ವಿರಾಟ್ ಕೊಹ್ಲಿಗೆ ಬಿತ್ತು ಬಲವಾದ ದಂಡದ ಬರೆ; ನಿಷೇಧದ ಭೀತಿಯಲ್ಲಿ ಕಿಂಗ್‌ ಕೊಹ್ಲಿ..!

Published : Apr 25, 2023, 04:03 PM IST

ಬೆಂಗಳೂರು(ಏ.25): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಸತತ ಎರಡು ಗೆಲುವು ದಾಖಲಿಸುವ ಮೂಲಕ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಅದರೆ ಇದೇ ವೇಳೆ ವಿರಾಟ್ ಕೊಹ್ಲಿ, ಇನ್ನೊಂದು ತಪ್ಪು ಮಾಡಿದರೆ ನಿಷೇಧದ ಶಿಕ್ಷೆಗೆ ಒಳಗಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ  

PREV
17
ವಿರಾಟ್ ಕೊಹ್ಲಿಗೆ ಬಿತ್ತು ಬಲವಾದ ದಂಡದ ಬರೆ; ನಿಷೇಧದ ಭೀತಿಯಲ್ಲಿ ಕಿಂಗ್‌ ಕೊಹ್ಲಿ..!

ಮಾರ್ಚ್‌ 23ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ಎದುರಿನ ಪಂದ್ಯದಲ್ಲಿ ಆರ್‌ಸಿಬಿ ತಂಡವು 7 ರನ್‌ಗಳ ರೋಚಕ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಸತತ ಎರಡನೇ ಜಯ ಸಾಧಿಸಿದೆ. 
 

27

ಇದು 16ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ದಾಖಲಿಸಿದ 4ನೇ ಗೆಲುವಾಗಿದ್ದು, ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.
 

37

ಇನ್ನು ವಿರಾಟ್ ಕೊಹ್ಲಿ, ಹಂಗಾಮಿ ನಾಯಕರಾಗಿ ಕೆಲ ಪಂದ್ಯಗಳ ಮಟ್ಟಿಗೆ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಮುನ್ನಡೆಸುತ್ತಿದ್ದು, ರಾಜಸ್ಥಾನ ರಾಯಲ್ಸ್ ಎದುರಿನ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿ ಭಾರೀ ತಂಡ ತೆತ್ತಿದ್ದಾರೆ.
 

47

ಹೌದು, ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ಬಾರಿಗೆ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿ ಐಪಿಎಲ್‌ ನೀತಿ ಸಂಹಿತೆ ಉಲ್ಲಂಘಿಸಿದೆ. ಹೀಗಾಗಿ ನಾಯಕರಾಗಿದ್ದ ವಿರಾಟ್ ಕೊಹ್ಲಿಗೆ 24 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ.

57

ಇನ್ನು ರಾಜಸ್ಥಾನ ರಾಯಲ್ಸ್ ಎದುರಿನ ಪಂದ್ಯದಲ್ಲಿ ಕಣಕ್ಕಿಳಿದ ಆರ್‌ಸಿಬಿ ತಂಡದ ಇಂಪ್ಯಾಕ್ಟ್‌ ಪ್ಲೇಯರ್ ಸೇರಿದಂತೆ ಉಳಿದೆಲ್ಲಾ ಆಟಗಾರರಿಗೆ ಸ್ಲೋ ಓವರ್‌ ರೇಟ್‌ ಹೊಂದಿದ ತಪ್ಪಿಗಾಗಿ ತಲಾ 6 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ. 
 

67

ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡನೇ ಬಾರಿಗೆ ನಿಧಾನಗತಿಯ ಬೌಲಿಂಗ್ ಮಾಡುವ ಮೂಲಕ ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ. ಈ ಹಿಂದೆ ಮುಂಬೈ ಇಂಡಿಯನ್ಸ್ ಎದುರಿನ ಮೊದಲ ಪಂದ್ಯದಲ್ಲಿ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು ನಿಧಾನಗತಿಯಲ್ಲಿ ಬೌಲಿಂಗ್‌ ಮಾಡಿತ್ತು. ಆಗ ಫಾಫ್‌ 12 ಲಕ್ಷ ರುಪಾಯಿ ದಂಡ ತೆತ್ತಿದ್ದರು.
 

77

ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡವು ಮುಂಬರುವ ಪಂದ್ಯಗಳಲ್ಲಿ ಇದೇ ರೀತಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದರೆ, ಅದು ಮೂರನೇ ಬಾರಿಗೆ ಐಪಿಎಲ್‌ ನೀತಿ ಸಂಹಿತೆ ಉಲ್ಲಂಘಿಸಿದಂತಾಗುತ್ತದೆ. ಆಗ ನಾಯಕರಾದವರಿಗೆ 30 ಲಕ್ಷ ರುಪಾಯಿ ದಂಡ ಹಾಗೂ ಮುಂದಿನ ಒಂದು ಪಂದ್ಯದ ಮಟ್ಟಿಗೆ ಅವರನ್ನು ತಂಡದಿಂದ ಬ್ಯಾನ್ ಮಾಡಲಾಗುತ್ತದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories