ಸತತ ಮೂರನೇ ಪಂದ್ಯದಲ್ಲೂ ವೈಭವ್ ಸೂರ್ಯವಂಶಿ ಫೇಲ್..! ನಾಲ್ಕನೇ ಟಿ20ಯಲ್ಲಿ 15 ವರ್ಷದ ಓಪನ್ನರ್ ಗಳಿಸಿದ ರನ್ ಎಷ್ಟು?

Published : Jul 10, 2026, 01:02 PM IST

ಬ್ರಿಸ್ಟೊಲ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯದಲ್ಲೂ 15 ವರ್ಷದ ವೈಭವ್ ಸೂರ್ಯವಂಶಿ ನಿರಾಸೆ ಮೂಡಿಸಿದ್ದಾರೆ. ಬಿಹಾರ ಮೂಲದ ಯುವ ಆಟಗಾರ ಇಂಗ್ಲೆಂಡ್ ಎದುರು ನಾಲ್ಕನೇ ಪಂದ್ಯದಲ್ಲಿ ಗಳಿಸಿದ್ದೆಷ್ಟು ನೋಡೋಣ ಬನ್ನಿ. 

PREV
16
ಸಿಕ್ಕ ಅವಕಾಶ ಕೈಚೆಲ್ಲುತ್ತಿರುವ ವೈಭವ್

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿ ಭರ್ಜರಿಯಾಗಿ ಸಾಗುತ್ತಿದೆ. ಜುಲೈ 09ರಂದು ಬ್ರಿಸ್ಟಾಲ್‌ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಮತ್ತೆ ವೈಭವ್ ಸೂರ್ಯವಂಶಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಸಂಜು ಸ್ಯಾಮ್ಸನ್ ಬದಲಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದ ವೈಭವ್ ಸೂರ್ಯವಂಶಿ, ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಮತ್ತೆ ವಿಫಲವಾಗಿದ್ದಾರೆ.

26
ಮುಂದುವರೆದ ವೈಭವ್ ಬ್ಯಾಟಿಂಗ್ ವೈಫಲ್ಯ:

ಇಂಗ್ಲೆಂಡ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಫೇಲ್ ಆಗಿದ್ದರಿಂದ ಎರಡನೇ ಪಂದ್ಯದಿಂದ ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಯಿತು. ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಎದುರು ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದ ವೈಭವ್ ಸೂರ್ಯವಂಶಿ ಕೇವಲ 14 ರನ್ ಗಳಿಸಲಷ್ಟೇ ಶಕ್ತರಾದರು.

36
ಸತತ ಮೂರು ಪಂದ್ಯದಲ್ಲೂ ವೈಭವ್ ಫೇಲ್

ಇದಾದ ಬಳಿಕ ವೈಭವ್ ಸೂರ್ಯವಂಶಿ ಆಡಿದ ಎರಡನೇ ಪಂದ್ಯದಲ್ಲೂ ದೊಡ್ಡ ಮೊತ್ತ ಗಳಿಸಲು ಬಿಹಾರ ಮೂಲದ ಆಟಗಾರನಿಗೆ ಸಾಧ್ಯವಾಗಲಿಲ್ಲ. ವೈಭವ್ ತಾವಾಡಿದ ಎರಡನೇ ಟಿ20 ಪಂದ್ಯದಲ್ಲಿ ಕೇವಲ 13 ರನ್ ಗಳಿಸಿ ಜೋಫ್ರಾ ಆರ್ಚರ್‌ಗೆ ವಿಕೆಟ್ ಒಪ್ಪಿಸಿದರು. ಇದೀಗ ವೈಭವ್ ಆಡಿದ ಮೂರನೇ ಪಂದ್ಯದಲ್ಲಿ 10 ಎಸೆತಗಳಲ್ಲಿ 15 ರನ್ ಗಳಿಸಿ ಜೋಫ್ರಾ ಆರ್ಚರ್‌ಗೆ ಎರಡನೇ ಬಾರಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.

46
ಮೂರು ಪಂದ್ಯಗಳಿಂದ ಕೇವಲ 42 ರನ್!

ಐಪಿಎಲ್‌ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ವೈಭವ್ ಸೂರ್ಯವಂಶಿ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿತ್ತು. ಆದರೆ ವೈಭವ್ ತಾನಾಡಿದ ಮೂರು ಪಂದ್ಯಗಳಲ್ಲೂ ಅಲ್ಪಮೊತ್ತಕ್ಕೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದ್ದಾರೆ. ವೈಭವ್ ಟೀಂ ಇಂಡಿಯಾ ಆರಂಭಿಕನಾಗಿ ಮೂರು ಇನ್ನಿಂಗ್ಸ್‌ಗಳಿಂದ ಕೇವಲ 42 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ.

56
ನಾಯಕ ಶ್ರೇಯಸ್ ಅಯ್ಯರ್ ಹೋರಾಟ ವ್ಯರ್ಥ

ನಾಲ್ಕನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 158 ರನ್‌ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತು. ನಾಯಕ ಶ್ರೇಯಸ್ ಅಯ್ಯರ್ ಅಜೇಯ 80 ರನ್ ಬಾರಿಸಿದ್ದು ಬಿಟ್ಟರೇ ಉಳಿದ್ಯಾವ ಬ್ಯಾಟರ್‌ಗಳು ಜವಾಬ್ದಾರಿಯುತ ಪ್ರದರ್ಶನ ತೋರಲಿಲ್ಲ.

66
ಸುಲಭವಾಗಿ ನಾಲ್ಕನೇ ಟಿ20 ಮ್ಯಾಚ್ ಗೆದ್ದ ಇಂಗ್ಲೆಂಡ್

ಇನ್ನು ಸುಲಭ ಗುರಿ ಬೆನ್ನತ್ತಿದ ಆತಿಥೇಯ ಇಂಗ್ಲೆಂಡ್ ತಂಡವು 13.5 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಸುಲಭವಾಗಿ ಗೆಲುವಿನ ನಗೆ ಬೀರಿತು. ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್‌ ಅಜೇಯ 59 ರನ್ ಬಾರಿಸಿದರೆ, ನಾಯಕ ಹ್ಯಾರಿ ಬ್ರೂಕ್ ಕೇವಲ 35 ಎಸೆತಗಳಲ್ಲಿ ಚುರುಕಿನ 79 ರನ್ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories