ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ರಿಸಲ್ಟ್ ಪ್ರಕಟ; ಪಾಸೋ? ಫೇಲೋ?

Published : Jun 23, 2026, 11:30 AM IST

Virat Kohli Clears Fitness Test ಟೀಂ ಇಂಡಿಯಾ, ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸಕ್ಕೆ ಸಜ್ಜಾಗಿದೆ. ಇದೀಗ ವಿರಾಟ್ ಕೊಹ್ಲಿಯ ಫಿಟ್‌ನೆಸ್ ಟೆಸ್ಟ್ ಫಲಿತಾಂಶ ಬಹಿರಂಗಗೊಂಡಿದೆ. ಅಷ್ಟಕ್ಕೂ ಕೊಹ್ಲಿ ಈ ಫಿಟ್ನೆಸ್ ಟೆಸ್ಟ್‌ ಪಾಸಾಗಿದ್ದಾರೋ? ಫೇಲಾಗಿದ್ದಾರೋ ಎನ್ನುವ ಕುತೂಹಲಕ್ಕೆ ಇಲ್ಲಿದೆ ಉತ್ತರ. 

PREV
16
2026ರ ಐಪಿಎಲ್ ವೇಳೆ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಕೊಹ್ಲಿ

19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ವೇಳೆಯಲ್ಲಿ ಆರ್‌ಸಿಬಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಹೀಗಾಗಿ ತವರಿನಲ್ಲೇ ನಡೆದ ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಿಂದ ವಿರಾಟ್ ಕೊಹ್ಲಿ ಹೊರಬಿದ್ದಿದ್ದರು.

26
ಷರತ್ತಿನ ಮೇರೆಗೆ ಟೀಂ ಇಂಡಿಯಾಗೆ ಸೆಲೆಕ್ಟ್ ಆಗಿದ್ದ ಕೊಹ್ಲಿ

ಇನ್ನು ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಷರತ್ತಿನ ಮೇರೆಗೆ ವಿರಾಟ್ ಕೊಹ್ಲಿಯನ್ನು ಬಿಸಿಸಿಐ ಆಯ್ಕೆ ಸಮಿತಿಯು ಆಯ್ಕೆ ಮಾಡಿತ್ತು. ಇಂಗ್ಲೆಂಡ್ ಏಕದಿನ ಸರಣಿ ಆಡಬೇಕಿದ್ದರೇ ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ಪಾಸ್ ಮಾಡಬೇಕಿತ್ತು.

36
ಕೊಹ್ಲಿ ಫಿಟ್ನೆಸ್ ಪರೀಕ್ಷೆ ಪಾಸ್

ಇದೀಗ ವಿರಾಟ್ ಕೊಹ್ಲಿ ಜೂನ್ 22ರಂದು ಬೆಂಗಳೂರಿನ ಸೆಂಟರ್‌ ಆಫ್ ಎಕ್ಸಲೆನ್ಸ್‌ನಲ್ಲಿ ಫಿಟ್‌ನೆಸ್ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಇದೀಗ ವಿರಾಟ್ ಕೊಹ್ಲಿ ಫಿಟ್‌ನೆಸ್ ಪರೀಕ್ಷೆ ಪಾಸ್ ಮಾಡಿದ್ದು, ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳ ಸರಣಿಯಲ್ಲಿ ಕಿಂಗ್ ಕೊಹ್ಲಿ ಆಡುವುದು ಕನ್ಫರ್ಮ್ ಆಗಿದೆ. ಈ ಸುದ್ದಿ ಭಾರತ ಏಕದಿನ ತಂಡಕ್ಕೆ ಮತ್ತಷ್ಟು ಬಲ ತಂದುಕೊಟ್ಟಿದೆ.

46
2027ರ ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ

ಭಾರತ ತಂಡವು, ಇಂಗ್ಲೆಂಡ್ ಎದುರಿನ ಸರಣಿಯಿಂದಲೇ 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ತಯಾರಿ ಆರಂಭಿಸಲಿದೆ. 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾ ಆತಿಥ್ಯ ವಹಿಸಿವೆ. 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸುತ್ತಿನಲ್ಲಿ ಮುಗ್ಗರಿಸಿದ್ದ ಭಾರತ ತಂಡವು, ಈ ಬಾರಿ ಶತಾಯಗತಾಯ 2027ರ ಏಕದಿನ ವಿಶ್ವಕಪ್ ಗೆಲ್ಲಲು ಪಣ ತೊಟ್ಟಿದೆ.

56
ಭರ್ಜರಿ ಲಯದಲ್ಲಿರುವ ಟೀಂ ಇಂಡಿಯಾ

ಇತ್ತೀಚೆಗಷ್ಟೇ ನಡೆದ ಆಫ್ಘಾನಿಸ್ತಾನ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಟೀಂ ಇಂಡಿಯಾ 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್ ಮಾಡಿತ್ತು. ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಸೇರಿದಂತೆ ಹಲವು ಆಟಗಾರರು ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇದೀಗ ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ 3 ವರ್ಷಗಳ ಬಳಿಕ ಏಕದಿನ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಇದೀಗ ಕೊಹ್ಲಿ ಸೇರ್ಪಡೆ ಭಾರತ ತಂಡಕ್ಕೆ ಆನೆ ಬಲ ತಂದುಕೊಟ್ಟಿದೆ.

66
ಇಂಗ್ಲೆಂಡ್ ಎದುರಿನ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ:

ಶುಭ್‌ಮನ್ ಗಿಲ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್(ಉಪನಾಯಕ), ಕೆ ಎಲ್ ರಾಹುಲ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ದ್ ಕೃಷ್ಣ, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಗುರ್ನೂರ್ ಬ್ರಾರ್.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories