ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌: ಇಂಗ್ಲೆಂಡ್‌ ಸೋಲಿಸಿ ಅಂಕಪಟ್ಟಿಯಲ್ಲಿ ಮೇಲೆ ಜಿಗಿದ ಟೀಂ ಇಂಡಿಯಾ!

Published : Aug 05, 2025, 11:59 AM IST

ದುಬೈ: ಭಾರತ ಹಾಗೂ ಇಂಗ್ಲೆಂಡ್‌ ನಡುವಿನ 5 ಪಂದ್ಯಗಳ ಆಂಡರ್‌ಸನ್-ತೆಂಡುಲ್ಕರ್ ಟ್ರೋಫಿ 2-2 ಸಮಬಲದೊಂದಿಗೆ ಅಂತ್ಯ ಕಂಡಿದೆ. ಇದರ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲೂ ಮಹತ್ವದ ಬದಲಾವಣೆಗಳಾಗಿವೆ. 

PREV
17

ಆಂಡರ್‌ಸನ್-ತೆಂಡುಲ್ಕರ್ ಟ್ರೋಫಿಯ ಕೊನೆಯ ಪಂದ್ಯದಲ್ಲಿ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ಆತಿಥೇಯ ಇಂಗ್ಲೆಂಡ್ ಎದುರು 6 ರನ್ ಅಂತರದ ರೋಚಕ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-2ರ ಸಮಬಲ ಸಾಧಿಸುವ ಮೂಲಕ ತನ್ನ ಅಭಿಯಾನ ಮುಗಿಸಿದೆ.

27

ಕೊನೆಯ ದಿನ ಇಂಗ್ಲೆಂಡ್‌ಗೆ ಗೆಲ್ಲಲು ಕೇವಲ 35 ರನ್‌ಗಳ ಅಗತ್ಯವಿತ್ತು. ಇಂಗ್ಲೆಂಡ್ ತಂಡವು 3-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದೊಂದಿಗೆ ಬ್ಯಾಟಿಂಗ್ ಮಾಡಲಿಳಿಯಿತು. ಆದರೆ ಸಿರಾಜ್-ಪ್ರಸಿದ್ದ್ ಕೃಷ್ಣ ಮಾರಕ ದಾಳಿ ನಡೆಸಿ ಇಂಗ್ಲೆಂಡ್‌ನ ಕೊನೆಯ 4 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು.

37

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ ಅವರಂತಹ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಯುವ ಆಟಗಾರರನ್ನೊಳಗೊಂಡ ತಂಡ ಇಂಗ್ಲೆಂಡ್‌ನಲ್ಲಿ ಅದ್ಭುತ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದೆ.

47

2025-27ರ ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಭಾರತ 3ನೇ ಸ್ಥಾನಕ್ಕೇರಿದೆ. ಇತ್ತೀಚೆಗೆ 4ನೇ ಸ್ಥಾನಕ್ಕೆ ಕುಸಿದಿದ್ದ ತಂಡ, ಇಂಗ್ಲೆಂಡ್‌ ವಿರುದ್ಧ 5ನೇ ಪಂದ್ಯದ ಗೆಲುವಿನ ಬಳಿಕ ಮತ್ತೆ ಬಡ್ತಿ ಪಡೆಯಿತು.

57

ಸದ್ಯ ಶುಭ್‌ಮನ್ ಗಿಲ್ ನೇತೃತ್ವದ ಭಾರತ 5 ಪಂದ್ಯಗಳಲ್ಲಿ 2 ಗೆಲುವು, 2 ಸೋಲು, 1 ಡ್ರಾದೊಂದಿಗೆ ಶೇ.46.67 ಗೆಲುವಿನ ಪ್ರತಿಶತದೊಂದಿಗೆ 3ನೇ ಸ್ಥಾನದಲ್ಲಿದೆ.

67

ಬೆನ್ ಸ್ಟೋಕ್ಸ್ ನೇತೃತ್ವದ ಇಂಗ್ಲೆಂಡ್‌ ಕೂಡಾ 2 ಗೆಲುವು, 2 ಸೋಲು, 1 ಡ್ರಾ ಕಂಡಿದ್ದರೂ, 2 ಅಂಕ ಕಡಿತಗೊಂಡಿದ್ದರಿಂದ ಶೇ.43.33 ಗೆಲುವಿನ ಪ್ರತಿಶತದೊಂದಿಗೆ 4ನೇ ಸ್ಥಾನದಲ್ಲಿದೆ.

77

ಮಾಜಿ ಚಾಂಪಿಯನ್‌ ಆಸ್ಟ್ರೇಲಿಯಾ ಮೂರಕ್ಕೆ 3 ಪಂದ್ಯ ಗೆದ್ದಿದ್ದು, ಶೇ.100 ಗೆಲುವಿನ ಪ್ರತಿಶತದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಶ್ರೀಲಂಕಾ(ಶೇ.66.67) 2ನೇ ಸ್ಥಾನದಲ್ಲಿದೆ.

Read more Photos on
click me!

Recommended Stories