ಇಂದೋರ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಬ್ರೇಕ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇದರ ಹೊರತಾಗಿಯೂ ಭಾರತ ಸೋಲುಂಡಿತು.
ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ರನ್‌ಗಳ ಹೊಳೆ ಹರಿಸಿದರು. ನಿರ್ಣಾಯಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿ ಮಿಂಚಿದರು.
210
ಹಲವು ಅಪರೂಪದ ದಾಖಲೆ ಬರೆದ ಕೊಹ್ಲಿ
ಈ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಲವು ಅಪರೂಪದ ದಾಖಲೆಗಳನ್ನು ತಮ್ಮದಾಗಿಸಿಕೊಂಡರು. ನ್ಯೂಜಿಲೆಂಡ್ ವಿರುದ್ಧ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ದಾಖಲೆ ಬ್ರೇಕ್ ಮಾಡಿದರು.
310
ಕಿವೀಸ್ ಎದುರು ಅತಿಹೆಚ್ಚು ಏಕದಿನ ಶತಕದ ದಾಖಲೆ
ಹೌದು, ನ್ಯೂಜಿಲೆಂಡ್ ಎದುರು ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ದಾಖಲೆ ಇದೀಗ ವಿರಾಟ್ ಕೊಹ್ಲಿ ಪಾಲಾಗಿದೆ. ಈ ಮೊದಲು ರಿಕಿ ಪಾಂಟಿಂಗ್ ಕಿವೀಸ್ ಎದುರು 50 ಏಕದಿನ ಇನ್ನಿಂಗ್ಸ್‌ಗಳನ್ನಾಡಿ 6 ಶತಕ ಸಿಡಿಸಿದ್ದರು.
ಇನ್ನು ಇದಷ್ಟೇ ಅಲ್ಲದೇ ಏಕದಿನ ಕ್ರಿಕೆಟ್‌ನಲ್ಲಿ ಮೂರನೇ ಕ್ರಮಾಂಕದಲ್ಲಿ ಅತಿಹೆಚ್ಚು ರನ್ ಬಾರಿಸಿದ್ದ ರಿಕಿ ಪಾಂಟಿಂಗ್ ದಾಖಲೆಯನ್ನೂ ಕೊಹ್ಲಿ ನುಚ್ಚುನೂರು ಮಾಡಿದರು. ಪಾಂಟಿಂಗ್ ಮೂರನೇ ಕ್ರಮಾಂಕದಲ್ಲಿ 12655 ರನ್ ಬಾರಿಸಿದ್ದರು. ಇದೀಗ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ 12,672 ರನ್ ಸಿಡಿಸಿ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ.
510
ಕಿವೀಸ್ ಎದುರು ಏಳನೇ ಏಕದಿನ ಶತಕ ಸಿಡಿಸಿದ ಕೊಹ್ಲಿ
ಆದರೆ ಇದೀಗ ವಿರಾಟ್ ಕೊಹ್ಲಿ, ಕಿವೀಸ್ ಎದುರು ಕೇವಲ 36 ಇನ್ನಿಂಗ್ಸ್‌ಗಳನ್ನಾಡಿ 7 ಶತಕ ಸಿಡಿಸುವ ಮೂಲಕ ಪಾಂಟಿಂಗ್ ಹೆಸರಿನಲ್ಲಿದ್ದ ಅಪರೂಪದ ದಾಖಲೆ ತಮ್ಮದಾಗಿಸಿಕೊಂಡರು.
610
91 ಎಸೆತಗಳಲ್ಲಿ ಶತಕ ಪೂರೈಸಿದ ಕೊಹ್ಲಿ
ಇನ್ನು ಪಂದ್ಯದ ಬಗ್ಗೆ ಹೇಳುವುದಾದರೇ, 338 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಯಿತು. ಟಾಪ್ ಆರ್ಡರ್ ವಿಫಲರಾದರೂ, ಕೊಹ್ಲಿ ಕ್ರೀಸ್‌ನಲ್ಲಿ ಗಟ್ಟಿಯಾಗಿ ನಿಂತರು. 91 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್‌ಗಳೊಂದಿಗೆ ಶತಕ ಪೂರೈಸಿದರು.
710
ಭಾರತಕ್ಕೆ ಆರಂಭಿಕ ಆಘಾತ
ಬೃಹತ್ ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ರೋಹಿತ್ ಶರ್ಮಾ (11), ಶುಭಮನ್ ಗಿಲ್ (23), ಶ್ರೇಯಸ್ ಅಯ್ಯರ್ (3) ಮತ್ತು ಕೆಎಲ್ ರಾಹುಲ್ (1) ಬೇಗನೆ ಔಟಾದರು.
810
ವಿರಾಟ್ ಕೊಹ್ಲಿ ಶತಕ ವ್ಯರ್ಥ
ಇನ್ನು ಅಂತಿಮವಾಗಿ ವಿರಾಟ್ ಕೊಹ್ಲಿ 108 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 124 ರನ್ ಬಾರಿಸಿ ಒಂಬತ್ತನೆಯವರಾಗಿ ವಿಕೆಟ್ ಒಪ್ಪಿಸಿದರು. ಕೊಹ್ಲಿ ವಿಕೆಟ್ ಪತನದೊಂದಿಗೆ ಭಾರತದ ಸರಣಿ ಸೋಲು ಖಚಿತವಾಯಿತು.
910
ಆಕರ್ಷಕ ಶತಕ ಸಿಡಿಸಿದ ಮಿಚೆಲ್, ಫಿಲಿಫ್ಸ್
ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 337 ರನ್ ಗಳಿಸಿತು. ಡೇರಿಲ್ ಮಿಚೆಲ್ (137) ಮತ್ತು ಗ್ಲೆನ್ ಫಿಲಿಪ್ಸ್ (106) ಭರ್ಜರಿ ಶತಕ ಸಿಡಿಸಿ ಮಿಂಚಿದರು.
1010
ಭಾರತದ ನೆಲದಲ್ಲಿ ಚೊಚ್ಚಲ ಏಕದಿನ ಸರಣಿ ಗೆದ್ದ ಭಾರತ
1989ರಿಂದ ಭಾರತದಲ್ಲಿ ಏಕದಿನ ಸರಣಿ ಆಡುತ್ತಿದ್ದರೂ ನ್ಯೂಜಿಲೆಂಡ್ ಒಮ್ಮೆಯೂ ಟ್ರೋಫಿ ಗೆದ್ದಿರಲಿಲ್ಲ. ಮೈಕಲ್ ಬ್ರೇಸ್‌ವೆಲ್ ನಾಯಕತ್ವದ ತಂಡ ಈಗ ಭಾರತದಲ್ಲಿ ಏಕದಿನ ಸರಣಿ ಗೆಲ್ಲುವ ಕನಸನ್ನು ನನಸಾಗಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.