ ಎದುರಿನ ಗೆಲುವಿನ  ಖುಷಿಯಲ್ಲಿದ್ದ ಟೀಂ ಇಂಡಿಯಾಗೆ ಮತ್ತೊಂದು ಬಿಗ್‌ ಶಾಕ್..!

2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಎದುರು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

28

ಆಸ್ಟ್ರೇಲಿಯಾ ನೀಡಿದ್ದ 200 ರನ್‌ ಸಾಧಾರಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಆರಂಭಿಕ ಆಘಾತಕ್ಕೊಳಗಾಗಿತ್ತು. ಟೀಂ ಇಂಡಿಯಾ 2 ರನ್ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಮೂರು ವಿಕೆಟ್ ಕಳೆದುಕೊಂಡು ಕಂಗಾಲಾಗಿತ್ತು. 

38

ಆದರೆ ನಾಲ್ಕನೇ ವಿಕೆಟ್‌ಗೆ ವಿರಾಟ್ ಕೊಹ್ಲಿ ಹಾಗೂ ಕೆ ಎಲ್ ರಾಹುಲ್ ಶತಕದ ಜತೆಯಾಟವಾಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಅಗ್ರಕ್ರಮಾಂಕದ ಬ್ಯಾಟಿಂಗ್ ವೈಫಲ್ಯ ತಂಡದ ತಲೆನೋವು ಹೆಚ್ಚುವಂತೆ ಮಾಡಿದೆ.

48

ಹೀಗಿರುವಾಗ ತಂಡಕ್ಕೆ ಬಿಗ್‌ ಶಾಕ್ ಎದುರಾಗಿದ್ದು, ಅಕ್ಟೋಬರ್ 11ರಂದು ಆಫ್ಘಾನಿಸ್ತಾನ ಎದುರಿನ ಪಂದ್ಯದಿಂದಲೂ ಟೀಂ ಇಂಡಿಯಾ ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಆಯ್ಕೆಗೆ ಅಲಭ್ಯರಾಗಿದ್ದಾರೆ.

58

ಕಳೆದ ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶುಭ್‌ಮನ್ ಗಿಲ್, ಆಸ್ಟ್ರೇಲಿಯಾ ಎದುರಿನ ಮಹತ್ವದ ಪಂದ್ಯಕ್ಕೆ ಅಲಭ್ಯರಾಗಿದ್ದರು. ಇದೀಗ ಆಫ್ಘಾನಿಸ್ತಾನ ಎದುರಿನ ಪಂದ್ಯದಿಂದಲೂ ಗಿಲ್ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

68

ಶುಭ್‌ಮನ್ ಗಿಲ್ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಎಡಗೈ ಬ್ಯಾಟರ್ ಇಶಾನ್ ಕಿಶನ್, ತಾವೆದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸುವ ಮೂಲಕ ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲವಾಗಿದ್ದರು.

78

ಹೀಗಿದ್ದು, ಇದೀಗ ಎರಡನೇ ಪಂದ್ಯದಿಂದ ಶುಭ್‌ಮನ್ ಗಿಲ್ ಹೊರಬಿದ್ದಿರುವುದರಿಂದ ಆಫ್ಘಾನಿಸ್ತಾನ ಎದುರಿನ ಪಂದ್ಯದಲ್ಲೂ ರೋಹಿತ್ ಶರ್ಮಾ ಜತೆಗೆ ಇಶಾನ್ ಕಿಶನ್ ಇನಿಂಗ್ಸ್‌ ಆರಂಭಿಸುವುದು ಬಹುತೇಕ ಖಚಿತ ಎನಿಸಿದೆ.
 

88

ಭಾರತ ಹಾಗೂ ಆಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯವು ಅಕ್ಟೋಬರ್ 11ರಂದು ದೆಹಲಿಯ ಅರುಣ್‌ ಜೇಟ್ಲಿ ಮೈದಾನದಲ್ಲಿ ನಡೆಯಲಿದ್ದು, ಟೀಂ ಇಂಡಿಯಾ ಮತ್ತೊಂದು ದೊಡ್ಡ ಅಂತರದ ಗೆಲುವು ಎದುರು ನೋಡುತ್ತಿದೆ.

Read more Photos on
click me!

Recommended Stories