ದಿಗ್ಗಜ ಕ್ರಿಕೆಟಿಗ ವಿರಾಟ್ ಕೊಹ್ಲಿ ಸದ್ಯದಲ್ಲಿಯೇ ನಿವೃತ್ತಿ ವಾಪಾಸ್ ಪಡೆದು ಟೆಸ್ಟ್ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಲಿದ್ದಾರೆ ಎನ್ನುವ ಚರ್ಚೆ ಜೋರಾಗಿತ್ತು. ಇದೀಗ ವಿಚಾರದ ಬಗ್ಗೆ ಮೊದಲ ಬಾರಿಗೆ ವಿರಾಟ್ ಕೊಹ್ಲಿ ಅಧಿಕೃತವಾಗಿ ಸ್ಪಷ್ಟನೆ ನೀಡಿದ್ದಾರೆ. ಅಷ್ಟಕ್ಕೂ ವಿರಾಟ್ ಏನಂದ್ರು ನೋಡೋಣ ಬನ್ನಿ.
ಕಳೆದ ವರ್ಷ ದಿಢೀರ್ ಆಗಿ ಟೆಸ್ಟ್‌ಗೆ ವಿದಾಯ ಘೋಷಿಸಿದ ವಿರಾಟ್ ಕೊಹ್ಲಿ
2025ರಲ್ಲಿ ಭಾರತ ತಂಡವು ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿ ಆರಂಭಕ್ಕೂ ಮೊದಲೇ ದಿಢೀರ್ ಎನ್ನುವಂತೆ ಟೆಸ್ಟ್ ಕ್ರಿಕೆಟ್ ಮಾದರಿಗೆ ವಿದಾಯ ಘೋಷಿಸಿದ್ದರು. 10 ಸಾವಿರ ಟೆಸ್ಟ್ ರನ್ ಸಮೀಪದಲ್ಲಿದ್ದ ಕೊಹ್ಲಿ ಈ ರೀತಿ ನಿರ್ಧಾರ ಕೈಗೊಂಡಿದ್ದು ಸಾಕಷ್ಟು ಅಚ್ಚರಿಗೆ ಕಾರಣವಾಗಿತ್ತು.
26
ಸೋಷಿಯಲ್ ಮೀಡಿಯಾದಲ್ಲಿ ಕೊಹ್ಲಿ ಟೆಸ್ಟ್ ಕಮ್‌ಬ್ಯಾಕ್ ಬಗ್ಗೆ ಚರ್ಚೆ
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್‌ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೇರಲು ಶುಭ್‌ಮನ್ ಗಿಲ್ ಪಡೆ ಪರದಾಡುತ್ತಿದೆ. ಇದರ ನಡುವೆ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಬಹುದು ಎನ್ನುವ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿತ್ತು. ಈ ಬಗ್ಗೆ ಮೊದಲ ಬಾರಿಗೆ ಕೊಹ್ಲಿ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
36
ಟೆಸ್ಟ್ ಕಮ್‌ಬ್ಯಾಕ್ ಬಗ್ಗೆ ಮೌನ ಮುರಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ತಾವು ಟೆಸ್ಟ್ ಕ್ರಿಕೆಟ್‌ಗೆ ವಾಪಸಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಕೊಹ್ಲಿಗೆ ‘ನೀವು ಟೆಸ್ಟ್‌ಗೆ ವಾಪಸಾಗಬಹುದು ಎನ್ನುವ ಚರ್ಚೆ ಸಾಮಾಜಿಕ ತಾಣದಲ್ಲಿ ನಡೆಯುತ್ತಿದೆಯಲ್ಲ’ ಎಂದು ಪ್ರಶ್ನೆ ಕೇಳಲಾಯಿತು. ಅದಕ್ಕೆ ಉತ್ತರಿಸಿದ ವಿರಾಟ್, ‘ಆ ಚರ್ಚೆಗೆ ನಾನು ಹೆಚ್ಚು ಮಹತ್ವ ಕೊಡುವುದಿಲ್ಲ. ಅದು ಮುಗಿದ ಅಧ್ಯಾಯ’ ಎಂದರು. One8 ಶೂ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೊಹ್ಲಿ, ಕಡಿಮೆ ಬೆಲೆಗೆ ಶೂ ಕೊಡುತ್ತೇನೆ, ಆದ್ರೆ ಟೆಸ್ಟ್ ಆಡಲ್ಲ ಎಂದು ತಮಾಷೆಯಾಗಿ ಹೇಳಿದ್ದಾರೆ.
ಟೆಸ್ಟ್ ಕ್ರಿಕೆಟ್ ತನ್ನಿಷ್ಟದ ಕ್ರಿಕೆಟ್ ಮಾದರಿ ಎಂದು ಆಗಾಗ ಹೇಳುತ್ತಲೇ ಬಂದಿರುವ ವಿರಾಟ್ ಕೊಹ್ಲಿ, ಕಳೆದ ವರ್ಷ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮುಗಿಸಿ ತವರಿಗೆ ವಾಪಾಸ್ಸಾಗಿದ್ದರು. ಆದರೆ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಲು ಕೆಲವೇ ದಿನಗಳು ಇರುವಾಗ ಟೆಸ್ಟ್ ಕ್ರಿಕೆಟ್‌ಗೆ ದಿಢೀರ್ ಎನ್ನುವಂತೆ ವಿದಾಯ ಘೋಷಿಸಿದ್ದರು.
56
ಭಾರತದ ನಾಲ್ಕನೇ ಗರಿಷ್ಠ ಟೆಸ್ಟ್ ರನ್ ಸರದಾರ ವಿರಾಟ್ ಕೊಹ್ಲಿ
ಭಾರತ ಪರ 123 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 46.85ರ ಸರಾಸರಿಯಲ್ಲಿ 30 ಶತಕ ಹಾಗೂ 31 ಅರ್ಧಶತಕ ಸಹಿತ 9,230 ರನ್ ಸಿಡಿಸಿದ್ದಾರೆ. ಅಜೇಯ 254 ರನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಕೊಹ್ಲಿಯ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿಕೊಂಡಿದೆ. ಇದಷ್ಟೇ ಅಲ್ಲದೇ ಸಚಿನ್ ತೆಂಡೂಲ್ಕರ್(15,921), ರಾಹುಲ್ ದ್ರಾವಿಡ್(13,265) ಹಾಗೂ ಸುನಿಲ್ ಗವಾಸ್ಕರ್(10,122) ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕೊಹ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.
66
ಭಾರತದ ಯಶಸ್ವಿ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ ಭಾರತ ಟೆಸ್ಟ್ ಕ್ರಿಕೆಟ್ ಕಂಡಂತಹ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡವು 68 ಟೆಸ್ಟ್ ಪಂದ್ಯಗಳನ್ನಾಡಿ 40 ಗೆಲುವುಗಳನ್ನು ದಾಖಲಿಸಿದೆ. ಅಂತಾರಾಷ್ಟ್ರೀಯ ಟಿ20 ಹಾಗೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವ ವಿರಾಟ್ ಕೊಹ್ಲಿ, ಇದೀಗ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಮಾತ್ರ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಸದ್ಯ ಕೊಹ್ಲಿ ಮುಂಬರುವ ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.