ರಣ್ವೀರ್ ಹಿಂದಿಕ್ಕಿದ ವಿರಾಟ್ ಕೊಹ್ಲಿ; ಗಗನ ಮುಟ್ಟಿದ ಕಿಂಗ್ ಕೊಹ್ಲಿ ಬ್ರ್ಯಾಂಡ್ ವ್ಯಾಲ್ಯೂ..!

First Published | Jun 19, 2024, 4:23 PM IST

ಬೆಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಆರ್‌ಸಿಬಿ ತಂಡದ ಆಪತ್ಬಾಂಧವ ಎನಿಸಿಕೊಂಡಿರುವ ವಿರಾಟ್ ಕೊಹ್ಲಿ, ಜಗತ್ತಿನ ತಾರಾ ಸೆಲಿಬ್ರಿಟಿಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಇದೀಗ ವಿರಾಟ್ ಕೊಹ್ಲಿ, ಬಾಲಿವುಡ್ ತಾರೆ ರಣ್ವೀರ್ ಸಿಂಗ್ ಅವರನ್ನು ಹಿಂದಿಕ್ಕಿ ದೇಶದ ನಂಬರ್ 1 ಬ್ರ್ಯಾಂಡ್ ವ್ಯಾಲ್ಯೂ ಹೊಂದಿದ ಸೆಲಿಬ್ರಿಟಿ ಎನಿಸಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ವಿರಾಟ್ ಕೊಹ್ಲಿ ಜಗತ್ತಿನ ಅತ್ಯಂತ ಪ್ರಖ್ಯಾತ ಅಥ್ಲೀಟ್ ಎನ್ನುವುದನ್ನು ನಾವು ನಿಮಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಜಗತ್ತಿನ ಮೂಲೆ ಮೂಲೆಯಲ್ಲಿರುವ ಕೋಟ್ಯಾಂತರ ಅಭಿಮಾನಿಗಳು ವಿರಾಟ್ ಕೊಹ್ಲಿಯನ್ನು ಫಾಲೋ ಮಾಡುತ್ತಿದ್ದಾರೆ.

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಫುಟ್ಬಾಲ್ ದಂತಕಥೆಗಳಾದ ಕ್ರಿಸ್ಟಿಯಾನೋ ರೊನಾಲ್ಡೋ ಹಾಗೂ ಲಿಯೋನೆಲ್ ಮೆಸ್ಸಿ ಬಳಿಕ ಜಗತ್ತಿನ ಅತಿಹೆಚ್ಚು ಫಾಲೋವರ್ಸ್ ಹೊಂದಿದ ಅಥ್ಲೀಟ್ ಎಂದರೆ ಅದು ವಿರಾಟ್ ಕೊಹ್ಲಿ.

Tap to resize

ಇನ್ನು ವಿರಾಟ್ ಕೊಹ್ಲಿ, ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಅಕೌಂಟ್‌ನಿಂದ ವಿವಿಧ ಬ್ರ್ಯಾಂಡ್‌ಗಳನ್ನು ಪ್ರಮೋಷನ್ ಮಾಡಲು ದೊಡ್ಡ ಮೊತ್ತದ ಹಣವನ್ನು ಜೇಬಿಗಿಳಿಸಿಕೊಳ್ಳುವುದು ಗುಟ್ಟಾಗಿಯೇನೂ ಉಳಿದಿಲ್ಲ.

ಇದೀಗ ಕನ್ಸಲ್ಟಿಂಗ್ ಫರ್ಮ್‌ ಆಗಿರುವ ಕ್ರೊಲ್‌(Kroll) ವರದಿಯ ಪ್ರಕಾರ, 2023ನೇ ಸಾಲಿನ ಅತ್ಯಂತ ಮೌಲ್ಯಯುತ ಸೆಲಿಬ್ರಿಟಿ ಎನ್ನುವ ಹಿರಿಮೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

ಈ ಮೊದಲು 2022ನೇ ಸಾಲಿನ ಅತ್ಯಂತ ಮೌಲ್ಯಯುತ ಸೆಲಿಬ್ರಿಟಿ ಎನ್ನುವ ಖ್ಯಾತಿಗೆ ಬಾಲಿವುಡ್ ನಟ ರಣ್ವೀರ್ ಸಿಂಗ್ ಪಾತ್ರರಾಗಿದ್ದಾರೆ. ಇದೀಗ ಕೊಹ್ಲಿ, ರಣ್ವೀರ್ ಸಿಂಗ್ ಅವರನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾಗಿದ್ದಾರೆ.

ನೂತನ ವರದಿಯ ಪ್ರಕಾರ, 2023ರಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಒಟ್ಟು ಬ್ರ್ಯಾಂಡ್ ವ್ಯಾಲ್ಯೂ 227.9 ಮಿಲಿಯನ್ ಡಾಲರ್. ಭಾರತೀಯ ರುಪಾಯಿ ಲೆಕ್ಕದಲ್ಲಿ 1,899.58 ಕೋಟಿ ರುಪಾಯಿಗಳು.

ಇನ್ನು ಬಾಲಿವುಡ್ ನಟ ರಣ್ವೀರ್ ಸಿಂಗ್ ಅವರ 2023ರ ಬ್ರ್ಯಾಂಡ್ ವ್ಯಾಲ್ಯೂ 203.1 ಮಿಲಿಯನ್ ಡಾಲರ್ ಆಗಿದೆ. ಅಂದರೆ ಭಾರತೀಯ ರುಪಾಯಿ ಲೆಕ್ಕಾಚಾರದಲ್ಲಿ 1,692.99 ಕೋಟಿ ರುಪಾಯಿಗಳಾಗಿವೆ.

ಇನ್ನು ಮೋಸ್ಟ್ ಬ್ರ್ಯಾಂಡ್ ವ್ಯಾಲ್ಯೂ ಹೊಂದಿದ ಸೆಲಿಬ್ರಿಟಿಗಳ ಪಟ್ಟಿಯಲ್ಲಿ ಶಾರುಕ್ ಖಾನ್ ಮೂರನೇ ಸ್ಥಾನದಲ್ಲಿದ್ದಾರೆ. ಕಿಂಗ್ ಖಾನ್ 2023ರ ಬ್ರ್ಯಾಂಡ್ ವ್ಯಾಲ್ಯೂ 120.7 ಮಿಲಿಯನ್ ಡಾಲರ್. ಆದರೆ ಭಾರತೀಯ ರುಪಾಯಿ ಲೆಕ್ಕಾಚಾರದಲ್ಲಿ 1,006,32 ಕೋಟಿ ರುಪಾಯಿಗಳು.

Latest Videos

click me!