Virat Kohli Injury Update ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಟೀಂ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಳ್ಳುವುದು ಮತ್ತಷ್ಟು ತಡವಾಗುವ ಸಾಧ್ಯತೆಯಿದೆ. ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಯಿಂದ ಹೊರಗುಳಿದಿರುವ ಕೊಹ್ಲಿ, ಮತ್ತೊಂದು ಮಹತ್ವದ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ.
ಐಪಿಎಲ್ ಫೈನಲ್ ಪಂದ್ಯದ ವೇಳೆ ಮಂಡಿ ಕೆಳಗಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ತಾರಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಮುಂದಿನ ತಿಂಗಳು ನಡೆಯಲಿರುವ ಇಂಗ್ಲೆಂಡ್ ಸರಣಿಯಲ್ಲೂ ಆಡುವುದು ಅನುಮಾನ ಎನ್ನುವ ಸುದ್ದಿ ಹೊರ ಬಿದ್ದಿದೆ.
26
ಕೊಹ್ಲಿಗೆ ಕನಿಷ್ಠ ಆರು ವಾರಗಳ ರೆಸ್ಟ್
ವಿರಾಟ್ ಕೊಹ್ಲಿ ಅಫ್ಘಾನಿಸ್ತಾನ ವಿರುದ್ಧದ ಸರಣಿ ಆಡುವುದಿಲ್ಲ. ವರದಿಗಳ ಪ್ರಕಾರ, ಕೊಹ್ಲಿ ಗಾಯದಿಂದ ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಬೇಕಿದೆ. ಕನಿಷ್ಠ 6 ವಾರಗಳಾದರೂ ತಂಡದಿಂದ ಹೊರಗುಳಿಯಬೇಕಾಗುತ್ತದೆ. ಹೀಗಾಗಿ ಅವರು ಅಪ್ಘಾನಿಸ್ತಾನ ಸರಣಿ ಮಾತ್ರವಲ್ಲದೇ ಇಂಗ್ಲೆಂಡ್ ಸರಣಿಯಲ್ಲಿ ಕಣಕ್ಕಿಳಿಯುವುದು ಬಹುತೇಕ ಅನುಮಾನ ಎನ್ನಲಾಗಿದೆ.
36
ಜುಲೈ 14ರಿಂದ ಇಂಗ್ಲೆಂಡ್ ಎದುರಿನ ಏಕದಿನ ಸರಣಿ ಆರಂಭ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಮುಂಬರುವ ಜುಲೈ 14ರಿಂದ ಬರ್ಮಿಂಗ್‌ಹ್ಯಾಮ್‌ನಲ್ಲಿ ಆರಂಭವಾಗಲಿದೆ. ಈ ಮಹತ್ವದ ಸರಣಿಯಿಂದಲೂ ಕೊಹ್ಲಿ ಹೊರಗುಳಿಯುವ ಸಾಧ್ಯತೆ ದಟ್ಟವಾಗಿದೆ.
ರೋಹಿತ್ ಶರ್ಮಾ ಬಿಸಿಸಿಐ ಸೆಂಟರ್ ಆಫ್ ಎಕ್ಸ್‌ಲೆನ್ಸ್‌ಗೆ ಫಿಟ್ನೆಸ್ ಪರೀಕ್ಷೆ
ಮತ್ತೊಂದೆಡೆ ಆಫ್ಘನ್ ಸರಣಿಗೆ ಆಯ್ಕೆಯಾಗಿರುವ ರೋಹಿತ್ ಶರ್ಮಾ ಇನ್ನೂ ಪೂರ್ಣ ಫಿಟ್ ಆಗಿಲ್ಲ. ಅವರು ಜೂನ್ 8 ರಿಂದ 3 ದಿನ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸ್‌ಲೆನ್ಸ್‌ಗೆ ಫಿಟ್ನೆಸ್ ಪರೀಕ್ಷೆಗೆ ಹಾಜರಾಗಲಿದ್ದಾರೆ. ಆ ವರದಿ ಆಧಾರದಲ್ಲಿ ಅವರು ತಂಡ ಕೂಡಿಕೊಳ್ಳುವ ಬಗ್ಗೆ ನಿರ್ಧಾರ ಆಗಲಿದೆ.
56
ಐಪಿಎಲ್ ವೇಳೆ ಗಾಯಗೊಂಡಿದ್ದ ರೋಹಿತ್ ಶರ್ಮಾ
ಇನ್ನು ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡಾ 2026ರ ಐಪಿಎಲ್ ಟೂರ್ನಿಯ ಸಂದರ್ಭದಲ್ಲಿಯೇ ಸ್ನಾಯು ಸೆಳೆತದ ನೋವಿನಿಂದ ಐಪಿಎಲ್‌ನ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದರು.
66
ರೋಹಿತ್ ಶರ್ಮಾ ಫಿಟ್ನೆಸ್ ಪಾಸಾದರಷ್ಟೇ ತಂಡದಲ್ಲಿ ಸ್ಥಾನ?
ಒಂದು ವೇಳೆ ಶರ್ಮಾ ಫಿಟ್ನೆಸ್ ಪರೀಕ್ಷೆ ಪಾಸಾದರೆ, ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿ ಆರಂಭಕ್ಕೆ ಎರಡು ಬಾಕಿ ಇರುವಾಗ ಭಾರತ ತಂಡ ಕೂಡಿಕೊಳ್ಳಲಿದ್ದಾರೆ. ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜೂನ್ 13ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.