ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ನ ಯುವ ಆಟಗಾರ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅವರ ಆಟಕ್ಕೆ ಮನಸೋತ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿ ಪ್ರಶಂಸಿಸಿದ್ದಾರೆ.
ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್‌ನ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್‌ಗೆ ವಿರಾಟ್ ಕೊಹ್ಲಿ ಮನಸೋತಿದ್ದಾರೆ. ಪಂದ್ಯದ ನಂತರ ವೈಭವ್ ಅವರನ್ನು ಭೇಟಿಯಾದ ಕೊಹ್ಲಿ, ಅವರ ಟೋಪಿಯ ಮೇಲೆ 'ಡಿಯರ್ ವೈಭವ್, ವೆಲ್ ಡನ್' ಎಂದು ಬರೆದು ಆಟೋಗ್ರಾಫ್ ನೀಡುವ ಮೂಲಕ ವಿಶೇಷವಾಗಿ ಅಭಿನಂದಿಸಿದ್ದಾರೆ. ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಕೂಡ ವೈಭವ್ ಆಟವನ್ನು ಶ್ಲಾಘಿಸಿದ್ದು, ಅವರ ಬ್ಯಾಟಿಂಗ್ ನೋಡುವುದೇ ಆನಂದ ಎಂದು ಹೇಳಿದ್ದಾರೆ.
25
ಭಯವಿಲ್ಲದ ಬ್ಯಾಟಿಂಗ್ ಪ್ರದರ್ಶನ
ಆರ್‌ಸಿಬಿ ನೀಡಿದ 202 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವಾಗ ವೈಭವ್ ಕಿಂಚಿತ್ತೂ ಭಯಪಡದೆ ಬ್ಯಾಟ್ ಬೀಸಿದರು. ಅನುಭವಿ ಬೌಲರ್‌ಗಳಾದ ಭುವನೇಶ್ವರ್ ಕುಮಾರ್ ಮತ್ತು ಜೋಶ್ ಹ್ಯಾಸಲ್‌ವುಡ್ ಅವರ ಓವರ್‌ಗಳಲ್ಲಿ ರನ್ ಮಳೆ ಹರಿಸಿದರು. ಕೇವಲ 15 ಎಸೆತಗಳಲ್ಲೇ ಅರ್ಧಶತಕ ಸಿಡಿಸಿದ ವೈಭವ್, ಧ್ರುವ್ ಜುರೆಲ್ ಅವರೊಂದಿಗೆ ಸೇರಿ ಎರಡನೇ ವಿಕೆಟ್‌ಗೆ ಕೇವಲ 37 ಎಸೆತಗಳಲ್ಲಿ 108 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
35
ವೈಭವ್ ಸೂರ್ಯವಂಶಿ ಅವರ ಅದ್ಭುತ ಅಂಕಿಅಂಶ
ಪ್ರಸಕ್ತ ಐಪಿಎಲ್ ಆವೃತ್ತಿಯ 4 ಪಂದ್ಯಗಳಲ್ಲಿ ವೈಭವ್ ಈಗಾಗಲೇ 200 ರನ್ ಪೂರೈಸಿದ್ದಾರೆ. ಇದರಲ್ಲಿ ಎರಡು ಅರ್ಧಶತಕಗಳು ಸೇರಿವೆ. ವಿಶೇಷವೆಂದರೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಆರ್‌ಸಿಬಿ ವಿರುದ್ಧದ ಎರಡೂ ಪಂದ್ಯಗಳಲ್ಲಿ ಅವರು ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಅಬ್ಬರಿಸಿದ್ದಾರೆ. ಅಂತಿಮವಾಗಿ ಅವರು ಕೃನಾಲ್ ಪಾಂಡ್ಯ ಎಸೆತದಲ್ಲಿ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿ ಔಟಾದರು.
ವೈಭವ್ ಔಟಾದ ನಂತರ ಧ್ರುವ್ ಜುರೆಲ್ ಆಟ ಮುಂದುವರಿಸಿದರು. ರಾಜಸ್ಥಾನ್ ರಾಯಲ್ಸ್ ಇನ್ನು 12 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಐಪಿಎಲ್ 2026ರ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ.
55
ಆರ್‌ಸಿಬಿ ಪರ ಮಿಂಚಿದ ಬ್ಯಾಟರ್ಸ್
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಒಂದು ಹಂತದಲ್ಲಿ 125 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆದರೆ ರಜತ್ ಪಾಟಿದಾರ್ ಅವರ ಜವಾಬ್ದಾರಿಯುತ ಆಟ ಮತ್ತು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ವೆಂಕಟೇಶ್ ಅಯ್ಯರ್ (15 ಎಸೆತಗಳಲ್ಲಿ ಅಜೇಯ 29 ರನ್) ಅವರ ಹೋರಾಟದಿಂದಾಗಿ ತಂಡ 201 ರನ್‌ಗಳ ಸವಾಲಿನ ಮೊತ್ತ ಕಲೆಹಾಕಲು ಸಾಧ್ಯವಾಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.