ಒಂದೇ ಪಂದ್ಯದಲ್ಲಿ 5 ವಿಶ್ವದಾಖಲೆ, ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದ ಯುವ ಆಟಗಾರ ವೈಭವ್

Published : Feb 06, 2026, 08:36 PM IST

ಒಂದೇ ಪಂದ್ಯದಲ್ಲಿ 5 ವಿಶ್ವದಾಖಲೆ, ಕ್ರಿಕೆಟ್ ಜಗತ್ತನ್ನೇ ಬೆಚ್ಚಿ ಬೀಳಿಸಿದ ಯುವ ಆಟಗಾರ ವೈಭವ್ ಸೂರ್ಯವಂಶಿ, ಅಂಡರ್ 19 ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 175 ರನ್ ಹಲವು ದಾಖಲೆಗಳನ್ನು ಪುಡಿ ಮಾಡಿದೆ. ದಾಖಲೆ ಆಟದಿಂದ ಭಾರತ ಟ್ರೋಫಿ ಗೆದ್ದುಕೊಂಡಿದೆ. 

PREV
15
ಯೂತ್ ODIನಲ್ಲಿ ವೇಗದ ಶತಕ

2026ರ ಅಂಡರ್ 19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಕೇವಲ 55 ಎಸೆತಗಳಲ್ಲಿ ಶತಕ ಸಿಡಿಸಿದರು. ಈ ಮೂಲಕ ಯೂತ್ ಏಕದಿನ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ವಿಶ್ವದ ಮೂರನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹರಾರೆ ಮೈದಾನದಲ್ಲಿ ಈ ಸಾಧನೆ ಮಾಡಿದ್ದಾರೆ. ಇದೇ ಟೂರ್ನಿಯಲ್ಲಿ ಪಾಕಿಸ್ತಾನದ ಸಮೀರ್ ಮಿನ್ಹಾಸ್ ಕೇವಲ 42 ಎಸೆತಗಳಲ್ಲಿ ಶತಕ ಸಿಡಿಸಿ ಮೊದಲ ಸ್ಥಾನದಲ್ಲಿದ್ದಾರೆ.

25
ಯೂತ್ ODIನಲ್ಲಿ ಅತಿ ಹೆಚ್ಚು ಸಿಕ್ಸರ್‌

ವೈಭವ್ ಸೂರ್ಯವಂಶಿ ಯೂತ್ ಏಕದಿನ ಕ್ರಿಕೆಟ್‌ನ ಇನ್ನಿಂಗ್ಸ್‌ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಶ್ವದ ನಂಬರ್ 1 ಬ್ಯಾಟರ್ ಎನಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು ಬರೋಬ್ಬರಿ 15 ಸಿಕ್ಸರ್‌ಗಳನ್ನು ಸಿಡಿಸಿದರು. ಈ ಹಿಂದೆ ದುಬೈನಲ್ಲಿ ಯುಎಇ ವಿರುದ್ಧ 14 ಸಿಕ್ಸರ್‌ಗಳನ್ನು ಬಾರಿಸಿ ಅವರೇ ದಾಖಲೆ ಮಾಡಿದ್ದರು. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮೈಕಲ್ ಹಿಲ್ (12 ಸಿಕ್ಸರ್‌, 2008) ಮೂರನೇ ಸ್ಥಾನದಲ್ಲಿದ್ದಾರೆ.

35
ಯೂತ್ ವಿಶ್ವಕಪ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್

ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 79 ಎಸೆತಗಳಲ್ಲಿ 175 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಮೂಲಕ ಯೂತ್ ಏಕದಿನ ವಿಶ್ವಕಪ್‌ನಲ್ಲಿ ಭಾರತದ ಪರ ಅತಿದೊಡ್ಡ ಇನ್ನಿಂಗ್ಸ್ ಆಡಿದ ಆಟಗಾರ ಎಂಬ ದಾಖಲೆ ಬರೆದರು. ಅವರು 2022ರ ವಿಶ್ವಕಪ್‌ನಲ್ಲಿ 162* ರನ್ ಗಳಿಸಿದ್ದ ರಾಜ್ ಬಾವಾ ಅವರ ದಾಖಲೆಯನ್ನು ಮುರಿದರು. 2004ರಲ್ಲಿ 155* ರನ್ ಗಳಿಸಿದ್ದ ಶಿಖರ್ ಧವನ್ ಮೂರನೇ ಸ್ಥಾನದಲ್ಲಿದ್ದಾರೆ.

45
U19 ವಿಶ್ವಕಪ್ ಒಂದೇ ಆವೃತ್ತಿಯಲ್ಲಿ ಗರಿಷ್ಠ ರನ್

ಅಂಡರ್ 19 ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ ಈಗ ವಿಶ್ವದ ನಾಲ್ಕನೇ ಆಟಗಾರನಾಗಿದ್ದಾರೆ. ಈ ಟೂರ್ನಿಯಲ್ಲಿ ಅವರು ಒಟ್ಟು 439 ರನ್ ಗಳಿಸಿದ್ದಾರೆ. ಇದೇ ಟೂರ್ನಿಯಲ್ಲಿ 436 ರನ್ ಗಳಿಸಿದ್ದ ಅಫ್ಘಾನಿಸ್ತಾನದ ಫೈಸಲ್ ಶಿನೋಜಾದಾರನ್ನು ಅವರು ಹಿಂದಿಕ್ಕಿದರು. 2022ರಲ್ಲಿ 506 ರನ್ ಗಳಿಸಿದ್ದ ದಕ್ಷಿಣ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

55
U19 ವಿಶ್ವಕಪ್‌ನಲ್ಲಿ ಅತಿ ಕಿರಿಯ ವಯಸ್ಸಿನಲ್ಲೇ ಶತಕ

ಅಂಡರ್ 19 ವಿಶ್ವಕಪ್‌ನಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ ಶತಕ ಸಿಡಿಸಿದ ವಿಶ್ವದ ನಂಬರ್ 1 ಆಟಗಾರ ಎಂಬ ಕೀರ್ತಿಗೆ ವೈಭವ್ ಸೂರ್ಯವಂಶಿ ಪಾತ್ರರಾಗಿದ್ದಾರೆ. ಹರಾರೆ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಅವರು 14 ವರ್ಷ 316 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದರು. ಈ ಮೂಲಕ, 2010ರ ವಿಶ್ವಕಪ್‌ನಲ್ಲಿ 15 ವರ್ಷ 92 ದಿನಗಳ ವಯಸ್ಸಿನಲ್ಲಿ ಶತಕ ಬಾರಿಸಿದ್ದ ಪಾಕಿಸ್ತಾನದ ಬಾಬರ್ ಆಝಂ ಅವರ ದಾಖಲೆಯನ್ನು ಮುರಿದರು.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories