ಸಮಷ್ಟಿಪುರದ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಮುಂಬರುವ ಐರ್ಲೆಂಡ್ ಸರಣಿಯಲ್ಲಿ ಆಡಿದರೆ, ಅವರು ಸಚಿನ್ ತೆಂಡೂಲ್ಕರ್ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದಾರೆ.
ಬಿಹಾರದ ಸಮಷ್ಟಿಪುರ ಮೂಲದ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅವರ ಅದ್ಭುತ ಪ್ರದರ್ಶನ ಕೇವಲ ಭಾರತದಲ್ಲಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲೂ ಭಾರಿ ಸಂಚಲನ ಮೂಡಿಸಿದೆ. ಭಾರತೀಯ ಕ್ರಿಕೆಟ್‌ನ ಅತ್ಯಂತ ಭರವಸೆಯ ಆಟಗಾರನಾಗಿ ಹೊರಹೊಮ್ಮಿರುವ ವೈಭವ್, ತಮ್ಮದೇ ಆದ ವಿಶಿಷ್ಟ ಆಟದ ಮೂಲಕ ದೇಶ-ವಿದೇಶಗಳ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದಿದ್ದಾರೆ. ಈಗ ಅವರು ಭಾರತ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ (International Debut) ಮಾಡಲು ಸಜ್ಜಾಗಿದ್ದು, ಎಲ್ಲೆಡೆ ಭಾರಿ ಕುತೂಹಲ ಮೂಡಿದೆ.
25
ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಕ್ಕೆ ಸಿದ್ಧತೆ
ಟೀಮ್ ಇಂಡಿಯಾ ಶೀಘ್ರದಲ್ಲೇ ಐರ್ಲೆಂಡ್ ವಿರುದ್ಧ 2 ಪಂದ್ಯಗಳ ಟಿ20ಐ (T20I) ಸರಣಿಯನ್ನು ಆಡಲಿದ್ದು, ಆ ಬಳಿಕ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಬೃಹತ್ ಟಿ20 ಸರಣಿಯಲ್ಲಿ ಭಾಗಿಯಾಗಲಿದೆ. ಈ ಮಹತ್ವದ ಇಂಗ್ಲೆಂಡ್ ಪ್ರವಾಸದ ಟಿ20 ಸರಣಿಗೆ ಪ್ರಕಟಿಸಲಾಗಿರುವ ಭಾರತ ತಂಡದಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ವೈಭವ್ ಅವರು ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
35
ಲಂಡನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಮಾಲೀಕರ ಜೊತೆ ಭೇಟಿ
ಐಪಿಎಲ್‌ನಲ್ಲಿ ವೈಭವ್ ಸೂರ್ಯವಂಶಿ ಅವರು ರಾಜಸ್ಥಾನ್ ರಾಯಲ್ಸ್ (RR) ಫ್ರಾಂಚೈಸಿ ಪರ ಆಡುತ್ತಿದ್ದಾರೆ. ಇತ್ತೀಚೆಗೆ ವೈಭವ್ ಅವರ ತಂದೆ ಸಂಜೀವ್ ಸೂರ್ಯವಂಶಿ ಅವರು ಲಂಡನ್‌ಗೆ ಭೇಟಿ ನೀಡಿದ್ದಾಗ, ರಾಜಸ್ಥಾನ್ ರಾಯಲ್ಸ್ ತಂಡದ ಪ್ರಮುಖರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಖ್ಯಾತ ಉದ್ಯಮಿ ಲಕ್ಷ್ಮಿ ಮಿತ್ತಲ್, ಆದಿತ್ಯ ಮಿತ್ತಲ್ ಹಾಗೂ ರಾಜಸ್ಥಾನ್ ರಾಯಲ್ಸ್ ಸಹ-ಮಾಲೀಕ ಮನೋಜ್ ಬದಲೆ ಸೇರಿದಂತೆ ಫ್ರಾಂಚೈಸಿಯ ಸಿಇಒ ಆಲೋಕ್ ಮತ್ತು ರೋಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಭೇಟಿಯ ಫೋಟೋಗಳನ್ನು ಸಂಜೀವ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೆಮ್ಮೆಯಿಂದ ಹಂಚಿಕೊಂಡಿದ್ದಾರೆ.
ಭಾರತ ತಂಡದ ಪರ ಅತಿ ಕಿರಿಯ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಐತಿಹಾಸಿಕ ದಾಖಲೆ ಸದ್ಯ 'ಕ್ರಿಕೆಟ್ ದೇವರು' ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ 1989 ರಲ್ಲಿ ಪಾಕಿಸ್ತಾನದ ಕರಾಚಿ ವಿರುದ್ಧ ತಮ್ಮ 16ನೇ ವಯಸ್ಸಿನ 205ನೇ ದಿನದಲ್ಲಿ ಚೊಚ್ಚಲ ಪಂದ್ಯ ಆಡಿದ್ದರು. ಈಗಾಗಲೇ ಭಾರತ ತಂಡಕ್ಕೆ ಆಯ್ಕೆಯಾದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವೈಭವ್, ಮುಂಬರುವ ಐರ್ಲೆಂಡ್ ಸರಣಿಯಲ್ಲಿ ಮೈದಾನಕ್ಕಿಳಿದರೆ ಸಚಿನ್ ಅವರ ಈ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದು ಇತಿಹಾಸ ಬರೆಯಲಿದ್ದಾರೆ.
55
ಇಂಗ್ಲೆಂಡ್ ಪಿಚ್‌ನಲ್ಲಿ ಇತಿಹಾಸ ನಿರ್ಮಿಸಲಿದ್ದಾರಾ ವೈಭವ್
ಐರ್ಲೆಂಡ್ ಸರಣಿಯ ಬಳಿಕ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20ಐ ಸರಣಿಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇಂಗ್ಲೆಂಡ್ ಪ್ರವಾಸದ ಅಂತಿಮ ಹನ್ನೊಂದರ ಬಳಗದಲ್ಲಿ (Playing XI) ವೈಭವ್ ಅವರಿಗೆ ಅವಕಾಶ ಸಿಗಲಿದೆಯೇ ಎಂಬುದು ಇನ್ನೂ ಕುತೂಹಲ ಮೂಡಿಸಿದ್ದರೂ, ಅವರ ಮೇಲಿನ ನಿರೀಕ್ಷೆಗಳು ಮಾತ್ರ ಗಗನಕ್ಕೇರಿವೆ. ಈಗಾಗಲೇ ಕ್ರಿಕೆಟ್ ಲೋಕದ ದಿಗ್ಗಜರಿಂದ ಶ್ಲಾಘನೆ ಪಡೆದಿರುವ ಈ ಹದಿಹರೆಯದ ಆಟಗಾರ, ತನ್ನ ವೃತ್ತಿಜೀವನದ ಮತ್ತೊಂದು ಸುವರ್ಣ ಅಧ್ಯಾಯ ಬರೆಯುವ ಹೊಸ್ತಿಲಲ್ಲಿ ನಿಂತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.